Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

48 ಗಂಟೆಯಾದರೂ ಉಪೇಂದ್ರ ಅವರನ್ನು ಯಾಕೆ ಬಂಧಿಸಿಲ್ಲ : ಭೈರಪ್ಪ ಹರೀಶ್ ಪ್ರಶ್ನೆ

---Advertisement---

 

ಬೆಂಗಳೂರು: ನಟ ಉಪೇಂದ್ರ ಗಾದೆ ಹೇಳುವ ಮೂಲಕ ಒಂದು ಸಮುದಾಯಕ್ಕೆ ಅವಹೇಳನ ಮಾಡಿದ್ದಾರೆ ಎಂದು ಚನ್ನಮ್ಮ ಅಚ್ಚುಕಟ್ಟೆ ಹಾಗೂ ಹಕಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಈ ಕೇಸ್ ಸಂಬಂಧ ಹೈಕೋರ್ಟ್ ನಿಂದ ಸ್ಟೇ ತರಲಾಗಿದೆ. ಬಿಗ್ ರಿಲೀಫ್ ಸಿಕ್ಕಿದೆ ಎಂದು ಸಂತಸ ಪಡುವಾಗಲೇ ಈಗ ಮತ್ತೆ ಬಂಧನಕ್ಕೆ ಒತ್ತಾಯ ಕೇಳಿ ಬಂದಿದೆ.

ಕರ್ನಾಟಕ ರಣಧೀರ ಪಡೆ ಅಧ್ಯಕ್ಷ ಭೈರಪ್ಪ ಹರೀಶ್ ಬಂಧನಕ್ಕೆ ಒತ್ತಡ ಹಾಕಿದ್ದಾರೆ. ನಾನು ದೂರು ನೀಡಿ 48 ಗಂಟೆಯಾದರೂ ಇನ್ನೂ ಯಾಕೆ ಬಂಧಿಸಿಲ್ಲ. ನಾನು ಆಗಸ್ಟ್ 13ರ ಸಂಜೆ ದೂರು ನೀಡಿರುವುದು. ಸದ್ಯ ಅವರು ಸ್ಟೇ ತಂದಿರುವುದು ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಗೆ. ನಾನು ನೀಡಿರುವ ದೂರಿಗೆ ಯಾವುದೇ ಸ್ಟೇ ತಂದಿಲ್ಲ ಎಂದು ಆಕ್ರೋಶ ಹೊರ ಹಾಕಿದ ಭೈರಪ್ಪ ಹರೀಶ್, ಹಲಸೂರು ಗೇಟ್​ ಠಾಣೆಯ ಎಸಿಪಿಯನ್ನು ಭೇಟಿ ಮಾಡಿ ಕೂಡಲೇ, ಅವರ ಹೇಳಿಕೆ ಸಂಬಂಧ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ನಟ ಉಪೇಂದ್ರ ಫೇಸ್ ಬುಕ್ ಲೈವ್ ನಲ್ಲಿ ಮಾತನಾಡುವಾಗ ಗಾದೆ ಮಾತೊಂದನ್ನು ಬಳಕೆ‌ ಮಾಡಿದ್ದರು. ಬಳಿಕ ಈ ಸಂಬಂಧ ಕ್ಷಮೆಯನ್ನು ಕೇಳಿದ್ದರು. ಇದೇ ವಿಚಾರವಾಗಿ ಇಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಕೂಡ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment