Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಸೇರಿದಂತೆ ಹಲವು ಗ್ರಾಮಗಳಿಗೆ ಸರಬರಾಜು ಆಗುತ್ತಿದ್ದ ಸೂಳೆಕೆರೆ ನೀರು ಸ್ಥಗಿತ..!

Facebook
Twitter
Telegram
WhatsApp

 

 

ದಾವಣೆಗೆರೆ ಜಿಲ್ಲೆಯ ಸೂಳೆಕೆರೆ ಏಷ್ಯಾದ ಎರಡನೇ ದೊಡ್ಡ ಕೆರೆ. ಈ ಕೆರೆಯ ನೀರನ್ನು ಸುಮಾರು ಹಳ್ಳಿಗಳಿಗೆ ಬಿಡುಗಡೆ ಮಾಡಲಾಗುತ್ತಿತ್ತು. ಆದರೆ ಇದೀಗ ನೀರು ಕುಡಿಯಲು ಯೋಗ್ಯವಲ್ಲದ ಕಾರಣದಿಂದಾಗಿ ಸ್ಥಗಿತಗೊಳಿಸಲಾಗಿದೆ. ಇನ್ನು ಈ ಕೆರೆಯಲ್ಲಿ ನಾಲ್ಕು ಲಕ್ಷ ಲೀಟರ್ ನೀರು ಶೇಖರಣೆ ಮಾಡುವ ಸಾಮರ್ಥ್ಯ ಹೊಂದಿದೆ.

ಶುದ್ಧೀಕರಣ ಘಟಕದಲ್ಲಿರುವ ಫಿಲ್ಟರ್ ಹಾಳಾಗಿತ್ತು. ಈ ಹಿನ್ನೆಲೆ ಒಮ್ಮೊಮ್ಮೆ ನೀಲಿ, ಕೆಂಪು ಹೀಗೆ ಬೇರೆ ಬೇರೆ ಬಣ್ಣಕ್ಕೆ ನೀರು ತಿರುಗಿತ್ತು. ಜನ ಕೂಡ ಇದರ ಬಗ್ಗೆ ಸಾಕಷ್ಟು ಸಲ ದೂರು ನೀಡಿದ್ದರು. ಈಗ ಆ ನೀರನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಸದ್ಯಕ್ಕೆ ಈ ನೀರು ಕುಡಿಯಲು ಯೋಗ್ಯವಲ್ಲ ಎಂಬ ವರದಿ ಬಂದಿದೆ. ಹೀಗಾಗಿ ಸರಬರಾಜು ಮಾಡುವುದನ್ನು ನಿಲ್ಲಿಸಲಾಗಿದೆ.

ಮೂರು ತಿಂಗಳ ಕಾಲ ನೀರನ್ನು ಸರಬರಾಜು‌ ಮಾಡುವುದನ್ನು ನಿಲ್ಲಿಸಲಾಗಿದೆ. ದುರಸ್ಥಿಗೊಳಿಸಿದ ಬಳಿಕ ಮತ್ತೆ ಪ್ರಯೋಗಾಲಯಕ್ಕೆ ನೀರು ಕಳುಹಿಸಲಾಗುತ್ತದೆ. ಆ ಬಳಿಕ ಬರುವ ವರದಿಯ ಮೇಲೆ ಮತ್ತೆ ನೀರನ್ನು ಸರಬರಾಜು ಮಾಡಲಾಗುತ್ತದೆ. ಹೊಳಲ್ಕೆರೆ, ಜಗಳೂರು, ಚಿತ್ರದುರ್ಗಕ್ಕೆ ಪೂರೈಕೆಯಾಗುತ್ತಿತ್ತು. ಈ ಸಂಬಂಧ ದಾವಣಗೆರೆ ಜಿಲ್ಲಾ ಆರೋಗ್ಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಸುರಿಯುತ್ತಿರುವ ಮಳೆ : ತಂಪಾದ ಇಳೆ

  ಸುದ್ದಿಒನ್, ಚಿತ್ರದುರ್ಗ, ಮೇ.10 : ಮಳೆಗಾಗಿ ಕಾದಿದ್ದ ಕೋಟೆ ನಾಡಿನ ಜನತೆಗೆ ಮಳೆರಾಯ ಕೃಪೆ ತೋರಿದ್ದಾನೆ. ಬುಧವಾರ ಸ್ವಲ್ಪ ಮಳೆ ಬಂದಿತ್ತು. ಆದರೆ ಇಂದು (ಶುಕ್ರವಾರ) ರಾತ್ರಿ 10 ಗಂಟೆ ಸುಮಾರಿಗೆ ಮಳೆ

ಹಿರಿಯೂರಿನಲ್ಲಿ ವಕೀಲ ದೇವರಾಜೆಗೌಡ ಬಂಧನ …!

  ಸುದ್ದಿಒನ್, ಹಿರಿಯೂರು, ಮೇ. 10  : ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ  ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಅವರನ್ನು ಹಿರಿಯೂರು ಗ್ರಾಮಾಂತರ ಪೋಲಿಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ. ಹೊಳೆನರಸೀಪುರದಲ್ಲಿ

ಚಳ್ಳಕೆರೆ | ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢಶಾಲೆಗೆ SSLC ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

  ಸುದ್ದಿಒನ್, ಚಳ್ಳಕೆರೆ, ಮೇ.10 : 2024 ನೇ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಪ್ರಕಟವಾಗಿದ್ದು, ತಾಲ್ಲೂಕಿನ ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢ ಶಾಲೆಗೆ  ಶೇಕಡ 78.4.0 ರಷ್ಟು ಫಲಿತಾಂಶ

error: Content is protected !!