ಬೆಂಗಳೂರು: ರಾಜ್ಯದಲ್ಲಿ ಮಳೆಯಿಲ್ಲದೆ ರೈತರು ಕಂಗಾಲಾಗಿದ್ದಾರೆ. ಮಳೆ ಬರುವಿಕೆಗಾಗಿಯೇ ಕಾಯುತ್ತಿದ್ದಾರೆ. ಸದ್ಯ ಡ್ಯಾಂಗಳಲ್ಲಿ ಇರುವ ನೀರನ್ನೇ ಗಟ್ಟಿ ಎನ್ನಲಾಗಿದೆ. ಅದರ ಜೊತೆಗೆ ಡ್ಯಾಂನಲ್ಲೂ ದಿನೇ ದಿನೇ ನೀರು ಕಡಿಮೆಯಾಗ್ತಾ ಇದೆ. ಹೀಗಿರುವಾಗ ಪ್ರತಿದಿನ ದಿನ ತಮಿಳುನಾಡಿಗೆ ಕಾವೇರಿ ನೀರು ಬಿಡುವುದು ಎಷ್ಟು ಸರಿ ಎಂಬ ಪ್ರಶ್ನೆ ಎದುರಾಗಿದೆ. ರಾಜ್ಯ ಸರ್ಕಾರದ ನಡೆಯನ್ನು ರೈತರು, ಬಿಜೆಪಿ ನಾಯಕರು ಖಂಡಿಸಿದ್ದಾರೆ.
ಈ ಸಂಬಂಧ ಇಂದು ರಾಜ್ಯ ಸರ್ಕಾರ ಸರ್ವಪಕ್ಷಗಳ ಸಭೆ ಕರೆದಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧಸಭೆ ಆರಂಭವಾಗಿದೆ. ಇನ್ನು ಈ ಸಭೆಯಲ್ಲಿ ಕಾವೇರಿ, ಮೇಕೆದಾಟು, ಮಹಾದಾಯಿ ಜಲ ವಿವಾದಗಳ ಬಗ್ಗೆ ಚರ್ಚೆ ನಡೆಯಲಿದೆ. ಈ ಸಭೆಯಲ್ಲಿ ಮಾಜಿ ಸಿಎಂ ಗಳಾದ ಯಡಿಯೂರಪ್ಪ, ಕುಮಾರಸ್ವಾಮಿ, ಬಸವರಾಜ್ ಬೊಮ್ಮಾಯಿ ಅವರು ಪಾಲ್ಗೊಂಡಿದ್ದಾರೆ.
ಅದರ ಜೊತೆಗೆ ಜಗದೀಶ ಶೆಟ್ಟರ್, ಡಿ.ವಿ. ಸದಾನಂದಗೌಡ, ವೀರಪ್ಪ ಮೊಯಿಲಿ, ಸಚಿವರಾದ ಹೆಚ್.ಕೆ. ಪಾಟೀಲ, ಚಲುವರಾಯಸ್ವಾಮಿ, ಡಾ. ಜಿ. ಪರಮೇಶ್ವರ್, ಕೆ.ಜೆ. ಜಾರ್ಜ್, ಕೃಷ್ಣ ಬೈರೇಗೌಡ, ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಜಗ್ಗೇಶ್ ಸೇರಿದಂತೆ ಎಲ್ಲಾ ಪಕ್ಷಗಳ ಶಾಸಕರು, ಸಂಸದರು ಭಾಗಿಯಾಗಿದ್ದಾರೆ.
ಆದ್ರೆ ಇದು ಸರ್ವಪಕ್ಷಗಳ ಸಭೆಯಾದರೂ ಪ್ರಹ್ಲಾದ ಜೋಷಿ, ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ನಿರ್ಮಲಾ ಸೀತಾರಾನ್, ಎ ನಾರಾಯಣ ಸ್ವಾಮಿ, ರಾಜೀವ್ ಚಂದ್ರಶೇಖರ್ ಗೈರಾಗಿದ್ದಾರೆ.