Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕಾಂಗ್ರೆಸ್ ಪಕ್ಷದಿಂದ ಆಹ್ವಾನವಿದೆ, ಮುಂದೆ ಏನಾಗುತ್ತದೋ ನೋಡೋಣ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

---Advertisement---

 

ಸುದ್ದಿಒನ್, ಚಿತ್ರದುರ್ಗ, ಸೆ. 07 : ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಹಿರಿಯೂರು ಕ್ಷೇತ್ರದ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಭೇಟಿ ಇದೀಗ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರಿನಲ್ಲಿ ಬುಧವಾರ ಪೂರ್ಣಿಮಾ ಶ್ರೀನಿವಾಸ್ ನಿವಾಸಕ್ಕೆ ಡಿ.ಕೆ. ಶಿವಕುಮಾರ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮತನಾಡಿದ ಅವರು, ಶ್ರೀ ಕೃಷ್ಣ ಜನ್ಮಾಷ್ಟಮಿ ಇವರು ಕಾರಣ ನಾನು ಬಂದಿದ್ದೇನೆ. ಮಾಜಿ ಸಚಿವ ಎ.ಕೃಷ್ಣಪ್ಪನವರು ನನಗೆ ತುಂಬಾ ಆತ್ಮೀಯರು. ಅವರ ಮಗಳು ಪೂರ್ಣಿಮಾ ನನ್ನ ಸಹೋದರಿ. ಅವರ ಅಳಿಯ ಶ್ರೀನಿವಾಸ್ ಕೂಡಾ ನನಗೆ ಆತ್ಮೀಯರು ಎಂದರು. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ.

ನಂತರ ಸುದ್ದಿಗಾರರೊಂದಿಗೆ ಪೂರ್ಣಿಮಾ ಶ್ರೀನಿವಾಸ್  ಮಾತನಾಡಿ, ಹಿರಿಯೂರು ಕ್ಷೇತ್ರದಿಂದ ಶಾಸಕಿಯಾಗಿ ಉತ್ತಮ ಕೆಲಸ ಮಾಡಿದ್ದೇನೆ. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ನನಗೆ ಅನುದಾನ ನೀಡಿದ್ದಾರೆ. ಆದರೂ, ಜನ ಮತ ನೀಡಿಲ್ಲ. ಅದಕ್ಕೆ ಬೇರೆ ಬೇರೆ ಕಾರಣಗಳು ಇರಬಹುದು.  ನಾನು ಪಕ್ಷ ಬಿಡುತ್ತೇನೆಂದು ಎಲ್ಲೂ ಹೇಳಿಲ್ಲ. ನಾನು ಪಕ್ಷ ಬಿಡುವುದಿದ್ದರೆ ಬೇರೆಯವರಂತೆ ಕದ್ದು ಮುಚ್ಚಿ ಹೋಗುವುದಿಲ್ಲ. ಕಾಂಗ್ರೆಸ್ ಪಕ್ಷದಿಂದ ನನಗೆ ಆಹ್ವಾನ ಇದೆ ಮುಂದೆ ಏನಾಗುತ್ತದೋ ನೋಡೋಣ’ ಎಂದು ಹೇಳಿದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...