Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಲಕ್ನೋ-ರಾಮೇಶ್ವರಂ ಪ್ರವಾಸಿ ರೈಲಿನಲ್ಲಿ ಬೆಂಕಿ ಅವಘಡ : 10 ಸಾವು, 20 ಕ್ಕೂ ಹೆಚ್ಚು ಮಂದಿಗೆ  ಗಾಯ…!

---Advertisement---

 

 

ಸುದ್ದಿಒನ್ : ಒಡಿಶಾ ಬಾಲಸೋರ್ ರೈಲು ಅಪಘಾತ ಘಟನೆ ಮರೆಯುವ ಮುನ್ನವೇ, ತಮಿಳುನಾಡಿನ ಮಧುರೈ ರೈಲು ನಿಲ್ದಾಣದಲ್ಲಿ ಲಕ್ನೋ-ರಾಮೇಶ್ವರಂ ಪ್ರವಾಸಿ ರೈಲಿನಲ್ಲಿ
ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ನಿಂತಿದ್ದ ಪ್ರವಾಸಿ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡು 10 ಮಂದಿ ಸಾವನ್ನಪ್ಪಿದ್ದಾರೆ. 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು,  ಅವರೆಲ್ಲರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಲಕ್ನೋ-ರಾಮೇಶ್ವರಂ IRCTC ವಿಶೇಷ ರೈಲು ಶುಕ್ರವಾರ 60 ಪ್ರಯಾಣಿಕರೊಂದಿಗೆ ಲಕ್ನೋದಿಂದ ಹೊರಟಿದೆ. ಈ ರೈಲು ತಿರುಪತಿ- ರಾಮೇಶ್ವರಂ- ಕನ್ಯಾಕುಮಾರಿ ಮುಂತಾದ ಸ್ಥಳಗಳಿಗೆ ಹೋಗುವುದಿತ್ತು. ಆದರೆ ಮಧುರೈ ರೈಲು ನಿಲ್ದಾಣದಲ್ಲಿ ರೈಲು ಸ್ವಲ್ಪ ಹೊತ್ತು ನಿಂತಿದೆ. ಆ ಸಮಯದಲ್ಲಿ ಪ್ಯಾಂಟ್ರಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತು. ಅಡುಗೆ ಮಾಡುವ ಸಮಯದಲ್ಲಿ ಬೋಗಿಯಲ್ಲಿ ಬೆಂಕಿ ವ್ಯಾಪಿಸಿದೆ.

ಈ ದುರ್ಘಟನೆಯಲ್ಲಿ ಮೊದಲು ಇಬ್ಬರು ಸಾವನ್ನಪ್ಪಿದ್ದರೆ, ಇದೀಗ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಮೃತರನ್ನು ಉತ್ತರ ಪ್ರದೇಶದ ನಿವಾಸಿಗಳು ಎಂದು ಗುರುತಿಸಲಾಗಿದೆ. ಇನ್ನು ಕೆಲವರು ಅಪಘಾತದಲ್ಲಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿ ಹರಡಿದ ಭೋಗಿಯನ್ನು ರೈಲಿನಿಂದ ಬೇರ್ಪಡಿಸಲಾಗಿದೆ.  ಅಗ್ನಿಶಾಮಕ ಸಿಬ್ಬಂದಿ ಸಕಾಲಕ್ಕೆ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಈ ಅವಘಡ ಸಂಭವಿಸಿರಬಹುದು ಎಂದು ರೈಲ್ವೆ ಪೊಲೀಸರು ಶಂಕಿಸಿದ್ದಾರೆ. ಅಪಘಾತವಾದ ರೈಲಿನಲ್ಲಿ ಗ್ಯಾಸ್ ಸಿಲಿಂಡರ್‌ಗಳು ಪತ್ತೆಯಾಗಿವೆ.ಬೆಂಕಿ ಅವಘಡದ ಬಗ್ಗೆ ಪ್ರಕರಣ ದಾಖಲಿಸಿಕೊಂಡು ರೈಲ್ವೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈ ವರ್ಷ ಜೂನ್ 2 ರಂದು ಒಡಿಶಾದ ಬಾಲಸೋರ್‌ನಲ್ಲಿ ಭೀಕರ ರೈಲು ಅಪಘಾತ ಸಂಭವಿಸಿತ್ತು. ಕೋರಮಂಡಲ್ ಎಕ್ಸ್ ಪ್ರೆಸ್ ಸೇರಿದಂತೆ ಮೂರು ರೈಲುಗಳು ಡಿಕ್ಕಿ ಹೊಡೆದಿದ್ದವು. ಈ ಘಟನೆ ದೇಶವಷ್ಟೇ ಅಲ್ಲ ವಿಶ್ವವನ್ನೇ ಬೆಚ್ಚಿ ಬೀಳಿಸಿತ್ತು. ಈ ಭೀಕರ ಅಪಘಾತದಲ್ಲಿ 290ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದರು. ಸಾವಿರಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದರು. ಇದು ದೇಶದ ಇತಿಹಾಸದಲ್ಲಿ ಅತಿದೊಡ್ಡ ರೈಲು ಅಪಘಾತಗಳಲ್ಲಿ ಒಂದಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment