ಚಿತ್ರದುರ್ಗ : ಇಲ್ಲಿನ ಧರ್ಮಶಾಲಾ ರಸ್ತೆ ನಿವಾಸಿ ವಿ.ಜಗದೀಶ್‍ರಾವ್ ಗುರುವಾರ ಬೆಳಿಗ್ಗೆ 9-30 ರಲ್ಲಿ ಬಸವೇಶ್ವರ ಆಸ್ಪತ್ರೆಯಲ್ಲಿ ನಿಧನರಾದರು.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.
ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಲ್ಲಿನ ಮುಕ್ತಿಧಾಮದಲ್ಲಿ ಗುರುವಾರ ನಡೆಸಲಾಯಿತೆಂದು ಕುಟುಂಬದವರು ತಿಳಿಸಿದ್ದಾರೆ.