Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕೇಂದ್ರದ ಮಹತ್ವದ ನಿರ್ಧಾರ : ಒಂದು ರಾಷ್ಟ್ರ, ಒಂದು ಚುನಾವಣೆಗೆ ಅಧ್ಯಯನ ಸಮಿತಿ ರಚನೆ…!

---Advertisement---

ಸುದ್ದಿಒನ್, ನವದೆಹಲಿ: ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾಪದ ಮೇಲೆ ಮಹತ್ವದ ನಿರ್ಧಾರಕ್ಕೆ ಮುಂದಡಿಯಿಟ್ಟಿರುವ ಕೇಂದ್ರ ಸರ್ಕಾರ ಈ ಕುರಿತು ಅಧ್ಯಯನ ಮಾಡಲು ಮತ್ತು ವರದಿಯನ್ನು ಸಲ್ಲಿಸಲು ಸಮಿತಿಯನ್ನು ರಚಿಸಿದೆ. ಸಮಿತಿಯ ನೇತೃತ್ವವನ್ನು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವಹಿಸಲಿದ್ದಾರೆ.

ಸೆಪ್ಟೆಂಬರ್ 18 ರಿಂದ 22 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕೇಂದ್ರ ಘೋಷಿಸಿದ ಒಂದು ದಿನದ ನಂತರ ಈ  ಅಚ್ಚರಿಯ ಘೋಷಣೆ ಮಾಡಲಾಗಿದೆ. ಅಧಿವೇಶನದಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಮಸೂದೆಯನ್ನು ಮಂಡಿಸಲಾಗುವುದು ಎಂಬ ಊಹಾಪೋಹವಿದೆ.  ಆದರೆ ಸರ್ಕಾರದಿಂದ ಯಾರೂ ಇದನ್ನು ಇಲ್ಲಿಯವರೆಗೆ ಖಚಿತಪಡಿಸಿಲ್ಲ.

ಒಂದು ರಾಷ್ಟ್ರ, ಒಂದು ಚುನಾವಣೆ’ ಎಂದರೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳನ್ನು ದೇಶಾದ್ಯಂತ ಏಕಕಾಲದಲ್ಲಿ ನಡೆಸುವುದು. ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಹಲವಾರು ಸಂದರ್ಭಗಳಲ್ಲಿ ಈ ವಿಷಯದ ಬಗ್ಗೆ ಮಾತನಾಡಿದ್ದಾರೆ ಮತ್ತು ಇದು 2014 ರ ಲೋಕಸಭೆ ಚುನಾವಣೆಯ ಪಕ್ಷದ ಪ್ರಣಾಳಿಕೆಯ ಭಾಗವಾಗಿದೆ.

1967 ರವರೆಗೆ ಭಾರತದಲ್ಲಿ ಏಕಕಾಲದಲ್ಲಿ ಮತದಾನವನ್ನು ನಡೆಸುವುದು ರೂಢಿಯಲ್ಲಿತ್ತು. 1968-69ರಲ್ಲಿ ಕೆಲವು ರಾಜ್ಯಗಳ ಅಸೆಂಬ್ಲಿಗಳು ಅಕಾಲಿಕವಾಗಿ ವಿಸರ್ಜಿಸಲ್ಪಟ್ಟ ನಂತರ ಈ ಪದ್ಧತಿಯು ನಿಂತುಹೋಯಿತು. ಲೋಕಸಭೆಯು ಮೊದಲ ಬಾರಿಗೆ ನಿಗದಿತ ಅವಧಿಗಿಂತ ಒಂದು ವರ್ಷ ಮುಂಚಿತವಾಗಿ ವಿಸರ್ಜಿಸಲ್ಪಟ್ಟಿತು ಮತ್ತು 1971 ರಲ್ಲಿ ಮಧ್ಯಂತರ ಚುನಾವಣೆಗಳು ನಡೆದವು.

ಬಿಜೆಪಿ ತನ್ನ 2014 ರ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ವಿಧಾನವನ್ನು ಅಭಿವೃದ್ಧಿಪಡಿಸುವುದಾಗಿ ಭರವಸೆ ನೀಡಿತ್ತು.

ಪ್ರಣಾಳಿಕೆಯ ಪುಟ 14, “ಕ್ರಿಮಿನಲ್‌ಗಳನ್ನು ತೊಡೆದುಹಾಕಲು ಚುನಾವಣಾ ಸುಧಾರಣೆಗಳನ್ನು ಪ್ರಾರಂಭಿಸಲು ಬಿಜೆಪಿ ಬದ್ಧವಾಗಿದೆ. ಬಿಜೆಪಿ ಇತರ ಪಕ್ಷಗಳೊಂದಿಗೆ ಸಮಾಲೋಚನೆಯ ಮೂಲಕ ಏಕಕಾಲದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳನ್ನು ನಡೆಸುವ ವಿಧಾನವನ್ನು ಜಾರಿಗೆ ತರುವುದಾಗಿ ಹೇಳಿತ್ತು.

ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳು ಏಕಕಾಲದಲ್ಲಿ ನಡೆದರೆ ಮತದಾರರು ಒಂದೇ ದಿನದಲ್ಲಿ ಸಂಸದರು ಮತ್ತು ಶಾಸಕರನ್ನು ಆಯ್ಕೆ ಮಾಡಬಹುದು ಮತ್ತು ಚುನಾವಣಾ ವೆಚ್ಚಕ್ಕೂ ಕಡಿವಾಣ ಹಾಕಬಹುದು ಎಂದು ಬಿಜೆಪಿ ಈ ನಿರ್ಧಾರ ತೆಗೆದುಕೊಂಡಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment