Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಟಿಡಿಪಿ ಮುಖ್ಯಸ್ಥ, ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಭ್ರಷ್ಟಾಚಾರದ ಆರೋಪದ ಮೇಲೆ ಬಂಧನ…!

---Advertisement---

 

ಸುದ್ದಿಒನ್, ಹೈದರಾಬಾದ್ : ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರನ್ನು ಭ್ರಷ್ಟಾಚಾರದ ಆರೋಪದ ಮೇಲೆ ಇಂದು(ಶನಿವಾರ) ಬಂಧಿಸಿ ವಿಜಯವಾಡಕ್ಕೆ ಸ್ಥಳಾಂತರಿಸಲಾಗಿದೆ.

ಟಿಡಿಪಿ ಮುಖ್ಯಸ್ಥರು ತಮ್ಮ ಅಧಿಕಾರಾವಧಿಯಲ್ಲಿ ಆಂಧ್ರಪ್ರದೇಶದ ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮದಲ್ಲಿ 317 ಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ.

ಮಧ್ಯರಾತ್ರಿ ನಡೆದ ನಾಟಕೀಯ ಬೆಳವಣಿಗೆಯಲ್ಲಿ ಆಂಧ್ರಪ್ರದೇಶದ ಸಿಐಡಿ ಅಧಿಕಾರಿಗಳು ಇಂದು (ಶನಿವಾರ) ಮುಂಜಾನೆ ನಾಯ್ಡು ಅವರನ್ನು ವಶಕ್ಕೆ ಪಡೆದರು.

ಕೌಶಲ್ಯಾಭಿವೃದ್ಧಿ ಪ್ರಕರಣದಲ್ಲಿ ಚಂದ್ರಬಾಬು ಎ1 ಆಗಿದ್ದಾರೆ. ಇದರ ಭಾಗವಾಗಿ ಸಿಐಡಿ ಪೊಲೀಸರು ಚಂದ್ರಬಾಬು ಅವರನ್ನು ಬಂಧಿಸಿದ್ದರು. ಆಂಧ್ರಪ್ರದೇಶ ಸರ್ಕಾರವು 2020 ರಲ್ಲಿ ಈ ಪ್ರಕರಣದ ತನಿಖೆಗೆ ಆದೇಶಿಸಿತ್ತು.

ಈ ಪ್ರಕರಣದಲ್ಲಿ ಅಚ್ಚೆನ್ನಾಯ್ಡು ಎ2 ಆಗಿದ್ದಾರೆ. ಬಂಧನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಚಂದ್ರಬಾಬು ಅವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.  ಕೌಶಲ ಹಗರಣ ಪ್ರಕರಣದಲ್ಲಿ ಚಂದ್ರಬಾಬು ವಿರುದ್ಧ ಸೆಕ್ಷನ್ 465, 468, 471, 409, 201 ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಸುಮಾರು ಮೂರು ಗಂಟೆಗಳ ಕಾಲ ಪೊಲೀಸರೊಂದಿಗೆ ವಾಗ್ವಾದ ನಡೆಸಿ ಚಂದ್ರಬಾಬು ನಂತರ ಬಂಧಿಸಲಾಯಿತು ‌.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment