Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮದಕರಿಪುರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರ ತುರ್ತು ಸಭೆ : ಏನೆಲ್ಲಾ ಚರ್ಚೆ ನಡೆಯಿತು ?

---Advertisement---

 

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆ.21 : ಮದಕರಿಪುರ ಗ್ರಾಮ ಪಂಚಾಯಿತಿಗೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಓ.ಬಸವರಾಜ್ ಸೋಮವಾರ ಸದಸ್ಯರುಗಳ ತುರ್ತು ಸಭೆ ಕರೆದು ಕುಡಿಯುವ ನೀರು ಪೂರೈಕೆ ಹಾಗೂ ಸ್ವಚ್ಚತೆ ಕುರಿತು ಚರ್ಚಿಸಿದರು.

ಅಧಿಕಾರ ಸ್ವೀಕರಿಸಿದ ನಂತರ ಸದಸ್ಯರುಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅಧ್ಯಕ್ಷ ಓ.ಬಸವರಾಜ್ ಮದಕರಿಪುರ ಗ್ರಾಮ ಪಂಚಾಯಿತಿಗೆ ಒಳಪಡುವ ಪಿಳ್ಳೆಕೆರನಹಳ್ಳಿ ಹಾಗೂ ಮದಕರಿಪುರದಲ್ಲಿ ಜನತೆಗೆ ಶುದ್ದ ಕುಡಿಯುವ ನೀರು ಹಾಗೂ ಸ್ವಚ್ಚತೆ ಕಡೆ ಮೊದಲ ಆದ್ಯತೆ ನೀಡಬೇಕಾಗಿರುವುದರಿಂದ ಸರ್ವ ಸದಸ್ಯರ ಸಹಕಾರ ಅತ್ಯವಶ್ಯಕ.

ಜಿಲ್ಲೆಯ ಕೆಲವು ಕಡೆ ಕಲುಷಿತ ನೀರು ಸೇವನೆಯಿಂದ ಉಂಟಾಗಿರುವ ಅವಘಡಗಳಿಂದ ನಾವುಗಳು ಎಚ್ಚೆತ್ತುಕೊಳ್ಳುವುದು ಉತ್ತಮ ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಂಜುಳ, ಸದಸ್ಯರುಗಳಾದ ಪಿ.ಎಸ್.ಸಿದ್ದೇಶ್, ದಿವಾಕರ್ ಸಂಕೋಳ್, ಕುಸುಮ, ಟಿ.ಚಂದ್ರಮ್ಮ ರೇವಣ್ಣ, ಚನ್ನಪ್ಪ ಹೆಚ್.ಪಿ. ರತ್ನಮ್ಮ ನಾಗರಾಜ್, ಮಂಜುಳ ಗಿರೀಶ್, ಜ್ಯೋತಿ ದೇವೇಂದ್ರಪ್ಪ, ಎಲ್.ತಿಪ್ಪೇಸ್ವಾಮಿ, ನವೀನ್‍ಗೌಡ, ರಂಜಿತ್, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ನಾಗರಾಜ್, ಕಾರ್ಯದರ್ಶಿ ಸೋಮಣ್ಣ ಇವರುಗಳು ತುರ್ತು ಸಭೆಯಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...