Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದ ಶ್ರೀ ರಾಘವೇಂದ್ರ ಸ್ವಾಮಿಗಳ  ಮಠದಲ್ಲಿ ಅದ್ದೂರಿಯಾಗಿ ನಡೆಯುತ್ತಿರುವ ಪೂರ್ವಾರಾಧನೆ

---Advertisement---

 

 

ಸುದ್ದಿಒನ್, ಚಿತ್ರದುರ್ಗ, ಆ.31 : ಇಲ್ಲಿನ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಶಾಖಾ ಮಠದಲ್ಲಿ ಶ್ರೀ ಗುರುರಾಘವೇಂದ್ರ ಸ್ವಾಮಿಗಳ 352 ನೇ ಆರಾಧನಾ ಮಹೋತ್ಸವದ ಅಂಗವಾಗಿ ಪೂರ್ವಾರಾಧನೆ ವಿಜೃಂಭಣೆಯಿಂದ ನೆರವೇರುತ್ತಿದೆ.

ಶ್ರೀ ಮಠದಲ್ಲಿ ಆರಾಧನಾ ಮಹೋತ್ಸವದ ಮೂರನೆಯ ಪೂರ್ವಾರಾಧನೆ ದಿನವಾದ ಇಂದು ಬೆಳಿಗ್ಗೆಯಿಂದಲೇ ಶ್ರೀ ಗುರುರಾಯರ ವೃಂದಾವನಕ್ಕೆ ನಿರ್ಮಾಲ್ಯ, ಅಷ್ಟೋತ್ತರ ಸಹಿತ ವಿಶೇಷ ಫಲ ಪಂಚಾಮೃತ ಅಭಿಷೇಕ,  ವಿಶೇಷ ಬಾಳೆದಿಂಡಿನ ಅಲಂಕಾರ, ಉತ್ಸವರಾಯರ ಪಾದಪೂಜೆ, ಕನಕಾಭಿಷೇಕ, ಮಧ್ಯಾಹ್ನ ನೈವೇದ್ಯ, ಅಲಂಕಾರ ಪಂಕ್ತಿ, ಹಸ್ತೋದಕ, ಮಹಾ ಮಂಗಳಾರತಿ, ತೀರ್ಥ ಪ್ರಸಾದಗಳು ನೆರವೇರಿದವು. ಸಾವಿರಾರು ಮಂದಿ ಭಕ್ತಾದಿಗಳು ಅನ್ನದಾನ ಪ್ರಸಾದ ಸ್ವೀಕರಿಸಿದರು.

ಈ ದಿನದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಂಜೆ ಶ್ರೀ ಪಾಂಡುರಂಗ ಭಜನಾಮಂಡಳಿಯವರಿಂದ ಭಜನೆ, ಶ್ರೀಮತಿ ಸಿಂಧೂರ, ಕುಮಾರಿ ಸೌಂದರ್ಯ, ಸಂಗೀತಾ ಅವರಿಂದ ಭರತನಾಟ್ಯ ಕಾರ್ಯಕ್ರಮಗಳು ನಡೆಯುತ್ತಿವೆ.

ತದನಂತರದಲ್ಲಿ ರಜತ ರಥೋತ್ಸವ, ಸ್ವಸ್ತಿವಾಚನ, ಅಷ್ಟಾವಧಾನ, ಮಹಾಮಂಗಳಾರತಿಯ ಕಾರ್ಯಕ್ರಮಗಳು ನಡೆಯಲಿವೆ.

ಸೆಪ್ಟೆಂಬರ್ 1 ರಂದು ಮಧ್ಯಾರಾಧನೆ ಹಾಗೂ ಹಾಗೂ ಸೆಪ್ಟೆಂಬರ್ 2 ರಂದು ಉತ್ತರಾರಾಧನೆಯ ಕಾರ್ಯಕ್ರಮಗಳಲ್ಲಿಯೂ ಸಕಲ ಸದ್ಭಕ್ತರು ಪಾಲ್ಗೊಂಡು ಶ್ರೀ ಗುರುರಾಯರ ದರ್ಶನ ಪಡೆದು ಪ್ರಸಾದಾನುಗ್ರಹಗಳಿಗೆ ಭಾಜನರಾಗಬೇಕೆಂದು ಶ್ರೀಮಠದ ವ್ಯವಸ್ಥಾಪಕರಾದ ಪ್ರಾಣೇಶ್ ಕೊಪ್ಪರ್ ಅವರು ಹಾಗೂ ಗೌರವ ವಿಚಾರಣಕರ್ತರಾದ ಗೋವಿಂದಮೂರ್ತಿ ಅವರು ಸದ್ಭಕ್ತರಲ್ಲಿ ವಿನಂತಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment