ಸುದ್ದಿಒನ್, ಚಿತ್ರದುರ್ಗ,(ಆ.25) : ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಆರ್. ಪಾಟೀಲ್ ಅವರು ಇದೇ ಆಗಸ್ಟ್ 26ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 1.30ಕ್ಕೆ ಚಿತ್ರದುರ್ಗಕ್ಕೆ ಆಗಮಿಸುವ ಅವರು, ಮಧ್ಯಾಹ್ನ 2 ಗಂಟೆಗೆ ಚಿತ್ರದುರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿ, ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ನಂತರ ಗದಗ ಜಿಲ್ಲೆಗೆ ಪ್ರಯಾಣ ಬೆಳೆಸುವರು ಎಂದು ಆಪ್ತ ಕಾರ್ಯದರ್ಶಿ ಕೃಷ್ಣಗೌಡ ತಾಯಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















