Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೋಡ ಬಿತ್ತನೆ ಯಶಸ್ವಿಯಾದ ಉದಾಹರಣೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Facebook
Twitter
Telegram
WhatsApp

 

ಮೈಸೂರು, ಆಗಸ್ಟ್ 28: ರಾಜ್ಯದಲ್ಲಿ ಬರದ ಛಾಯೆಯಿರುವ ಬಗ್ಗೆ  ಸಚಿವ ಸಂಪುಟ ಉಪ ಸಮಿತಿಯ ಸಭೆ ಇಂದು ಅಥವಾ ನಾಳೆ ನಡೆಯಲಿದ್ದು, ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಮಾಡಿ, ಸಚಿವ ಸಂಪುಟದಲ್ಲಿ  ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ  ಸರ್ಕಾರಿ ಭವನದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಮೋಡ ಬಿತ್ತನೆ ಇಂದಿನವರೆಗೂ ಎಲ್ಲಿಯೂ ಯಶಸ್ವಿಯಾಗಿಲ್ಲ. ಬರಗಾಲ ಘೋಷಣೆಯಾದ ಮೇಲೆ ಕೇಂದ್ರ ಸರ್ಕಾರದವರಿಗೆ ತಿಳಿಸಲಾಗುವುದು. ಕೇಂದ್ರ ಸರ್ಕಾರದವರು ಪರಿಶೀಲಿಸಿದ ನಂತರ ಎನ್.ಡಿ.ಆರ್.ಎಫ್ ಮಾರ್ಗಸೂಚಿಗಳ ಪ್ರಕಾರ ನೆರವು ನೀಡುತ್ತಾರೆ ಎಂದರು. ಬರಗಾಲ ಎಂದು ಘೋಷಣೆಯಾದ ನಂತರ ಆ ತಾಲ್ಲೂಕುಗಳಲ್ಲಿ  ಬರ ಪರಿಹಾರವಾಗಿ  ಜನರಿಗೆ ಕೆಲಸ, ಮುಂತಾದ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗುವುದು ಎಂದರು.

ಮೂರು ದಿನಗಳ ಪ್ರವಾಸ :
ಮೂರು ದಿನಗಳ ಕಾಲ ಮೈಸೂರು ಪ್ರವಾಸ ಕೈಗೊಂಡಿದ್ದು, ಇಂದು ಕೆಡಿಪಿ ಸಭೆ ನಡೆಸಿದ್ದೇನೆ.  ನಾಳೆ ಸುತ್ತೂರು ಮಠ ಹಾಗೂ ಸಿದ್ದಲಿಂಗಪುರದಲ್ಲಿ ಹಮ್ಮಿಕೊಂಡಿರುವ  ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಾಗಿ ತಿಳಿಸಿದರು.

ಒಂದು ಲಕ್ಷ ಕ್ಕೂ ಹೆಚ್ವು ಜನ ಸೇರುವ ನಿರೀಕ್ಷೆ :
ಕೆ.ಆರ್.ಆಸ್ಪತ್ರೆಯಲ್ಲಿ  ಸುಟ್ಟಗಾಯಗಳಿಗೆ ಚಿಕಿತ್ಸೆ ನೀಡುವ ಬರ್ನ್ಸ್ ವಾರ್ಡ್ ಉದ್ಘಾಟನೆ ಇದೆ. ಆಗಸ್ಟ್ 30 ರಂದು ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುವುದು. ಚುನಾವಣಾ ಪೂರ್ವದಲ್ಲಿ  ಘೋಷಣೆ ಮಾಡಿದಂತೆ 3 ಗ್ಯಾರಂಟಿ ಗಳನ್ನು ಕಾರಿ ಮಾಡಿದ್ದು, ನಾಲ್ಕನೇ ಗ್ಯಾರಂಟಿ ಯನ್ನು ಜಾರಿ ಮಾಡಲಿದ್ದೇವೆ ಎಂದರು. ಒಂದು ಲಕ್ಷ ಕ್ಕೂ ಹೆಚ್ವು ಜನ ಸೇರುವ ನಿರೀಕ್ಷೆ ಇದ್ದು,  ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ, ಆಗಮಿಸಲಿದ್ದಾರೆ. ಖರ್ಗೆಯವರು ಉದ್ಘಾಟಿಸಿ, ನನ್ನ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಲಿದೆ ಎಂದರು.

ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ನಾಲ್ಕು ಜಿಲ್ಲೆಗಳು ಸೇರಿ ಕಾರ್ಯಕ್ರಮ ಆಯೋಜಿಸಿದೆ. ಎಲ್ಲಾ ಕಾರ್ಯಕ್ರಮ ಗಳಲ್ಲಿ ಭಾಗವಹಿಸುವುದಾಗಿ ಮುಖ್ಯ ಮಂತ್ರಿಗಳು ತಿಳಿಸಿದರು.

ಗೃಹಲಕ್ಷ್ಮೀ ದೇಶದಲ್ಲಿಯೇ ದೊಡ್ಡ ಕಾರ್ಯಕ್ರಮ :
ದೇಶದಲ್ಲಿಯೇ ಇದು ದೊಡ್ಡ ಕಾರ್ಯಕ್ರಮ. ವರ್ಷದಲ್ಲಿ ಸುಮಾರು 32,ಸಾವಿರ ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುತ್ತಿದೆ. ಈ ವರ್ಷ ಸುಮಾರು 18 ಸಾವಿರ ಕೋಟಿ ರೂ. ಗಳು ವೆಚ್ಚವಾಗಲಿದೆ. 1.33 ಕೋಟಿ ಲಕ್ಷ ಕುಟುಂಬಗಳ ಯಜಮಾನಿಗೆ 2000 ರೂ. ನೀಡಲಾಗುತ್ತಿದೆ.ಒಂದು ತಿಂಗಳಿಗೆ 4-5 ಸಾವಿರ ರೂ.ಗಳು ಒಂದು ಕುಟುಂಬ ಕ್ಕೆ ದೊರೆಯಲಿದೆ. ಇದರಿಂದ ಅವರ ಕೊಂಡುಕೊಳ್ಳುವ ಸಾಮರ್ಥ್ಯ ಹೆಚ್ಚುತ್ತದೆ. ಅವರ ಕೈಯಲ್ಲಿ ದುಡ್ಡು ಇರುವುದರಿಂದ ಆರ್ಥಿಕ ಚಟುವಟಿಕೆಗಳು ಹೆಚ್ಚಾಗುತ್ತವೆ.  ಎಲ್ಲಿ ಕೊಂಡುಕೊಳ್ಳುವ ಶಕ್ತಿ ಹೆಚ್ಚಿರುತ್ತದೆಯೋ ಅಲ್ಲಿ ಜಿಡಿಪಿ ಕೂಡ ಬೆಳವಣಿಗೆ ಆಗುತ್ತದೆ ವರ್ಷಕ್ಕೆ ಉದ್ಯೋಗ ಸೃಷ್ಟಿಯೂ ಆಗುತ್ತದೆ ಎಂದರು.

ಬೆಳಗಾವಿಯಿಂದ  ಕಾರ್ಯಕ್ರಮ ಮೈಸೂರಿಗೆ ಸ್ಥಳಾಂತರ ವಾಗಿರುವ ಪ್ರತಿಕ್ರಿಯೆ ನೀಡಿ  ಎಲ್ಲಾ ಜಿಲ್ಲೆಗಳಲ್ಲಿಯೂ ಕಾರ್ಯಕ್ರಮ ಜಾರಿಯಾಗಲಿದೆ. ಬೆಳಗಾವಿಗೆ ಬದಲಾಗಿ ಮೈಸೂರಿನಲ್ಲಿ ಏರ್ಪಾಡಾಗಿದೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

error: Content is protected !!