Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನೆಹರು ಕಾಲದಿಂದಲೂ ಕಾಂಗ್ರೆಸ್‍ನಲ್ಲಿ ಸಾಮಾಜಿಕ ನ್ಯಾಯದ ಪರಿಕಲ್ಪನೆಯಿದೆ : ಸಿ.ಎಸ್.ದ್ವಾರಕನಾಥ್

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆ.12  : ಕಾಂಗ್ರೆಸ್‍ನಲ್ಲಿ ಹೊಸದಾಗಿ ಆರಂಭಗೊಂಡಿರುವ ಸಾಮಾಜಿನ ನ್ಯಾಯ ಘಟಕಕ್ಕೆ ಸಣ್ಣ ಸಣ್ಣ ಸಮುದಾಯಗಳನ್ನು ಸೇರಿಸಿಕೊಂಡು ಜಿಲ್ಲಾ ಮತ್ತು ಬ್ಲಾಕ್ ಕಮಿಟಿಗಳನ್ನು ರಚಿಸುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಾಮಾಜಿಕ ನ್ಯಾಯ ಘಟಕದ ರಾಜ್ಯಾಧ್ಯಕ್ಷ ಸಿ.ಎಸ್.ಧ್ವಾರಕನಾಥ್ ಸೂಚಿಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಶನಿವಾರ ಭೇಟಿ ನೀಡಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು ನೆಹರು ಕಾಲದಿಂದಲೂ ಕಾಂಗ್ರೆಸ್‍ನಲ್ಲಿ ಸಾಮಾಜಿಕ ನ್ಯಾಯದ ಪರಿಕಲ್ಪನೆಯಿದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಆದಿವಾಸಿಗಳು, ದಲಿತರು, ಮಹಿಳೆಯರ ಮೇಲೆ ನಡೆಯುತ್ತಿರುವ ಅನ್ಯಾಯ ದಬ್ಬಾಳಿಕೆಯನ್ನು ನೋಡಿದಾಗ ಸಾಮಾಜಿಕ ನ್ಯಾಯ ಘಟಕ ಬೇಕು ಅನಿಸಿತು.

ನಾಗಪುರದಲ್ಲಿರುವ ಆರ್.ಎಸ್.ಎಸ್.ಕಚೇರಿ ಪ್ರಧಾನಿ ಮೋದಿಯನ್ನು ಆಟ ಆಡಿಸುತ್ತಿರುವುದನ್ನು ಕಂಡಾಗ ಅವರಿಗೆ ಸ್ವಂತ ಬುದ್ದಿ ಇಲ್ಲ ಎನ್ನುವುದು ಗೊತ್ತಾಗುತ್ತದೆ. ಸಂವಿಧಾನದ ಮೇಲೆ ದಾಳಿ ನಡೆಯುತ್ತಿದೆ. ತಳಸಮುದಾಯದ ಬಗ್ಗೆ ಗೌರವವಿಲ್ಲ. ಸ್ತ್ರೀ ಸಮಾನತೆ ಅವರಿಗೆ ಇಷ್ಟವಿಲ್ಲ. ಅದಕ್ಕಾಗಿ ಸಾಮಾಜಿಕ ನ್ಯಾಯ ಘಟಕ ಎಲ್ಲಾ ಜನಾಂಗದವರಿಗೆ ಸಾಮಾಜಿಕ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇನ್ನು 45 ದಿನಗಳೊಳಗೆ ಸಾಮಾಜಿಕ ನ್ಯಾಯ ಘಟಕ ಆರಂಭವಾಗಬೇಕೆಂಬ ಆದೇಶ ನೀಡಿರುವುದರಿಂದ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದೇವೆ. ಯಾವುದೇ ಜಾತಿ ಬೇಧವಿಲ್ಲದ ಎಲ್ಲರೂ ಈ ಘಟಕಕ್ಕೆ ಬರಬಹುದು. ಪಕ್ಷದಿಂದ ಹೊರಗಿರುವವರನ್ನು ಘಟಕಕ್ಕೆ ಸೆಳೆದುಕೊಂಡು
ಶೇ.50 ರಷ್ಟು ಮಹಿಳೆಯರನ್ನು ಕಡ್ಡಾಯವಾಗಿ ಘಟಕಕ್ಕೆ ಸೇರಿಸಿಕೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ತಿಳಿಸಿದರು.

ಸಾಮಾಜಿಕ ನ್ಯಾಯ ಸಮಿತಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಮನ್ ಫರ್ಜಾನ ಮಾತನಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಹೊಸದಾಗಿ ಸಾಮಾಜಿಕ ನ್ಯಾಯ ಘಟಕ ಆರಂಭಗೊಂಡಿದೆ. ಯೂರೋಪ್‍ನಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಕ್ರಾಂತಿಯಾಯಿತು. ಬಡವ-ಶ್ರೀಮಂತ, ಮೇಲು-ಕೀಳು, ಲಿಂಗ ತಾರತಮ್ಯ ನಿವಾರಣೆಗಾಗಿ ಘರ್ಷಣೆ ಆರಂಭಗೊಂಡಾಗ ಸಾಮಾಜಿಕ ನ್ಯಾಯ ಒದಗಿಸುವುದು ಬಹಳ ಮುಖ್ಯ. ರಾಜಸ್ಥಾನದ ಉದಯಪುರ್‍ನಲ್ಲಿ ನಡೆದ ದೊಡ್ಡ ಚಿಂತನಾ ಶಿಬಿರದಲ್ಲಿ ರಾಹುಲ್‍ಗಾಂಧಿ ದೇಶಾದ್ಯಂತ ರಚನೆಯಾಗಬೇಕೆಂದು ಸೂಚಿಸಿದರು.
ಹಾಗಾಗಿ ಈ ಘಟಕಕ್ಕೆ ಒತ್ತು ಕೊಡಬೇಕಿದೆ ಎಂದು ನುಡಿದರು.

ಕಾಂಗ್ರೆಸ್‍ಗೆ ಸಾಮಾಜಿಕ ನ್ಯಾಯದಲ್ಲಿ ಬದ್ದತೆಯಿದೆ. ಸಿ.ಎಸ್.ಧ್ವಾರಕನಾಥ್‍ರವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದಾಗ ಕೆಳವರ್ಗದ ಜನರ ಸ್ಥಿತಿಗತಿಯನ್ನು ಅಧ್ಯಯನ ನಡೆಸಿದ್ದಾರೆ. ಅಸಮಾನತೆ ದೇಶದಲ್ಲಿ ತಾಂಡವವಾಡುತ್ತಿದೆ. ಜಿಲ್ಲಾ ಸಮಿತಿ ರಚಿಸುವುದು ಸಾಮಾಜಿಕ ನ್ಯಾಯದ ಉದ್ದೇಶ. ಬ್ಲಾಕ್ ಹಂತದಲ್ಲಿಯೂ ಕೆಲಸ ಮಾಡಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಬೇಕು ಎಂದು ಕರೆ ನೀಡಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಾಮಾಜಿಕ ನ್ಯಾಯ ಘಟಕದ ಪ್ರಧಾನ ಕಾರ್ಯದರ್ಶಿ ನಾಗರಾಜ್, ರಾಜ್ಯ ಉಪಾಧ್ಯಕ್ಷೆ ಪದ್ಮ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷ ರವಿಕುಮಾರ್, ಕಾನೂನು ವಿಭಾಗದ ಅಧ್ಯಕ್ಷ ಸುದರ್ಶನ್, ಪದವೀಧರ ವಿಭಾಗದ ಅಧ್ಯಕ್ಷ ಮುದಸಿರ್‍ನವಾಜ್, ಕೆ.ಪಿ.ಸಿ.ಸಿ. ವಕ್ತಾರ ಬಾಲಕೃಷ್ಣಸ್ವಾಮಿ, ಇಂಟೆಕ್ ವಿಭಾಗದ ಅಧ್ಯಕ್ಷ ಅಶೋಕ್ ನಾಯ್ಡು, ಕುಶಲ ಕರ್ಮಿ ವಿಭಾಗದ ಪ್ರಸನ್ನಕುಮಾರ್ ವೇದಿಕೆಯಲ್ಲಿದ್ದರು.
ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಅಬ್ದುಲ್ಲಾ, ಸೈಯದ್ ಅಲ್ಲಾಭಕ್ಷಿ, ಚಾಂದ್‍ಪೀರ್, ಸೇವಾದಳದ ಇಂದಿರಾ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment