Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಮಳೆ ಕೊರತೆಯ ನಡುವೆಯೂ ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ನೀರು ಹರಿಸಲು ಸೂಚನೆ..!

---Advertisement---

 

 

ಕರ್ನಾಟಕದಲ್ಲಿ ವಾಡಿಕೆಯಂತೆ ಮಳೆಯಾಗಿಲ್ಲ. ಮಳೆ ಇಲ್ಲದೆ ರೈತರು ಕಂಗಲಾಗಿದ್ದಾರೆ. ಬೆಳೆ ಅಂತು ಅನುಮಾನ, ಕುಡಿಯುವುದಕ್ಕೂ ನೀರಿಗೆ ಹಾಹಾಕಾರ ಶುರುವಾದರೆ ಹೇಗೆ ಎಂಬ ಚಿಂತನೆಯಲ್ಲಿದ್ದಾರೆ. ಇದರ ನಡುವೆ ತಮಿಳುನಾಡು ಮಾತ್ರ ತನ್ನ ಕ್ಯಾತೆ‌ ಮುಂದುವರೆಸಿದೆ. ನಮಗೆ ನೀರು ಬೇಕೆ ಬೇಕು ಎಂಬ ಹಠ ಮಾಡಿದೆ‌. ತಮಿಳುನಾಡಿನ ಪರವೇ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಇದೀಗ ಅನುಮತಿ ನೀಡಿದೆ.

ಕರ್ನಾಟಕಕ್ಕೆ ಪ್ರಾಧಿಕಾರ ಸೂಚನೆ ನೀಡಿದ್ದು, ಪ್ರತಿ ದಿನ 5 ಸಾವಿರ ಕ್ಯೂಸೆಕ್ ನೀರನ್ನು ಹರಿಸಬೇಕೆಂದು ಸೂಚಿಸಿದೆ. ಮುಂದಿನ 15 ದಿನ ಪ್ರತಿನಿತ್ಯ ಐದು ಸಾವಿರ ಕ್ಯೂಸೆಕ್ ಹರಿಸುವಂತೆ ತಿಳಿಸಿದೆ. ತಮಿಳುನಾಡಿನ ಬಿಳಿಗುಂಡ್ಲು ಮಾಪನ ಕೇಂದ್ರದಲ್ಲಿ 5000 ಕ್ಯೂಸೆಕ್ ದಾಖಲಾಗಬೇಕು. ಹೀಗಾಗಿ ನೀರು ಹರಿಸಲು ಸೂಚಿಸಿದೆ. ಈ ಹಿಂದೆ 15 ಸಾವಿರ ಕ್ಯೂಸೆಕ್ ನೀರು ಹರಿಸಲು ಸೂಚಿಸಿತ್ತು. ಸದ್ಯ ಅದನ್ನು 10 ಸಾವಿರಕ್ಕೆ ಇಳಿಸಿದೆ.

ಇನ್ನು ನಾಳೆ ಈ ಸಂಬಂಧ ದೆಹಲಿಯಲ್ಲು ಸಭೆ ನಡೆಯಲಿದೆ. ಕರ್ನಾಟಕವೂ ನೀರು ಬಿಡುವ ವಿಚಾರದಲ್ಲಿ ಗಟ್ಟಿ ನಿರ್ಧಾರ ಹೇಳಲಿದೆ. ರಾಜ್ಯದ ಪರಿಸ್ಥಿತಿ ವಿವರಿಸಲಿದೆ. ಇದಾದ ನಂತರ ಸಭೆಯಲ್ಲಿ ಯಾವ ರೀತಿಯ ತೀರ್ಮಾನ ಮಾಡ್ತಾರೋ ನೋಡಬೇಕಿದೆ. ಆದ್ರೆ ತಮಿಳುನಾಡಿಗೆ ಪ್ರತಿ ದಿನ ನೀರು ಬಿಟ್ಟರೆ, ಕರ್ನಾಟಕ ಜನತೆ ನೀರಿಗಾಗಿ ಪರದಾಡ ಬೇಕಾಗುತ್ತದೆ. ಹೀಗಾಗಿ ಇಂಥ ಪರಿಸ್ಥಿತಿ ನಿರ್ಮಾಣವಾಗಬಾರದು ಎಂಬ ಕಾರಣಕ್ಕೆ ರೈತರು ಹೋರಾಟ ಮುಂದುವರೆಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...