ಬೆಂಗಳೂರು: ಬೇರೆ ರಾಷ್ಟ್ರಗಳಲ್ಲಿ ಈಗಾಗಲೇ ಎರಡು ಡೋಸ್ ಗಳ ಬಳಿಕ ಬೂಸ್ಟರ್ ಡೋಸ್ ನೀಡಲಾಗುತ್ತಿದೆ. ಆದರೆ ಈ ಬಗ್ಗೆ ಪ್ರಧಾನಮಂತ್ರಿಗಳು ಮಾತನಾಡುತ್ತಿಲ್ಲ. ಇಂತಹ ವಿಚಾರವಾಗಿ ಅವರು ಮಾತನಾಡಿ ಜನರಿಗೆ ಧೈರ್ಯ ತುಂಬಬೇಕಾಗಿದೆ. ಎರಡು ವರ್ಷಗಳಿಂದ ಇವರು ಹೇಳುತ್ತಿರುವುದು 100 ಕೋಟಿ. ಕೇವಲ ಪದಪುಂಜಗಳ ಪ್ರಚಾರ ಯಾವುದೇ ಪ್ರಯೋಜನವಿಲ್ಲ ಎಂದು ವಿಧಾನ ಪರಿಷತ್ ಸದಸ್ಯರಾದ ಹರಿ ಪ್ರಸಾದ್ ಕಿಡಿಕಾರಿದರು.
ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಮೆರಿಕ 85 ದಿನಗಳಲ್ಲಿ ಮೊದಲ ಡೋಸ್ ಆಗಿ, ನಂತರ ಎರಡನೇ ಡೋಸ್ ಆಗಿ, ಈಗ ಬೂಸ್ಟರ್ ಡೋಸ್ ನೀಡುತ್ತಿದ್ದಾರೆ. ಕೋವಿಡ್ ಸಮಯದಲ್ಲಿ ಲಸಿಕೆ ಸಿಗದ ಸಮಯದಲ್ಲಿ ಜನ ಪ್ರಾಣ ಭಯದಲ್ಲಿ ಖಾಸಗಿ ಆಸ್ಪತ್ರೆಯಲ್ಲಿ 1500 ರಿಂದ 4000 ರೂ. ವರೆಗೂ ಹಣ ಪಾವತಿಸಿ ಹೆಚ್ಚಾಗಿ ಲಸಿಕೆ ಪಡೆದಿದ್ದಾರೆ. ಹೀಗಾಗಿ ಪ್ರಧಾನಮಂತ್ರಿಗಳು ಸಂಭ್ರಮಿಸುವ ಬದಲು ದೇಶದ ಜನರಲ್ಲಿ ಕ್ಷಮೆ ಕೋರಬೇಕು ಎಂದರು.
ಕೇಂದ್ರ ಸರ್ಕಾರ ಅಂಗನವಾಡಿ ಕಾರ್ಯಕರ್ತರು, ನರ್ಸ್ ಸಿಬ್ಬಂದಿ, ವೈದ್ಯರು, ಆರೋಗ್ಯ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಕೇವಲ ಅಭಿನಂದನೆ ಸಲ್ಲಿಸಿದರೆ ಸಾಲದು. ಕೋವಿಡ್ ಬಂದಾಗ ಇವರಿಗೆ ಸರಿಯಾದ ರೀತಿಯಲ್ಲಿ ಭತ್ಯೆ, ಇತರೆ ಅನುಕೂಲ ನೀಡುವುದಾಗಿ ಹೇಳಿತ್ತು. ಆದರೆ ಈವರೆಗೂ ಆ ಬಗ್ಗೆ ಚಕಾರ ಎತ್ತಿಲ್ಲ. ಕೇವಲ ಸುಳ್ಳು ಹೇಳಿ ಪ್ರಚಾರ ಗಿಟ್ಟಿಸಿಕೊಂಡರೆ ಪ್ರಯೋಜನೆವಿಲ್ಲ ಎಂದರು.
ವಿಶ್ವ ಆರೋಗ್ಯ ಸಂಸ್ಥೆ ಕೋವಿಶೀಲ್ಡ್ ಲಸಿಕೆಗೆ ಮಾನ್ಯತೆ ನೀಡುದ್ದು, ಕೋವ್ಯಾಕ್ಸಿನ್ ಗೆ ಮಾನ್ಯತೆ ನೀಡಿಲ್ಲ. ಹೀಗಾಗಿ 100 ಕೋಟಿ ಲಸಿಕೆಯಲ್ಲಿ ಕೋವಿಶೀಲ್ಡ್ ಪಡೆದವರು ಎಷ್ಟು? ಕೋವ್ಯಾಕ್ಸಿನ್ ತೆಗೆದುಕೊಂಡವರು ಎಷ್ಟು ಎಂದು ಸರ್ಕಾರ ಸ್ಪಷ್ಟಪಡಿಸಬೇಕಿದೆ. ಕೋವ್ಯಾಕ್ಸಿನ್ ಪಡೆದವರಿಗೆ ವಿದೇಶಗಳಲ್ಲಿ ಪ್ರವೇಶ ನಿಷೇಧಿಸಲಾಗಿದೆ. ವಿದೇಶದಲ್ಲಿ ಓದಲು ತೆರಳಬೇಕಾಗಿದ್ದ ವಿದ್ಯಾರ್ಥಿಗಳು ಕೋವ್ಯಾಕ್ಸಿನ್ ಪಡೆದು ಅಲ್ಲಿಗೆ ಹೋಗಲು ಸಾಧ್ಯವಾಗಿದೆ ಪರದಾಡುತ್ತಿದ್ದಾರೆ. ಹೀಗಾಗಿ 100 ಕೋಟಿಯಲ್ಲಿ ಎಷ್ಟು ಕೋವಿಶೀಲ್ಡ್ ಲಸಿಕೆ ಕೊಟ್ಟಿದ್ದಾರೆ ಎಂಬುದು ಮುಖ್ಯ ಎಂದು ತಿಳಿಸಿದರು.
ವಿಕೃತ ಮನಸ್ಥಿತಿಯವರು ಮಾತ್ರ 100 ಲಸಿಕೆ ಕೊಟ್ಟಿದ್ದೇವೆ ಎಂದು ಸಂಭ್ರಮಪಟ್ಟು ಪ್ರಚಾರ ಪಡೆಯುತ್ತಾರೆ. ದೇಶದ ಜನರಿಗೆ ಇಷ್ಟು ದಿನವಾದರೂ 2 ಡೋಸ್ ನೀಡಲು ಆಗಿಲ್ಲ, ಜನರು ಕಷ್ಟ ಅನುಭವುಸಿದ್ದು, ಈಗ ಸಂಭ್ರಮಿಸುವ ಬದಲು ಕ್ಷಮೆ ಕೊರಲಿ’ ಎಂದರು.