ಬೆಂಗಳೂರು: ಕಳೆದ ಹತ್ತು ವರ್ಷಗಳ ಹಿಂದೆ ನಡೆದ ಸೌಜನ್ಯ ಕೇಸ್ ಪ್ರಕರಣ ಇನ್ನು ಇತ್ಯರ್ಥಗೊಂಡಿಲ್ಲ. ಇತ್ತಿಚೆಗಂತು ಸೌಜನ್ಯ ಕೇಸ್ ಗೆ ನ್ಯಾಯ ಬೇಕೆಂದು ಉಡುಪಿಯ ಬೀದಿ ಬೀದಯಲ್ಲೂ ಪ್ರತಿಭಟನೆಗಳು ನಡೆಯುತ್ತಿವೆ. ನ್ಯಾಯಕ್ಕಾಗಿ ಒತ್ತಡ ಕೇಳಿ ಬಂದಿದೆ. ಇದೀಗ ಸಿಎಂ ಸಿದ್ದರಾಮಯ್ಯ ಅವರು ಮರುತನಿಖೆ ಬಗ್ಗೆ ಮಾತನಾಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಸಿದ್ದರಾಮಯ್ಯ, ಸೌಜನ್ಯ ಕೇಸ್ ಸಂಬಂಧ, ಮರುತನಿಖೆ ನಡೆಸಲು ಕೇಂದ್ರ ಪತ್ರ ಬೃಯಲು ರಾಜ್ಯ ಸರ್ಕಾರ ಸಿದ್ಧವಿದೆ. ಆದ್ರೆ ಅದಕ್ಕೂ ಮುನ್ನ ಅಔಜನ್ಯ ತಂದೆ ತಾಯಿ ಮರುತನಿಖೆಗೆ ಆಗ್ರಹಿಸಿ, ಕೇಂದ್ರಕ್ಕೆ ಪತ್ರ ಬರೆಯಬೇಕಿದೆ. ಅದರ ಬೆನ್ನಲ್ಲೇ ರಾಜ್ಯ ಸರ್ಕಾರವೂ ಕೇಂದ್ರಕ್ಕೆ ಪತ್ರ ಬರೆಯಲಿದೆ ಎಂದಿದ್ದಾರೆ.
ಪ್ರಕರಣ ಕುರಿತಂತೆ ಹಾಗೂ ಮರುತನಿಖೆ ನಡೆಸಲು ಕೇಂದ್ರದ ಮೇಲೆ ಒತ್ತಡ ತರುವ ಬಗ್ಗೆ ಅಡ್ವೋಕೇಟ್ ಜನರಲ್ ಅವರೊಂದಿಗೆ ಚರ್ಚಿಸುತ್ತೇನೆ ಎಂದಿದ್ದಾರೆ. ಇನ್ನು ಧರ್ಮಸ್ಥಳದಲ್ಲಿ ಉಜಿರೆ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ, ಹತ್ಯೆ ಪ್ರಕರಣದ ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖಾ ದಳ ರಚಿಸುವಂತೆ ಒತ್ತಾಯಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಮಂಡ್ಯದಲ್ಲಿ ಪ್ರತಿಭಟನೆ ನಡೆದಿದೆ.