ರಾಜ್ಯ ಮಟ್ಟದ ಅತ್ಯತ್ತಮ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ನಾಗಭೂಷಣ್

1 Min Read

 

ಸುದ್ದಿಒನ್,ಚಿತ್ರದುರ್ಗ, ಸೆಪ್ಟೆಂಬರ್. 07 :  ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆ ರೇಖಲಗೆರೆ ಲಂಬಾಣಿ ಹಟ್ಟಿಯ ಸೃಜನಾತ್ಮಕ ವಿಜ್ಞಾನ ಶಿಕ್ಷಕ  ಕೆ.ಟಿ.ನಾಗಭೂಷಣ್, ರಾಜ್ಯ ಮಟ್ಟದ ಅತ್ಯತ್ತಮ ಶಿಕ್ಷಕ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಂದ ಸ್ವೀಕರಿಸಿದರು.

ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಶಿಕ್ಷಕರ ದಿನಾಚರಣೆಯಂದು ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಅಪಾರ ಸೇವೆಯನ್ನು ಪರಿಗಣಿಸಿ ಜಿಲ್ಲೆಯಿಂದ ಆಯ್ಕೆ ಮಾಡಲಾಗಿತ್ತು. ಪ್ರಶಸ್ತಿಯು 25000 ರೂಪಾಯಿಗಳು, ಪ್ರಶಸ್ತಿ ಫಲಕ,ಹಾಗೂ ಪ್ರಮಾಣ ಪತ್ರವನ್ನು ಒಳಗೊಂಡಿದೆ.

ಈ ಸಂಧರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ , ಉನ್ನತ ಶಿಕ್ಷಣ ಸಚಿವರಾದ ಸುಧಾಕರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರಾದ ಬಿ. ಬಿ.ಕಾವೇರಿ, ರಿತೇಶ್ ಕುಮಾರ್ ಸಿಂಗ್, ಪ್ರಾಥಮಿಕ ಮತ್ತು ಪ್ರೌಢಶಾಲಾ ನಿರ್ದೇಶಕರು, ಮತ್ತಿತರ ಗಣ್ಯರು ಹಾಜರಿದ್ದರು.

ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದು ಜಿಲ್ಲೆಗೆ ಕೀರ್ತಿ ತಂದ ಶಿಕ್ಷಕ ನಾಗಭೂಷಣ್ ಇವರನ್ನು ಜಿಲ್ಲೆಯ ಉಪನಿರ್ದೇಶಕರಾದ ರವಿಶಂಕರ್ ರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುರೇಶ್ ಕೆ.ಎಸ್, ಶಾಲೆಯ ಮುಖ್ಯ ಶಿಕ್ಷಕರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಪಿ.ಡಿ.ಒ,ಸದಸ್ಯರು,ಎಸ್. ಡಿ. ಎಂ. ಸಿ ಅಧ್ಯಕ್ಷರಾದ ಜಯಣ್ಣ, ಶಾಲಾ ಸಿಬ್ಬಂದಿ, ಗ್ರಾಮಸ್ಥರು, ಯುವಕರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *