ಉಡುಪಿ: ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ವಿಡಿಯೋ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಐಡಿ ಅಧಿಕಾರಿಗಳು ಮೊದಲ ಹಂತದ ತನಿಖೆ ಮುಗಿಸಿದ್ದಾರೆ. ಈ ಹಿಂದೆ ಎಫ್ಎಸ್ಎಲ್ ಗೆ ಮೊಬೈಲ್ ಕಳುಹಿಸಲಾಗಿತ್ತು. ಅದರ ವರದಿ ಬಂದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ. ಅದಕ್ಕೂ ಮುನ್ನ ವರದಿಗಾಗಿ ಅಧಿಕಾರಿಗಳು ಕಾಯುತ್ತಿದ್ದಾರೆ. ಸಿಐಡಿ ಅಧಿಕಾರಿಗಳು ಉಡುಪಿಯಿಂದ ಬೆಂಗಳೂರಿಗೆ ವಾಪಾಸ್ ಆಗಿದ್ದಾರೆ.
ಬೆಂಗಳೂರಿಗೆ ಮೊಬೈಲ್ ಗಳನ್ನು ಕಳುಹಿಸಲಾಗಿದೆ. ಬೆಂಗಳೂರಿನಲ್ಲಿ ಮೊಬೈಲ್ ರಿಟ್ರೈವ್ ಮಾಡಲು ಸಾಧ್ಯವಾಗದೆ ಹೋದಲ್ಲಿ ಆ ಮೊಬೈಲ್ ಗಳನ್ನು ಗುಜರಾತ್ ಲ್ಯಾಬ್ ಗೆ ಕಳುಹಿಸಲಾಗುತ್ತದೆ ಎನ್ನಲಾಗುತ್ತಿದೆ. ಯಾಕಂದ್ರೆ ಗುಜರಾತ್ ನಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿ, ವಿಡಿಯೋ ರಿಟ್ರೈವ್ ಮಾಡಲಾಗುತ್ತದೆ. ಹೀಗಾಗಿ ಬೆಂಗಳೂರಿನಲ್ಲಿ ಆಗದೆ ಇದ್ದದ್ದನ್ನು ಗುಜರಾತ್ ಗೆ ಕಳುಹಿಸಲಾಗುತ್ತದೆ. ಸಿಐಡಿ ಅಧಿಕಾರಿಗಳು ಒಂದು ಹಂತಕ್ಕೆ ತನಿಕೆ ಮುಗಿಸಿದ್ದಾರೆ. ಎಫ್ಎಸ್ಎಲ್ ವರದಿಗಾಗಿ ಕಾಯುತ್ತಿದ್ದಾರೆ.
ಜುಲೈ 18ರಂದು ಉಡುಪಿಯ ಕಾಲೇಜೊಂದರಲ್ಲಿ ನಡೆದ ಶೌಚಗೃಹದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಪಟ್ಟ ಹಾಗೆ ಸಿಐಡಿ ತನಿಖೆ ಪ್ರಗತಿಯಲ್ಲಿದೆ. ಕಳೆದ ಒಂದು ವಾರದಿಂದ ಉಡುಪಿಯಲ್ಲಿ ಬೀಡು ಬಿಟ್ಟಿದ್ದ ಸಿಐಡಿ ತಂಡ ಪ್ಯಾರಾ ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಿದೆ. ಸಿಐಡಿ ಎಡಿಜಿಪಿ ಮನೀಶ್ ಕರ್ಬಿಕರ್ ಮತ್ತು ಎಸ್ ಪಿ ರಾಘವೇಂದ್ರ ಹೆಗಡೆ ಅವರ ನೇತೃತ್ವದಲ್ಲಿ ತನಿಖಾಧಿಕಾರಿ ಡಿವೈಎಸ್ಪಿ ಅಂಜುಮಾಲ ಅವರು ಒಂದು ವಾರದಿಂದ ಉಡುಪಿಯಲ್ಲಿ ಇದ್ದುಕೊಂಡು ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ಬೆಂಗಳೂರಿಗೆ ತೆರಳಿದ್ದಾರೆ.