ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆ.01 : ಬಿಎಸ್ಸಿ. ನರ್ಸಿಂಗ್ ಕಾಲೇಜಿಗೆ ಪ್ರತ್ಯೇಕ ಕಾಲೇಜು ಕಟ್ಟಡ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾಸ್ಪತ್ರೆಯ ನರ್ಸಿಂಗ್ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
*ಚಿತ್ರದುರ್ಗದಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾರಣವೇನು ? ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಹೇಳಿದ್ದೇನು ?* pic.twitter.com/GPz3AtAmuh
— suddione-kannada News (@suddione) August 31, 2023
ನಿನ್ನೆ (ಗುರುವಾರ) ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾ ಅಸ್ಪತ್ರೆಯ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದರು. ಸ್ಥಳಕ್ಕೆ ಭೇಟಿ ನೀಡಿದ್ದ ಎಸಿ ಕಾರ್ತಿಕ್ ಅವರು ಜಿಲ್ಲಾಧಿಕಾರಿಯವರೊಂದಿಗೆ ಚರ್ಚಿಸಿ ಸೂಕ್ತ ಸೌಲಭ್ಯಗಳನ್ನು ಕಲ್ಪಿಸುವುದಾಗಿ ಭರವಸೆ ನೀಡಿದ್ದರು. ಆದರೆ ಯಾವುದೇ ಭರವಸೆಗಳಿಗೆ ಮಣಿಯದ ವಿದ್ಯಾರ್ಥಿಗಳು ಇಂದು ಜಿಲ್ಲಾಧಿಕಾರಿ ಕಚೇರಿವರೆಗೂ ಬೇಕೇ ಬೇಕು ನ್ಯಾಯ ಬೇಕು ಎಂಬ ಘೋಷಣೆಗಳೊಂದಿಗೆ ಕೂಗಿಕೊಂಡು ಬಂದು ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಒಂದು ವಾರದೊಳಗೆ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು. ಇಷ್ಟೆಲ್ಲಾ ಆದರೂ ಕೂಡಾ ನಮಗೆ ಮೂಲಭೂತ ಸೌಲಭ್ಯ ಒದಗಿಸುವವರೆಗೂ ತರಗತಿಗಳಿಗೆ ಹಾಜರಾಗುವುದಿಲ್ಲ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ.