ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, ಆ.29 : ಆಪರೇಷನ್ ಹಸ್ತದ ವಿಚಾರ ಎಲ್ಲೆಡೆಯೂ ಸಾಕಷ್ಟು ಸದ್ದು ಮಾಡುತ್ತಿದೆ. ಅದು ಎಲ್ಲರಿಗೂ ಗೊತ್ತಿರುವ ವಿಚಾರ. ಹಾಗೆಯೇ ಕಾಂಗ್ರೆಸ್ ನಾಯಕರು ಕೂಡ ಯಾರು ಬೇಕಾದರೂ ಪಕ್ಷಕ್ಕೆ ಬರಬಹುದು ಎಂದು ಓಪನ್ ಆಗಿಯೇ ಕರೆಯುತ್ತಿದ್ದಾರೆ. ಇದೀಗ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಕೂಡ ಇಂದು ಚಿತ್ರದುರ್ಗ ಜಿಲ್ಲೆಯಲ್ಲಿ ಅದನ್ನೇ ಉಚ್ಚರಿಸಿದ್ದಾರೆ.
ಸಚಿವ ಚೆಲುವರಾಯಸ್ವಾಮಿ ಅವರು ಮಾತನಾಡಿ, ಬಿಜೆಪಿಯ ನಾಯಕರು ಹಾಗೂ ಶಾಸಕರು ಯಾರೂ ಬೇಕಾದರೂ ಕಾಂಗ್ರೆಸ್ ಪಕ್ಷಕ್ಕೆ ಸೇರಬಹುದು. ನಮ್ಮ ಪಕ್ಷದ ಸಿದ್ದಾಂತವನ್ನು ಒಪ್ಪಿ ಯಾರೂ ಬೇಕಾದರೂ ಪಕ್ಷಕ್ಕೆ ಬರಬಹುದು. ಈಗಾಗಲೇ ನಾವೂ 136 ಶಾಸಕರಿದ್ದೀವಿ. ಸರ್ಕಾರ ಸುಭದ್ರವಾಗಿದೆ. ನಮಗೆ ಯಾವುದೇ ಭಯವಿಲ್ಲ. ನಮಗೇ ಏನು ಕೊರತೆಯಿಲ್ಲ ಎಂದಿದ್ದಾರೆ.
ಇನ್ನು ಬಿಜೆಪಿಯಲ್ಲಿ ಕಳೆದ ಮೂರು ತಿಂಗಳಿನಿಂದ ನಾಯಕತ್ವದ ಕೊರತೆ ಎದ್ದು ಕಾಣುತ್ತಿದೆ. ಹೀಗಾಗಿ ನಾಯಕತ್ವ ಇಲ್ಲದ ಪಕ್ಷದಲ್ಲಿ ಇರಬೇಕಾ ಅಥವಾ ಬೇಡವಾ ಎಂಬ ಗೊಂದಲದಲ್ಲಿ ಅವರಿದ್ದಾರೆ. ಮೊನ್ನೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಬಂದಾಗ ಅವರ ಸ್ಥಿತಿ ಹೇಗಿತ್ತು ನೋಡಿದ್ದೀರಿ ಅಲ್ವಾ ಎಂದು ಅವತ್ತಿನ ಪರಿಸ್ಥಿತಿ ನೆನೆದು ವ್ಯಂಗ್ಯವಾಡಿದ್ದಾರೆ. ಇನ್ನು ಜೆಡಿಎಸ್, ಬಿಜೆಪಿಯ ಹಾಲಿ, ಮಾಜಿ ನಾಯಕರು ಬಯಸಿದರೆ ನಮ್ಮ ಪಕ್ಷಕ್ಕೆ ಧಾರಾಳವಾಗಿ ಬರಬಹುದು ಎಂದೇ ಆಹ್ವಾನ ನೀಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್