ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ 462 ಜನರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ.
ಕಳೆದ 24 ಗಂಟೆಯಲ್ಲಿ 18173 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 97948 RTPCR ಟೆಸ್ಟ್ ಸೇರಿದಂತೆ ಒಟ್ಟು, 116121 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 462 ಮಂದಿಗೆ ಕೊರೊನಾ ದೃಢವಾಗಿದೆ. 253 ಜನರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.
ಉಳಿದಂತೆ ಕೊರೊನಾದಿಂದಾಗಿ ಕಳೆದ 24 ಗಂಟೆಯಲ್ಲಿ 9 ಜನ ಸಾವನ್ನಪ್ಪಿದ್ದಾರೆ. 479 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.