Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಲ್ಲಿಕಾರ್ಜುನಪ್ಪ ನಿಧನ

---Advertisement---

 

 

ಸುದ್ದಿಒನ್, ಚಿತ್ರದುರ್ಗ, ಆ.29 : ನಗರದ ಐಯುಡಿಪಿ ಬಡಾವಣೆ ಸಮೀಪದ ಕೆ.ಹೆಚ್.ಬಿ. ಕಾಲೋನಿಯ ನಿವಾಸಿ ಮಲ್ಲಿಕಾರ್ಜುನಪ್ಪ (74) ಇಂದು(ಮಂಗಳವಾರ) ಸಂಜೆ 7:30 ರ ವೇಳೆಗೆ ಅನಾರೋಗ್ಯದಿಂದ ನಿಧನರಾದರು.

ಪತ್ನಿ, ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ನಾಳೆ(ಬುಧವಾರ) ನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಗುರುವಾರ ಸಂಜೆ 4.00 ಗಂಟೆಯ ನಂತರ ಅಂತ್ಯಕ್ರಿಯೆಯನ್ನು ಅವರ ಸ್ವಗ್ರಮವಾದ ಚಿಕ್ಕಸಿದ್ದವ್ವನಹಳ್ಳಿಯಲ್ಲಿ ನೆರವೇರಿಸಲಾಗುವುದೆಂದು ಕುಟುಂಬದ ಮೂಲಗಳು ತಿಳಿಸಿದೆ.

ನಿವೃತ್ತ ಪೋಸ್ಟ್ ಮಾಸ್ಟರ್ ಆಗಿದ್ದರು. ನಿವೃತ್ತಿಯ ನಂತರ ಪತಂಜಲಿ ಯೋಗ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಯೋಗ ಕುರಿತು ವಿಶೇಷ ಆಸಕ್ತಿ ಹೊಂದಿದ್ದ  ಇವರು ಯೋಗ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಜನರಿಗೆ ಯೋಗದ ಮಹತ್ವವನ್ನು ತಿಳಿ ಹೇಳುವ ಮೂಲಕ ಅಪಾರ ಜನಪ್ರಿಯತೆಯನ್ನು ಗಳಿಸಿದ್ದರು. ಇವರು ನಿಧನರಾದ ಸುದ್ದಿ ತಿಳಿದು ಹಲವಾರು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ನಗರದ ಪ್ರಮುಖರು ಮತ್ತು ಅಪಾರ ಸಂಖ್ಯೆಯ ಸಾರ್ವಜನಿಕರು ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment