Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನರ ಆರೋಗ್ಯ ಕಾಪಾಡುವುದು ಸರ್ಕಾರದ ಜವಾಬ್ದಾರಿ : ಇದಕ್ಕಾಗಿ ಎಲ್ಲರ ಸಹಕಾರ ಅಗತ್ಯ : ಸಚಿವ ಡಿ. ಸುಧಾಕರ್

Facebook
Twitter
Telegram
WhatsApp

ಜನರ ಆರೋಗ್ಯ ಕಾಪಾಡುವುದು ಸರ್ಕಾರದ ಜವಾಬ್ದಾರಿ : ಇದಕ್ಕಾಗಿ ಎಲ್ಲರ ಸಹಕಾರ ಅಗತ್ಯ : ಸಚಿವ ಡಿ. ಸುಧಾಕರ್

It is the government’s responsibility to protect the health of the people: for this everyone’s cooperation is necessary: ​​Minister D. Sudhakar

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

*  ಶುದ್ಧ ಕುಡಿಯುವ ನೀರು, ವೈಯಕ್ತಿಕ ಸ್ವಚ್ಛತೆ, ನೈರ್ಮಲ್ಯ ಪಾಲನೆ ಕುರಿತು ಅರಿವು : ಬೃಹತ್ ಜನಜಾಗೃತಿ ಸಪ್ತಾಹಕ್ಕೆ ಸಚಿವ ಡಿ. ಸುಧಾಕರ್ ಚಾಲನೆ

* ಜಿಲ್ಲೆಯ ಮಟ್ಟಿಗೆ ಇದೊಂದು ವಿಶೇಷ ಕಾರ್ಯಕ್ರಮವಾಗಿದೆ.

ಸುದ್ದಿಒನ್, ಚಿತ್ರದುರ್ಗ,ಆ.14: ಜಿಲ್ಲೆಯ ಜನರಲ್ಲಿ ಶುದ್ಧ ಕುಡಿಯುವ ನೀರು ಮತ್ತು ವೈಯಕ್ತಿಕ ಸ್ವಚ್ಛತೆ ಹಾಗೂ ಪರಿಸರ ನೈರ್ಮಲ್ಯ ಪಾಲನೆ ಕುರಿತು ಆ.14 ರಿಂದ ಒಂದು ವಾರಗಳ ಕಾಲ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿರುವ ಬೃಹತ್ ಜನ ಜಾಗೃತಿ ಸಪ್ತಾಹ ಕಾರ್ಯಕ್ರಮಕ್ಕೆ ಸೋಮವಾರ ಚಿತ್ರದುರ್ಗ ನಗರದ ಒನಕೆ ಓಬವ್ವ ವೃತ್ತದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಚಾಲನೆ ನೀಡಿದರು.

ಸೋಮವಾರ ಮುಂಜಾನೆ 9 ಗಂಟೆಯಿಂದಲೇ ನಗರದ ವಿವಿಧ ಭಾಗಗಳಿಂದ ಸಾಲು ಸಾಲಾಗಿ ಆಗಮಿಸಿದ ವಿದ್ಯಾರ್ಥಿಗಳು ಓನಕೆ ಓಬ್ಬವ್ವ ವೃತ್ತದಲ್ಲಿ ಸಂಗಮಿಸಿದರು. ವೀರಗಾಸೆ, ಪಟ ಕುಣಿತ, ಬೊಂಬೆ ಕುಣಿತ, ಹಲಗೆ ವಾದನ ಮುಂತಾದ ಕಲಾ ತಂಡಗಳು ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮೆರಗು ಹೆಚ್ಚಿಸಿದವು.  ಪೂರ್ಣಕುಂಭ ಹೊತ್ತ ಮಹಿಳೆಯರು ಓಬವ್ವ ವೃತ್ತದಲ್ಲಿ ಮುಂಚೂಣಿಯಲ್ಲಿದ್ದು, ಜಾಥಾಕ್ಕೆ ಯಶಸ್ಸು ಕೋರಲು ಶುಭ ಕೋರುವಂತೆ ಬೆಳ್ಳಂ ಬೆಳಿಗ್ಗೆ ದುರ್ಗದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು.

ಬೃಹತ್ ಜನ ಜಾಗೃತಿ ಜಾಥಾಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದ ಯೋಜನೆ ಹಾಗೂ ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಪರಿಸರ ನೈರ್ಮಲ್ಯ, ಶುದ್ಧ ಕುಡಿಯುವ ನೀರು ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳುವ ಕುರಿತು ಹಮ್ಮಿಕೊಂಡಿರುವ ಬೃಹತ್ ಜನ ಜಾಗೃತಿ ಜಾಥಾ ಜಿಲ್ಲೆಯ ಮಟ್ಟಿಗೆ ಇದೊಂದು ವಿಶೇಷ ಕಾರ್ಯಕ್ರಮವಾಗಿದೆ.

ಕೆಲವು ದಿನಗಳ ಹಿಂದೆ ಜಿಲ್ಲೆಯಲ್ಲಿ ನಡೆದ ಕವಾಡಿಗರಹಟ್ಟಿಯಲ್ಲಿ ಸಂಭವಿಸಿದ ಅಹಿತಕರ ಘಟನೆ ಇಡೀ ರಾಜ್ಯದಲ್ಲಿಯೇ ಗಂಭೀರವಾದ ಪ್ರಕರಣವಾಗಿದೆ.  ಕವಾಡಿಗರಹಟ್ಟಿಯಂತಹ ಪ್ರಕರಣ ಜಿಲ್ಲೆಯಲ್ಲಿ ಎಲ್ಲಿಯೂ ಮರಕಳಿಸಬಾರದು. ಸಾರ್ವಜನಿಕರಲ್ಲಿ ನೀರು ಹಾಗೂ ನೈರ್ಮಲ್ಯದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ.

ಜಿಲ್ಲೆಯ ಎಲ್ಲ ವರ್ಗದ ಜನರು ಆರೋಗ್ಯದಿಂದ ಇರಬೇಕು. ಪ್ರತಿಯೊಬ್ಬರು ಶುದ್ಧ ಕುಡಿಯುವ ನೀರು ಸೇವಿಸಬೇಕು. ತಮ್ಮ ಸುತ್ತಮುತ್ತಲಿನ ಪರಿಸರವನ್ನೂ ಸ್ವಚ್ಛತೆಯಿಂದ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಬೃಹತ್ ಜನ ಜಾಗೃತಿ  ಜಾಥಾಕ್ಕೆ ಜಿಲ್ಲೆಯ ಜನಪ್ರತಿನಿಧಿಗಳು, ಸ್ಥಳೀಯ ಮುಖಂಡರು, ಸಂಘ-ಸಂಸ್ಥೆಗಳು ಕೈಜೋಡಿಸಬೇಕು. ಜನರ ಆರೋಗ್ಯ ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿರುವ ಎಲ್ಲ ಜಲ ಸಂಗ್ರಹಾರಗಳನ್ನು ಸ್ವಚ್ಛಗೊಳಿಸುವ ಪ್ರಕ್ರಿಯೆ ಈಗಾಗಲೆ ಪ್ರಾರಂಭವಾಗಿದೆ. ಇದಕ್ಕಾಗಿ ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಆರ್.ರಂಗನಾಥ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ, ಬಿಇಒ ನಾಗಭೂಷಣ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟಸ್ವಾಮಿ, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಮಹೇಂದ್ರಕುಮಾರ್, ನಗರಸಭೆ ಪೌರಾಯುಕ್ತ ಶ್ರೀನಿವಾಸ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ತಹಸಿಲ್ದಾರ್ ನಾಗವೇಣಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಆಶಾ-ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪಠ್ಯಗಳ ಜೊತೆಗೆ ದಿನಪತ್ರಿಕೆ ಓದುವ ಅಭ್ಯಾಸವಿದ್ದರೆ  ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧ್ಯ : ಡಾ. ಜಿ. ಎನ್. ಸಂದೀಪ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 21 : ಶಾಲಾ ಕಾಲೇಜುಗಳ ಪಠ್ಯಗಳ ಜೊತೆಗೆ ಸಾಮಾನ್ಯ ಜ್ಞಾನಕ್ಕಾಗಿ ದಿನಪತ್ರಿಕೆ ಹಾಗೂ ಮ್ಯಾಗ್ಜಿನ್‍ಗಳನ್ನು ಓದುವ

ಚಿತ್ರದುರ್ಗ | ಜಿಲ್ಲೆಯಲ್ಲಿ ಸೋಮವಾರ ಸುರಿದ ಮಳೆ ವರದಿ

ಚಿತ್ರದುರ್ಗ. ಮೇ.21 :  ಸೋಮವಾರ ರಾತ್ರಿ ಸುರಿದ ಮಳೆಗೆ ಹಿರಿಯೂರು ತಾಲ್ಲೂಕಿನ ಸೂಗೂರಿನಲ್ಲಿ 108.6 ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 54.4 ಮಿ.ಮೀ, ಇಕ್ಕನೂರಿನಲ್ಲಿ 68.4

ಮೈಸೂರಿನಲ್ಲಿ ಗಂಡನಿಂದಲೇ ನಟಿ ಹಾಗೂ ಕಾಂಗ್ರೆಸ್ ಮುಖಂಡೆಯ ಭೀಕರ ಹತ್ಯೆ..!

ಕನ್ನಡದ ಕೆಲ ಸಿನಿಮಾಗಳಲ್ಲು ನಟಿಸಿದ್ದ, ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದ ವಿದ್ಯಾ ನಂದೀಶ್ ಅವರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ತಲೆಗೆ ಬಲವಾಗಿ ಆಯುಧದಿಂದ

error: Content is protected !!