Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕವಾಡಿಗರಹಟ್ಟಿಯಲ್ಲಿ ಶುದ್ಧ ಕುಡಿಯುವ ನೀರಿಗಾಗಿ ರೂ. 3.07 ಕೋಟಿ ಅನುದಾನದಲ್ಲಿ ಏನೆಲ್ಲಾ ವ್ಯವಸ್ಥೆ ಮಾಡಲಾಗಿದೆ ? ಇಲ್ಲಿದೆ ಮಾಹಿತಿ…!

---Advertisement---

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಸುದ್ದಿಒನ್,ಚಿತ್ರದುರ್ಗ, ಸೆ.5: ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಚಿತ್ರದುರ್ಗ ನಗರದ ಕವಾಡಿಗರ ಹಟ್ಟಿಯಲ್ಲಿ ಮಂಗಳವಾರ ನಗರ ಸಭೆ ಹಾಗೂ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ವತಿಯಿಂದ ನಿರ್ಮಿಸಲಾಗುತ್ತಿರುವ ಪೈಪ್ ಲೈನ್ ಹಾಗೂ ಶುದ್ಧ ಕುಡುಯುವ ನೀರು ಘಟಕ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ನಗರ ಸಭೆಯ ರೂ 3.07 ಕೋಟಿ ಅನುದಾನದಲ್ಲಿ, ಇಡೀ ಕವಾಡಿಗರ ಹಟ್ಟಿಗೆ ಹೊಸದಾಗಿ ಪೈಪ್ ಲೈನ್ ಅಳವಡಿಕೆ, ಮನೆ ಮನೆಗೆ ಹೊಸ ನಳದ ಸಂಪರ್ಕ, 2.5 ಲಕ್ಷ ಲೀಟರ್ ಸಾಮರ್ಥ್ಯ ಓವರ್ ಹಡ್ ಟ್ಯಾಂಕ್ ಹಾಗೂ ಹಿರೇಕಂದವಾಡಿ ನೀರು ಶುದ್ದೀಕರಣ ಘಟಕದ ರಿಪೇರಿ ಮಾಡಲಾಗುವುದು.

ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ರೂ.16.50 ಲಕ್ಷ ಅನುದಾನದಲ್ಲಿ, ಕವಾಡಿಗರ ಹಟ್ಟಿಯಲ್ಲಿ ಹೊಸ ಬೋರವೆಲ್ ಕೊರೆಯುವುದರೊಂದಿಗೆ, 1 ಸಾವಿರ ಲೀಟರ್ ಸಾಮರ್ಥ್ಯದ ಶುದ್ಧ ಕುಡಿಯುವ ನೀರು ಘಟಕ ನಿರ್ಮಾಣ ಹಾಗೂ 5 ವರ್ಷ ಘಟಕದ ನಿರ್ವಹಣೆಯನ್ನು ಇಲಾಖೆ ಮಾಡಲಿದೆ.

ಇದೇ ಸಂದರ್ಭದಲ್ಲಿ ತಾತ್ಕಾಲಿಕ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಸುಧಾಕರ್ ಅವರು ಕಳೆದ 31 ದಿನಗಳಿಂದ ನಿರಂತರವಾಗಿ ಜನರಿಗೆ ಆರೋಗ್ಯ ಸೇವೆ ನೀಡುತ್ತಿರುವ ವೈದ್ಯಕೀಯ ಸಿಬ್ಬಂದಿಗಳಿಗೆ ಅಭಿನಂದಿಸಿ ಮಾಹಿತಿ ಪಡೆದಕೊಂಡರು.

ಈ ಸಂದರ್ಭದಲ್ಲಿ  ಶಾಸಕರಾದ ಕೆ.ಸಿ.ವೀರೇಂದ್ರ ಪಪ್ಪಿ, ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಸೇರಿದಂತೆ ನಗರ ಸಭೆ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment