Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸ್ವತಂತ್ರ ಸ್ಪರ್ಧೆ ಎಂದಿದ್ದ ಗೌಡರು ಬಿಜೆಪಿ ಮೈತ್ರಿಗೆ ಒಪ್ಪಿದ್ದೇಗೆ..?

---Advertisement---

 

 

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಳ್ಳುವುದು ಬಹುತೇಕ ಫಿಕ್ಸ್ ಆಗಿದೆ. ಈಗಾಗಲೇ ಮಾಜಿ ಪ್ರಧಾನಿ ದೇವೇಗೌಡ ಅವರು ಅಮಿತ್ ಶಾ ಹಾಗೂ ಜೆಪಿ ನಡ್ಡಾ ಜೊತೆಗೆ ಮಾತುಕತೆ ನಡೆಸಿದ್ದಾರೆ. ಬಿಜೆಪಿ ನಾಯಕರು ಕೂಡ ಈಗಾಗಲೇ ಮೈತ್ರಿ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ‌. ಸೆಪ್ಟೆಂಬರ್ 13 ರಂದು ಮೈತ್ರಿ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದ ಜಂಟಿಗೋಷ್ಠಿ ನಡೆಸಲಿದ್ದಾರೆ.

 

ಈ ಬಾರಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೆ ಎಂದೇ ದೇವೇಗೌಡ ಅವರು ಹೇಳುತ್ತಿದ್ದರು. ಆದರೆ ಈಗ ಇದ್ದಕ್ಕಿದ್ದ ಹಾಗೇ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುವುದಕ್ಕೆ ಹೊರಟಿರುವುದರ ಹಿಂದೆ ಹಲವು ಕಾರಣಗಳು ಇದಾವೆ. ಎರಡೂ ಕಡೆ ಹೋಗದೆ ತಟಸ್ಥವಾದರೆ ಅತಂತ್ರವಾಗುತ್ತದೆ. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡರೆ ಪಕ್ಷ ಗೆಲ್ಲಿಸಬಹುದು. ಮತ್ತೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಕುಮಾರಸ್ವಾಮಿ ಅವರಿಗೆ ಲಾಭವಾಗಲು ಬಹುದು. ಕಾರ್ಯಕರ್ತರು, ಶಾಸಕರನ್ನು ಉಳಿಸಿಕೊಳ್ಳುವ ಪ್ರಯತ್ನ ಎಂಬ ಯೋಚನೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಇನ್ನು ಬಿಜೆಪಿ ಚುನಾವಣೆಯಲ್ಲಿ ಜೆಡಿಎಸ್ ಗೆ ಐದು ಕ್ಷೇತ್ರಗಳನ್ನು ನೀಡುವುದಾಗಿ ಹೇಳಿದೆ. ಆದರೆ ಅದರ ಜೊತೆಗೆ ಮಂಡ್ಯ ಕ್ಷೇತ್ರವನ್ನು ಕೇಳಿದೆ. ಬಿಜೆಪಿ ಮಂಡ್ಯವನ್ನು ತನ್ನ ಕಡೆಗೆ ಇಟ್ಟುಕೊಂಡು, ಸುಮಲತಾ ಅವರನ್ನು ಕಣಕ್ಕೆ ಇಳಿಸುವ ಪ್ರಯತ್ನ ಮಾಡಿತ್ತು. ಆದರೆ ಈಗ ಜೆಡಿಎಸ್ ಗೆ ಮಂಡ್ಯ ಕ್ಷೇತ್ರ ಬಿಟ್ಟು ಕೊಡಲು ಒಪ್ಪಿದ್ದಾರೆ ಎನ್ನಲಾಗ್ತಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment