ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಚಿಕ್ಕಮಗಳೂರು: ಇತ್ತಿಚೆಗೆ ಚಿಕ್ಕಮಗಳೂರಿನಲ್ಲಿ ಅಪಘಾತವೊಂದು ನಡೆದಿದೆ. ಅದರಲ್ಲಿ ಬೈಕ್ ಒಂದಕ್ಕೆ ಕಾರು ಡಿಕ್ಕಿ ಹೊಡೆದಿದೆ. ಈ ವಿಡಿಯೋ ಸದ್ಯ ವೈರಲ್ ಆಗಿದ್ದು, ಆ ಕಾರು ಗಿಚ್ಚಿ ಗಿಲಿಗಿಲಿ ಖ್ಯಾತಿಯ ಚಂದ್ರಪ್ರಭರಿಗೆ ಸೇರಿದ್ದು ಎನ್ನಲಾಗ್ತಾ ಇದೆ.
ಆದ್ರೆ ಅಪಘಾತವಾದ ಮೇಲೂ ಬಿದ್ದ ವ್ಯಕ್ತಿಯನ್ನು ನೋಡದೆ, ಕಾರು ಮುಂದೆ ಸಾಗಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಮಾನವೀಯತೆ ಇಲ್ಲದೆ ನಡೆದುಕೊಂಡಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಚಿಕ್ಕಮಗಳೂರು ನಗರದ ಸಮೀಪ ಈ ಘಟನೆ ನಡೆದಿದೆ.
ನಾಗೇನಹಳ್ಳಿ ನಿವಾಸಿ ಮಾಲ್ತೇಶ್ ಎಂಬುವವರು ಬಟ್ಟೆ ಅಂಗಡಿಯಲ್ಲಿ ಕೆಲಸ ಮುಗಿಸಿ, ವಾಪಾಸ್ಸು ಬರುತ್ತಿದ್ದರು. ಈ ವೇಳೆ ಮಾಲ್ತೇಶ್ ಬೈಕ್ ಗೆ ಕಾರು ಡಿಕ್ಕಿ ಹೊಡೆದಿದೆ. ಮಾಲ್ತೇಶ್ ಅ ರನ್ನು ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ. ಆದ್ರೆ ಅಪಘಾತ ಮಾಡಿದ ನಂತರ ಕಾರು ಚಾಲಕ ಏನಾಗಿದೆ ಎಂದು ತಿರುಗಿಯೂ ನೋಡಿಲ್ಲ.
ಈ ಘಟನೆಯ ಸಿಸಿಟಿವಿ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಅಪಘಾತ ಮಾಡಿದ ಕಾರು ಚಂದ್ರಪ್ರಭ ಅವರಿಗೆ ಸೇರಿದ್ದು ಎನ್ನಲಾಗಿದೆ. ಈ ಸಂಬಂಧ ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆಗೆ ಮುಂದಾಗಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್