ನಾಡು-ನುಡಿ-ಜಲ-ಭೂಮಿ-ಸಂಸ್ಕೃತಿಯ ಹಿತ ಕಾಪಾಡುವ ವಿಚಾರದಲ್ಲಿ ರಾಜಿಯ ಮಾತೇ ಇಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

2 Min Read

 

ಬೆಂಗಳೂರು: ಕಾವೇರಿ, ಮಹದಾಯಿ, ಮೇಕೆದಾಟು ವಿಚಾರದಲ್ಲಿ ನಾಡಿಗೆ ನ್ಯಾಯ ಒದಗಿಸುವ ಸಲುವಾಗಿ ಪ್ರಧಾನಿಯವರ ಬಳಿಗೆ ಸರ್ವ ಪಕ್ಷ ನಿಯೋಗ ಕರೆದೊಯ್ಯುವ ಚಿಂತನೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ವಿರೋಧ ಪಕ್ಷದ ನಾಯಕರುಗಳ ಮತ್ತು ಸಂಸದರ ಅಭಿಪ್ರಾಯಗಳನ್ನು ಕೇಳಿಸಿಕೊಂಡ ಬಳಿಕ ಮಾತನಾಡಿದರು. ಕನ್ನಡ ಹಿತ ಕಾಪಾಡುವ ವಿಚಾರದಲ್ಲಿ ರಾಜಿಯ ಮಾತೇ ಇಲ್ಲ. 7 ಕೋಟಿ ಕನ್ನಡಿಗರ ಹಿತ ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಸರ್ವ ಪಕ್ಷಗಳೂ ಒಟ್ಟಾಗಿ ಶ್ರಮಿಸೋಣ. ಹೀಗಾಗಿ ಸರ್ವ ಪಕ್ಷ ನಿಯೋಗಕ್ಕೆ ನಿಮ್ಮೆಲ್ಲರ ಸಹಕಾರ ಬೇಕು. ಕಾವೇರಿ ಜಲಾನಯನ ಪ್ರದೇಶದಲ್ಲಿ ನಮ್ಮ ರೈತರ ಹಿತವನ್ನು ಸಂಪೂರ್ಣ ಕಾಪಾಡಿದ್ದೇವೆ. ನಮ್ಮ ಬೆಳೆ ರಕ್ಷಣೆಗೆ ಅಗತ್ಯ ಕ್ರಮ ಕೈಗೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಇಂದಿನ ಸಭೆಯ ಹೈಲೇಟ್ಸ್ :
* ಸರ್ವ ಪಕ್ಷ ನಾಯಕರ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು.

*ಕಾವೇರಿ ಪ್ರಾಧಿಕಾರ 22 ಸಭೆ, ನಿಯಂತ್ರಣ ಸಮಿತಿಯಲ್ಲಿ 84 ಸಭೆಗಳು ನಡೆದಿವೆ.

* ರಾಜ್ಯವನ್ನು ಪ್ರತಿನಿಧಿಸುವ ಅಧಿಕಾರಿ ಮತ್ತು ವಕೀಲರ ತಂಡ ವಾಸ್ತವ ಸ್ಥಿತಿಯನ್ನು ಸಮರ್ಥವಾಗಿ ಪ್ರಾಧಿಕಾರದ ಮುಂದೆ, ನಿಯಂತ್ರಣ ಸಮಿತಿ ಮುಂದೆ ಮಂಡಿಸಿದ್ದಾರೆ

* ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆ ಆಗಿರುವುದನ್ನು , ವಾಸ್ತವ ಸ್ಥಿತಿಯನ್ನು ಮಂಡಿಸಿದ್ದಾರೆ

*ಇಲ್ಲಿಯವರೆಗೂ ನಾವು 24 ಟಿಎಂಸಿ ಮಾತ್ರ ಬಿಡುಗಡೆ ಮಾಡಿದ್ದೇವೆ. ನಿಗಧಿ ಮಾಡಿದ್ದಕ್ಕಿಂತ ಕಡಿಮೆ ನೀರು ಬಿಟ್ಟಿದ್ದೀವಿ. ಮೂರನೇ ಒಂದು ಭಾಗದಷ್ಟು ಮಾತ್ರ ನೀರು ಬಿಟ್ಟಿದ್ದೀವಿ ಅಷ್ಟ

*ನಾಡಿನ ರೈತರ ಹಿತಾಸಕ್ತಿ ಕಾಪಾಡುವ ವಿಚಾರದಲ್ಲಿ ರಾಜಕೀಯವೂ ಇಲ್ಲ. ರಾಜಿಯೂ ಇಲ್ಲ

*ನಾವು 15 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಸಾಧ್ಯವೇ ಇಲ್ಲ ಎಂದು ವಾದ ಮಂಡಿಸುವಾಗಲೇ‌ ತಮಿಳುನಾಡಿನವರು walk out ಮಾಡಿದರು. ಬಳಿಕ 10 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಆದೇಶವಾಗಿದೆ. ಈಗ 10 ಸಾವಿರ ಕ್ಯೂಸೆಕ್ಸ್ ನೀರನ್ನೂ ಬಿಡಲು ಸಾಧ್ಯವಿಲ್ಲ ಎಂದು ಮತ್ತೆ ಸಮರ್ಥ ವಾದ ಮಂಡಿಸುತ್ತೇವೆ.

*ಮತ್ತೆ ಮಳೆ ಬರುವ ಸೂಚನೆ ಕಾಣುತ್ತಿಲ್ಲ. ಆದ್ದರಿಂದ ಸಂಕಷ್ಟ ಹಂಚಿಕೆ ಸೂತ್ರ ವೈಜ್ಞಾನಿಕವಾಗಿ ಆಗಲೇಬೇಕು.

*ಮೇಕೆದಾಟು ಆದರೆ ಕುಡಿಯುವ ನೀರಿನ ಸಮಸ್ಯೆ ಬಹುತೇಕ ಕಡಿಮೆ ಮಾಡಬಹುದು ಎಂದು ಹಲವು ವಿಚಾರಗಳ ಚರ್ಚೆ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *