Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆ : ಚಿತ್ರದುರ್ಗದಲ್ಲಿ ರಾಷ್ಟ್ರಧ್ವಜ ಎಲ್ಲಿ ಸಿಗುತ್ತವೆ ? ದರ ಎಷ್ಟು ? ಜಿಲ್ಲಾಧಿಕಾರಿ ದಿವ್ಯಪ್ರಭು ಮಾಹಿತಿ…!

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, ಆ.12 : ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸರ್ಕಾರದ ಸೂಚನೆಯಂತೆ ಹರ್ ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಆ. 13 ರಿಂದ 15 ರವರೆಗೆ ಹರ್ ಘರ್ ತಿರಂಗಾ ಅಭಿಯಾನವನ್ನು ಆಯೋಜಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಎಲ್ಲರಿಗೂ ಸುಲಭವಾಗಿ ರಾಷ್ಟ್ರಧ್ವಜ ಲಭ್ಯವಾಗುವಂತೆ ಮಾಡಲು ಅಗತ್ಯ ಪ್ರಮಾಣದ ರಾಷ್ಟ್ರ ಧ್ವಜಗಳನ್ನು ನಗರದ ತ.ರಾ.ಸು. ರಂಗಮಂದಿರ ಆವರಣದಲ್ಲಿರುವ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿಯಲ್ಲಿ ದಾಸ್ತಾನು ಮಾಡಿ, ಇದೇ ಕಚೇರಿಯಲ್ಲಿ ವಿತರಿಸಲಾಗುತ್ತಿದ್ದು, ಚಿತ್ರದುರ್ಗ ಜಿಲ್ಲೆಗೆ 25000 ರಾಷ್ಟ್ರಧ್ವಜ ಹಂಚಿಕೆ ಮಾಡಲಾಗಿದೆ.

ಎಲ್ಲ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯತಿಗಳ ಮೂಲಕವೂ ಸಾರ್ವಜನಿಕರಿಗೆ ರಾಷ್ಟ್ರಧ್ವಜ ಲಭ್ಯವಾಗುವಂತೆ ಮಾಡಲಾಗಿದೆ.  ಶಾಲಾ ಕಾಲೇಜುಗಳಿಗೂ ಹಂಚಿಕೆ ಮಾಡಲಾಗಿದೆ.  ಪ್ರತಿ ರಾಷ್ಟ್ರಧ್ವಜಕ್ಕೆ ರೂ. 25. 50 ದರ ನಿಗದಿಪಡಿಸಲಾಗಿದೆ.  ಹರ್ ಘರ್ ತಿರಂಗಾ ಅಭಿಯಾನವು ಪ್ರತಿಯೊಬ್ಬರಲ್ಲೂ ದೇಶಪ್ರೇಮ ಮೂಡುವಲ್ಲಿ, ಅತ್ಯಂತ ಪರಿಣಾಮಕಾರಿಯಾಗಲಿದ್ದು, ಪ್ರತಿಯೊಬ್ಬರೂ ಇದರಲ್ಲಿ ಭಾಗವಹಿಸಬೇಕು. ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಅಭಿಯಾನದಲ್ಲಿ ಪಾಲ್ಗೊಂಡು ತಮ್ಮ ತಮ್ಮ ಮನೆಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡಬೇಕು.   ಜಿಲ್ಲೆಯಲ್ಲಿ ಈ ಅಭಿಯಾನವನ್ನು ಅಭೂತಪೂರ್ವವಾಗಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಮನವಿ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಶ್ವಿನಿ ಪುನೀತ್ ರಾಜ್‍ಕುಮಾರ್ ನಿಂದಿಸಿದ ಕಿಡಿಗೇಡಿಗಳು ಈಗ ಗಪ್ ಚಿಪ್..!

ಆರ್ಸಿಬಿ ಆಟಗಾರರು ಆರಂಭದಲ್ಲಿ ಬ್ಯಾಕ್ ಟು ಬ್ಯಾಕ್ ಸೋಲುತ್ತಾ ಬಂದಿತ್ತು. ಇದು ಅಭಿಮಾನಿಗಳಿಗೆ ಸಹಜವಾಗಿಯೇ ಬೇಸರವಾಗಿತ್ತು. ಆದರೆ ಈ ಸೋಲು-ನೋವಿನ ನಡುವೆ ಯಾರೋ ಕಿಡಿಗೇಡಿಗಳು ಅಶ್ವಿನಿ ಪುನೀತ್ ರಾಜ್‍ಕುಮಾರ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಕೆಟ್ಟ

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

error: Content is protected !!