ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಚಿಕ್ಕೋಡಿ: ಮದುವೆ ಊಟ ಅಂತ ಖುಷಿ ಖುಷಿಯಾಗಿ, ಹೊಟ್ಟೆ ತುಂಬಾ ತಿಂದವರು ಇದೀಗ ಅಸ್ವಸ್ಥರಾಗಿ ಹಾಸಿಗೆ ಹಿಡಿದಿದ್ದಾರೆ. ಈ ಘಟನೆ ನಡೆದಿರೋದು ಚಿಕ್ಕೋಡಿಯ ಹಿರೇಕೋಡಿ ಗ್ರಾಮದಲ್ಲಿ. ಮಾಂಸಾಹಾರ ಸೇವಿಸಿದ ಬಹುತೇಕ ಜನರು ಅಸ್ವಸ್ಥರಾಗಿದ್ದಾರೆ. 100 ಹೆಚ್ಚು ಜನ ವಾಂತಿ, ಬೇಧಿ ಮಾಡಿಕೊಂಡಿದ್ದಾರೆ.
ನಿನ್ನೆ ಹಿರೇಕೋಡಿ ಗ್ರಾಮದ ಪಟೇಲರ ಮನೆಯಲ್ಲಿ ಮದುವೆ ಸಂಭ್ರಮ ಕಳೆಗಟ್ಟಿತ್ತು. ಎಲ್ಲರೂ ಮದುವೆಯಲ್ಲಿ ಖುಷಿ ಖುಷಿಯಾಗಿ ಓಡಾಡಿಕೊಂಡಿದ್ದರು. ಮದುವೆಯೆಂದ ಮೇಲೆ ಭರ್ಜರಿ ಭೋಜನವೂ ಇರಲೇಬೇಕು ಅಲ್ಲವೆ. ಅದರಲ್ಲಿ ಮಾಂಸಾಹಾರ ಹಾಗೂ ಸಸ್ಯಹಾರ ಎರಡು ಶೈಲಿಯ ಊಟದ ವ್ಯವಸ್ಥೆ ಮಾಡಲಾಗಿತ್ತು.
ಆದರೆ ಮಾಂಸಾಹಾರದವರು ಚಿಕನ್ ಮತ್ತು ಅನ್ನ ತಿಂದ ಬಹುತೇಕರಲ್ಲಿ ವಾಂತಿ, ಬೇಧಿ ಸಮಸ್ಯೆ ಉಂಟಾಗಿದೆ. ಊಟ ಮಾಡಿದ ಕೆಲವೇ ಕ್ಷಣಗಳಲ್ಲಿ ಅಸ್ವಸ್ಥರಾಗಿದ್ದಾರೆ. ತಕ್ಷಣ ವೈದ್ಯರನ್ನು ಕರೆಸಿದ್ದಾರೆ. ಗ್ರಾಮದಲ್ಲಿಯೇ ಇರುವ ಸರ್ಕಾರಿ ಶಾಲೆಯೇ ಈಗ ಆಸ್ಪತ್ರೆಯಾಗಿದೆ. ಅಲ್ಲಿಯೇ ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಅಸ್ವಸ್ಥರಾಗುತ್ತಿರುವವರ ಸಂಖ್ಯೆ ಇನ್ನು ಹೆಚ್ಚಾಗುತ್ತಲೆ ಇದೆ. ತೀವ್ರ ಅಸ್ವಸ್ಥಗೊಂಡವರನ್ನು ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್