ಸುದ್ದಿಒನ್, ಚಿತ್ರದುರ್ಗ, (ಆ.23) : ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ ಪ್ರಯೋಜನಕಾರಿಯಾಗಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್ ತಿಳಿಸಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬಾಪೂಜಿ ಸಮೂಹ ಸಂಸ್ಥೆಗಳ ಸಹಯೋಗದೊಂದಿಗೆ ಮಲ್ಲಾಪುರದಲ್ಲಿರುವ ಬಾಪೂಜಿ ಸಮೂಹ ಸಂಸ್ಥೆಯಲ್ಲಿ ಬುಧವಾರ ನಡೆದ ಕಸಬಾ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಪ್ರತಿ ವರ್ಷದಂತೆ ಈ ವರ್ಷವೂ ಕ್ರೀಡಾಕೂಟ ನಡೆಸಲಾಗುತ್ತಿದೆ. ಸರ್ಕಾರದಿಂದ ಕಡಿಮೆ ಅನುದಾನ ಬರುವುದರಿಂದ ಶಿಕ್ಷಣ ಸಂಸ್ಥೆಗಳ ನೆರವು ಪಡೆಯಲಾಗುತ್ತಿದೆ. ಮಾನಸಿಕ ಹಾಗೂ ದೈಹಿಕವಾಗಿ ಆರೋಗ್ಯವಾಗಿರಬೇಕಾದರೆ ಕ್ರೀಡೆ ಸಹಕಾರಿ. ಮನಸ್ಸು ಮತ್ತು ದೇಹ ಲವಲವಿಕೆಯಿಂದಿರುತ್ತದೆ. ತೀರ್ಪುಗಾರರು ಪ್ರಾಮಾಣಿಕವಾಗಿ ತೀರ್ಪು ಕೊಡಬೇಕೆಂದು ಹೇಳಿದರು.
ಬಾಪೂಜಿ ಸಮೂಹ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಹಾಗೂ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ವೀರೇಶ್ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ ಮಾತನಾಡುತ್ತ ಕ್ರೀಡೆಯಿಂದ ಪರಸ್ಪರರಲ್ಲಿ ಸ್ನೇಹ ಮನೋಭಾವನೆ ಮೂಡುತ್ತದೆ. ಮಾನಸಿಕ ಹಾಗೂ ದೈಹಿಕವಾಗಿ ಉಲ್ಲಾಸದಿಂದಿರಬಹುದು. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ. ಸೋಲನ್ನೆ ಗೆಲುವಿನ ಮೆಟ್ಟಿಲಾಗಿ ಮಾಡಿಕೊಂಡರೆ ಮುಂದೆ ಯಶಸ್ಸು ಕಾಣಬಹುದು ಎಂದರು.
ಬಾಪೂಜಿ ಸಮೂಹ ಸಂಸ್ಥೆಗಳ ನಿರ್ದೇಶಕ ಕೆ.ಎಂ.ಚೇತನ್, ಎಂ.ಆರ್.ನಾಗರಾಜ್, ಮಹಾಂತೇಶ್, ಮಲ್ಲಿಕಾರ್ಜುನ್, ಕೆಂಚಪ್ಪ, ಎಂ.ಎಸ್.ಲತ, ಉಷ, ದೈಹಿಕ ಶಿಕ್ಷಕರು ಹಾಗೂ ಬಾಪೂಜಿ ಸಮೂಹ ಸಂಸ್ಥೆಗಳ ಶಿಕ್ಷಕರು ಈ ಸಂದರ್ಭದಲ್ಲಿ ಹಾಜರಿದ್ದರು.
26 ಶಾಲೆಗಳ ಮಕ್ಕಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552