Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶ್ರಮಜೀವಿಗಳ ಹಣ ಹಾಳಾಗುತ್ತಿದೆ: ಹೆಚ್ ಡಿ ಕುಮಾರಸ್ವಾಮಿ

Facebook
Twitter
Telegram
WhatsApp

ಸಿಂದಗಿ: ಸಮಾಜದ ಆರೋಗ್ಯವನ್ನು ಹಾಳು ಮಾಡುತ್ತಿರುವ, ಯುವಕರ ಭವಿಷ್ಯಕ್ಕೆ ಕೊಳ್ಳಿ ಇಡುತ್ತಿರುವ ಈ ದಂಧೆಗಳು ಸ್ವೇಚ್ಛಾಚಾರದಿಂದ ನಡೆಯುತ್ತಿವೆ. ಶ್ರಮಜೀವಿಗಳ ಹಣ ಹಾಳಾಗುತ್ತಿದೆ. ಸರಕಾರ ಅವುಗಳನ್ನು ಹತ್ತಿಕ್ಕುವ ಬದಲು ಸುಮ್ಮನಿದೆ ಎಂದು ಅವರು ಟೀಕಿಸಿದರು.

ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿಯವರೆಂದೂ ಕಾಮನ್‌ಮ್ಯಾನ್‌ಗಳಲ್ಲ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದೂ ಕಾಮನ್‌ಮ್ಯಾನ್‌ ಆಗಲು ಸಾಧ್ಯವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಅವರು ಹೇಳಿದರು.

ಮುಖ್ಯಮಂತ್ರಿಗಳು ಸಂಚಾರ ಮಾಡುವ ರಸ್ತೆಗಳಲ್ಲಿ ಹಂಪ್ಸ್‌ʼಗಳನ್ನು ತೆಗೆಯಲಾಗಿದೆ, ರಾತ್ರಿ ಹೊತ್ತು ಅವರಿಗೆ ಎಸ್ಕಾರ್ಟ್‌ ಕೊಡಲಾಗುತ್ತಿದೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು; ಈ ಬಗ್ಗೆ ನನಗೂ ಮಾಹಿತಿ ಬಂದಿದೆ. ಬಿಜೆಪಿ ಅವರು ಹಿಂದೆ ಐದು ವರ್ಷ ಆಡಳಿತ ನಡೆಸಿದ್ದನ್ನು ನೋಡಿದ್ದೇವೆ. ನನ್ನ ನೇತೃತ್ವದ ಸಮ್ಮಿಶ್ರ ಸರಕಾರವನ್ನು ಪತನ ಮಾಡಿ ಸರಕಾರ ಮಾಡಿ ಈಗ ಆಡಳಿತ ನಡೆಸುತ್ತಿರುವುದನ್ನು ನೋಡಿದ್ದೇವೆ. ಅವರೆಂದು ಜನಸಾಮಾನ್ಯರ ಪರ ಅಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ತೈಲ ಬೆಲೆಗಳನ್ನು, ಅಗತ್ಯ ವಸ್ತುಗಳ ಬೆಲೆಗಳನ್ನು ಏರಲು ಬಿಟ್ಟು ಜನಸಾಮಾನ್ಯರ ಜೀವನವನ್ನು ನರಕ ಮಾಡಿರುವ ಇವರು ಕಾಮನ್‌ ಮ್ಯಾನ್‌ʼಗಳಾ ಎಂದು ಹೆಚ್‌ಡಿಕೆ ಅವರು ಕಿಡಿ ಕಾರಿದರು. ಆರ್ಥಿಕ ತೊಂದರೆ ಇದೆ ಎನ್ನುವ ನೆಪವೊಡ್ಡಿ ಸರಕಾರ ನೀರಾವರಿ ಇಲಾಖೆಯ ಎಲ್ಲ ಕಾಮಗಾರಿಗಳನ್ನು ಸ್ಥಗಿತ ಮಾಡಿರುವ ಮಾಹಿತಿಯೂ ಬಂದಿದೆ. ಈ ಬಗ್ಗೆ ಪತ್ರಿಕೆಯಲ್ಲಿ ವರದಿ ಬಂದಿದೆ. ಇನ್ನೂ 6000 ಕೋಟಿ ರೂ.ಗಳಷ್ಟು ಹಣವನ್ನೂ ಬಿಡುಗಡೆ ಮಾಡಿಲ್ಲ ಅನ್ನುವ ಮಾಹಿತಿ ಇದೆ. ಇವರಿಗೆ ಭ್ರಷ್ಟಾಚಾರ ಮಾಡಲು ಹಣವಿದೆ, ಯೋಜನೆಗಳಿಗೆ ಕೊಡಲು ಇಲ್ಲ ಎಂದರೆ ಹೇಗೆ ಎಂದು ಅವರು ಪ್ರಶ್ನಿಸಿದರು.

ಜೆಡಿಎಸ್‌ ಸೆಕ್ಯೂಲರ್‌ ಪಕ್ಷ ಹೌದೋ ಅಲ್ಲವೋ ಎಂಬ ಬಗ್ಗೆ ಸರ್ಟಿಫಿಕೇಟ್‌ ಕೊಡಲು ಸಿದ್ದರಾಮಯ್ಯ ಯಾರು ಎಂದು ಮಾಜಿ ಮುಖ್ಯಮಂತ್ರಿಗಳು ಖಾರವಾಗಿ ಪ್ರಶ್ನಿಸಿದರು. ಜೆಡಿಎಸ್‌ ಸೆಕ್ಯೂಲರ್‌ ಅಲ್ಲ ಎಂದು ಸಿದ್ದರಾಮಯ್ಯ ನೀಡಿರುವ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು; ನಮ್ಮದು ಎಲ್ಲರನ್ನೂ ಒಳಗೊಂಡ, ಎಲ್ಲರನ್ನೂ ಪ್ರತಿನಿಧಿಸುವ ಪಕ್ಷ. ಸಿದ್ದರಾಮಯ್ಯ ಅವರಿಂದ ನಾವು ಹಿತೋಪದೇಶ ಪಡೆಯುವ ಅಗತ್ಯವಿಲ್ಲ. ಸಿದ್ದರಾಮಯ್ಯ ಬಂದಿದ್ದು ಎಲ್ಲಿಂದ? ಇದೇ ಪಕ್ಷದಿಂದ. ಇವತ್ತು ಒಂಭತ್ತು ಜನ ಮೈನಾರಿಟಿ ನಾಯಕರಾಗಿ ಹೊರಹೊಮ್ಮಿದ್ದರೆ ಅದು ಪಕ್ಷ ಮತ್ತು ದೇವೇಗೌಡರ ಕೊಡುಗೆ ಎಂದು ಕುಮಾರಸ್ವಾಮಿ ಅವರು ತಿರುಗೇಟು ನೀಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಡಿಸೆಂಬರ್ 09 ರಂದು ಹಿರಿಯೂರು ಬಂದ್

ಹಿರಿಯೂರು, ನವೆಂಬರ್. 25 : ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಗಾಯಿತ್ರಿ ಡ್ಯಾಂ ಸೇರಿದಂತೆ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವಂತೆ ಆಗ್ರಹಿಸಿ ರೈತ ಸಂಘದಿಂದ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಸೋಮವಾರ 160ನೇ ದಿನಕ್ಕೆ ಕಾಲಿಟ್ಟಿತು.

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ಪದವಿ ಪ್ರಮಾಣ ಸಮಾರಂಭ : ದಾವಣಗೆರೆ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ.ಬಿ.ಡಿ.ಕುಂಬಾರ್ ಅವರಿಂದ ಉದ್ಘಾಟನೆ  

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ನವೆಂಬರ್. 25 : ಉನ್ನತ ಶಿಕ್ಷಣ ಜಾಗತಿಕ ಮಟ್ಟದಲ್ಲಿ ಬದಲಾವಣೆಯಾಗುತ್ತಿರುವುದರಿಂದ ತಂತ್ರಜ್ಞಾನದ ಬಗ್ಗೆ ಜ್ಞಾನ ಬೆಳೆಸಿಕೊಂಡರೆ

ಟೆನ್ನಿಸ್‍ಬಾಲ್ ಕ್ರಿಕೆಟ್ ಟೂರ್ನಿ : ಟ್ರೋಫಿ ಗೆದ್ದ ಚಿತ್ರದುರ್ಗ ವಕೀಲರ ತಂಡ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ನವೆಂಬರ್. 25 : ಹರಿಹರದಲ್ಲಿ ನವೆಂಬರ್ 23 ಮತ್ತು 24 ರಂದು ನಡೆದ ಅಂತರ್ ಜಿಲ್ಲಾ

error: Content is protected !!