Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಟೋಬಿ ಚೆನ್ನಾಗಿಲ್ಲ ಎಂದ ಯುವತಿಗೆ ಕೆಟ್ಟ ಭಾಷೆಯಲ್ಲಿ ನಿಂದನೆ : ವ್ಯಕ್ತಿ ಪರ ಕ್ಷಮೆಯಾಚಿಸಿದ ರಾಜ್ ಬಿ ಶೆಟ್ಟಿ..!

---Advertisement---

ಟೋಬಿ ಸಿನಿಮಾ ವರಮಹಾಲಕ್ಷ್ಮೀ ಹಬ್ಬದ ದಿನ ಅಂದ್ರೆ ಆಗಸ್ಟ್ 25 ರಂದು ರಿಲೀಸ್ ಆಗಿದೆ. ಸಿನಿಮಾದ ಬಗ್ಗೆ ಪಾಸಿಟಿವ್ ರೆಸ್ಪಾನ್ಸ್ ಕೇಳಿ ಬಂದಿದೆ. ಹಾಗಂತ ಸಿನಿಮಾ ಎಲ್ಲರಿಗೂ ಇಷ್ಟವಾಗಲೇಬೇಕು‌ ಅಂತೇನಿಲ್ಲ. ಬರೀ ಟೋಬಿ ಮಾತ್ರವಲ್ಲ, ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ಧೂಳೆಬ್ಬಿಸಿದ ಸಿನಿಮಾಗಳು ಕೂಡ ಕೆಲವರಿಗೆ ಇಷ್ಟವಾಗಿಲ್ಲ. ಸಿನಿಮಾ ವಿಚಾರದಲ್ಲಿ ಅವರವ ಭಾವನೆಗಳನ್ನು ಗೌರವಿಸಲೇಬೇಕಾಗುತ್ತದೆ. ಆದರೆ ಥಿಯೇಟರ್ ಮುಂದೆ ಯುವತಿಯೊಬ್ಬರು ಸಿನಿಮಾ‌ ಚೆನ್ನಾಗಿಲ್ಲ ಎಂದು ಹೇಳಿದ್ದಾರೆ.

ಅಷ್ಟಕ್ಕೆ ಕೋಪಗೊಂಡ ಅಲ್ಲಿದ್ದ ಹುಡುಗರು ಯುವತಿಯ ಮೇಲೆ ಮುಗಿಬಿದ್ದಿದ್ದಾರೆ. ಕೆಟ್ಟ ಪದಗಳಿಂದ ನಿಂದಿಸಿದ್ದಾರೆ. ಪೊಲೀಸರನ್ನ ಕರೆಸ್ತೀಯಾ ಕರೆಸು ಎಂಬುದಾಗೆಲ್ಲ ಮಾತನಾಡಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ ಅವರ ಗಮನಕ್ಕೂ ಬಂದಿದೆ. ತಕ್ಷಣ ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಕ್ಷಮೆ ಕೇಳಿದ್ದಾರೆ.

“ಅವರು ನಮ್ಮ ಸಿನಿಮಾ ಟೀಂನವರಲ್ಲ. ಆದರೂ ನಾನೂ ಕ್ಷಮೆ ಕೇಳುತ್ತೇನೆ. ಸಿನಿಮಾ ಕೂಡ ವಿಮರ್ಶೆಗೆ ಒಳಪಡುವ ಮಾಧ್ಯಮವೇ ಸರಿ. ಸಿನಿಮಾವನ್ನು ದುಡ್ಡು ಕೊಟ್ಟು ನೋಡುವ ಪ್ರೇಕ್ಷಕರಿಗೆ ತಮಗೆ ಅನ್ನಿಸಿದ್ದನ್ನು ಹೇಳುವ ಹಕ್ಕು ಇದೆ. ಅದನ್ನು ಒಪ್ಪುವುದಕ್ಕೆ ನಾವೂ ಸ್ವತಂತ್ರರು. ಅದನ್ನು ಒಪ್ಪದೆ ಆ ಯುವತಿಗೆ ಕಿರುಕುಳ ನೀಡಲು ಪ್ರಯತ್ನಿಸಬಾರದು. ಈ ವಿಡಿಯೋದಲ್ಲಿರುವ ವ್ಯಕ್ತಿಗಳಿಗೂ ಹಾಗೂ ನಮ್ಮ‌ ಚಿತ್ರಕ್ಕೂ ಸಂಬಂಧವಿಲ್ಲ. ಆದರೆ ಆ ಯುವತಿ ಅನುಭವಿಸಿದ ಕಿರುಕುಳಕ್ಕೆ ನಾನು ಕ್ಷಮೆ‌ಕೇಳುತ್ತೇನೆ” ಎಂದು ಬರೆದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment