ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ,(ಸೆ. 06) : ನಗರದ ಶ್ರೀ ಪಾಶ್ವನಾಥ ವಿದ್ಯಾ ಸಂಸ್ಥೆಯ 50 ನೇ ವರ್ಷದ ಅಂಗವಾಗಿ ಬುಧವಾರ ಶ್ರೀ ಕೃಷ್ಣಾಷ್ಠಮಿಯ ದಿನದಂದು ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ನೂರಕ್ಕೂ ಹೆಚ್ಚು ಮಕ್ಕಳಿಗೆ ಶ್ರೀ ಕೃಷ್ಣ ಮತ್ತು ರುಕ್ಮಿಣಿಯ ವೇಷವನ್ನು ಹಾಕಲಾಗಿತ್ತು.
ಕೃಷ್ಣಾ ಮತ್ತು ರುಕ್ಮೀಣಿ ವೇಷವನ್ನು ಧರಿಸಿದ ಶಾಲಾ ಮಕ್ಕಳು ಶಾಲೆಯ ಸುತ್ತಾ-ಮುತ್ತಲ್ಲಿನ ಪ್ರದೇಶದಲ್ಲಿ ಒಂದು ಸುತ್ತು ಮೆರವಣಿಗೆಯನ್ನು ನಡೆಸಿ ನೋಡುಗರ ಗಮನ ಸೆಳೆದರು.
ಈ ಸಂದರ್ಭದಲ್ಲಿ ಶ್ರೀ ಪಾಶ್ವನಾಥ ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ ಬಾಬು ಲಾಲ್ ಜೀ, ಉಪಾಧ್ಯಕ್ಷರಾದ ಉತ್ತಮ ಚಂದ್ ಸುರಾನ, ಕಾರ್ಯದರ್ಶಿ ಸುರೇಶ್ ಕುಮಾರ್ ನಿರ್ದೇಶಕರುಗಳಾದ ಮಹಾವೀರ್, ಮುಕೇಶ್ ಹಾಗೂ ಶಾಲೆಯ ಮುಖ್ಯೋಪಾಧ್ಯಾಯಿನಿ, ಶಿಕ್ಷಕರು, ಭೋದಕೇತರ ವರ್ಗದವರು, ಪೋಷಕರು ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











