Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉತ್ತರಾಖಂಡ ಪ್ರವಾಸದಲ್ಲಿರುವ ಎಲ್ಲ ಕನ್ನಡಿಗರು ಸಂಪರ್ಕದಲ್ಲಿದ್ದಾರೆ : ಆರ್ ಅಶೋಕ್

Facebook
Twitter
Telegram
WhatsApp

ಬೆಂಗಳೂರು: ಉತ್ತರಾಖಂಡ ರಾಜ್ಯದಲ್ಲಿ ಎರಡು ದಿನಗಳ ಕಾಲ ಸುರಿದಂಥ ದಾಖಲೆ ಪ್ರಮಾಣದ ಭಾರಿ ಮಳೆಯಿಂದಾಗಿ ಹಲವು ನದಿಗಳಲ್ಲಿ ಪ್ರವಾಹ ಮತ್ತು ಹಲವು ಭಾಗಗಳಲ್ಲಿ ಭೂಕುಸಿತದಿಂದ ಪ್ರಾಣ ಹಾನಿ, ಸಾವಿರಾರು ಮನೆ ಹಾಗೂ ಮೂಲಭೂತ ಸೌಕರ್ಯಗಳಿಗೆ ಹಾನಿಯಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದರು.

ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ರಾಜ್ಯದಿಂದ ಉತ್ತರಾಖಂಡ ರಾಜ್ಯದ ಪ್ರವಾಸಕ್ಕೆ ಹಲವರು ತೆರಳಿದ್ದು, ಅವರ ರಕ್ಷಣೆಗೆ ಕಂದಾಯ ಇಲಾಖೆಯ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಹಲವಾರು ಕರೆಗಳು ಬಂದಿದೆ.

ತಕ್ಷಣವೇ ಕಾರ್ಯಪ್ರವೃತ್ತವಾದ ವಿಪತ್ತು ನಿರ್ವಹಣಾ ಇಲಾಖೆ ಉತ್ತರಾಖಂಡ ಸರ್ಕಾರದ ಜೊತೆ ಸತತ ಸಂಪರ್ಕ ದಲ್ಲಿದ್ದು ರಾಜ್ಯದಿಂದ ಪ್ರವಾಸ ಕೈಗೊಂಡಿರುವ ವಿವರಗಳನ್ನು ನೀಡಿ, ಅವರ ಸುರಕ್ಷತೆಯ ಬಗ್ಗೆ ಮಾಹಿತಿ ವಿನಿಮಯ ಮಾಡಿದೆ.

ನಮ್ಮ ರಾಜ್ಯದ 10 ಕುಟುಂಬಗಳ ಎಲ್ಲಾ 96 ಜನರನ್ನು ಪತ್ತೆ ಹಚ್ಚಿ, ಎಲ್ಲರೂ ಸುರಕ್ಷಿತವಾಗಿರುವುದಾಗಿ ತಿಳಿಸಿದೆ. ವಿಪತ್ತು ನಿರ್ವಹಣಾ ಇಲಾಖೆ ಸಹಾಯವಾಣಿ ಸ್ಥಾಪಿಸಿ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಅಲ್ಲಿ ಸಿಲುಕಿರುವ ಎಲ್ಲರ ರಕ್ಷಣೆಗೆ ನಾವು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ‌. ಯಾರು ಭಯಪಡಬೇಕಾದ ಅಗತ್ಯವಿಲ್ಲ ಎಂದು ಹೇಳಿದರು.

ಗಡಿಕೇಶ್ವರ ಭೂಕಂಪದ ಕುರಿತು ಮಾತನಾಡಿದ ಆರ್ ಅಶೋಕ್
ಸುಮಾರು 10ವರ್ಷದಿಂದ ಅಲ್ಲಿ ಈ ಸಮಸ್ಯ ಇದೆ. ನಾನೇ ಖುದ್ದು ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯ ಅವಲೋಕನ ಮಾಡಿ, 30 ಕ್ಕೂ ಹೆಚ್ಚು ಮನೆಗಳಿಗೆ ಹೋಗಿ ಅಲ್ಲಿನ ಜನರ ಸಮಸ್ಯೆ ಆಲಿಸಿದ್ದೇನೆ. ಎಲ್ಲರಿಗೂ ತಾತ್ಕಾಲಿಕ ಶೆಡ್ ವ್ಯವಸ್ಥೆ ಮಾಡಿದ್ದೇವೆ. ಸುಣ್ಣದ ಅಂಶ ಅಲ್ಲಿನ ಮಣ್ಣಿನಲ್ಲಿ ಹೆಚ್ಚಾಗಿರುವದರಿಂದ, ಹೆಚ್ಚು ಮಳೆಯಾದಾಗ ಈ ಸಮಸ್ಯೆ ಆಗುತ್ತದೆ ಎಂದು ವಿಜ್ಞಾನಿಗಳು ಪ್ರಾಥಮಿಕ ವರದಿ ನೀಡಿದ್ದಾರೆ. ಇನ್ನು ಒಂದು ತಿಂಗಳ ಕಾಲ ವಿಜ್ಞಾನಿಗಳು ಸತತ ಸಂಶೋಧನೆ ಮಾಡಿ ಅಂತಿಮ ವರದಿ ನೀಡುತ್ತಾರೆ. ನಾವು ಅತ್ಯಾಧುನಿಕ ಸೆಟ್ ಲೈಟ್ ಫೋನ್ ಮೂಲಕ ಅಲ್ಲಿಯ ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಪರಿಹಾರ ಕಾರ್ಯಕ್ಕೆ ಅನುಕೂಲವಾಗುವ ದೃಷ್ಟಿಯಿಂದ ಜಿಲ್ಲಾಧಿಕಾರಿಗಳ ಖಾತೆಗೆ ಸಾಕಷ್ಟು ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!