ವಿಜಯವಾಡ: ಆಂಧ್ರದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ತಮ್ಮ ಅಧಿಕಾರಾವಧಿಯಲ್ಲಿ ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮದಲ್ಲಿ 317 ಕೋಟಿ ರೂಪಾಯಿ ಹಗರಣ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ವಿಚಾರಣೆ ನಡೆಸಿದ ಹೈಕೋರ್ಟ್ ಬಂಧನಕ್ಕೆ ಅನುಮತಿ ನೀಡಿದ ಬೆನ್ನಲ್ಲೇ, ಸಿಐಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.
ಇದೀಗ ಚಂದ್ರಬಾಬು ನಾಯ್ಡು ಬೆಂಬಲಿಗರು ಬಂಧನ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ತಿರುಪತಿಯಲ್ಲಿ ಪ್ರತಿಭಟನೆ ನಡೆಸಿ, ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ. ಪ್ರತಿಭಟನೆಯಲ್ಲಿ ಚಂದ್ರಬಾಬು ಪುತ್ರ ಕೂಡ ಭಾಗಿಯಾಗಿದ್ದಾರೆ.
ನಾಯ್ಡು ಅವರ ಬಂಧನ ಮಾಡಲು ಹೋದಾಗಲೂ ಬೆಂಬಲಿಗರಿಂದ ಗಲಾಟೆ ಆಗಿತ್ತು. ಮಾತುನ ಚಕಮಕಿಯಾಗಿತ್ತು. ಇಂದು ಮುಂಜಾನೆ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದೆ. ಅದರ ಜೊತೆಗೆ ಕೆಲವು ಕಾರ್ಯಕರ್ತರನ್ನು ಬಂಧಿಸಲಾಗಿದೆ.
ಸ್ಕಿಲ್ ಡೆವಲಪ್ಮೆಂಟ್ ನಲ್ಲಿ ಹಗರಣ ಆಗಿದೆ ಎಂಬುದು ಆರೋಪ ಬಂದ ಮೇಲೆ ಈ ಕೇಸನ್ನು ಸಿಎಂ ವೈ ಎಸ್ ಜಗನ್ ಮೋಹನ್ ರೆಡ್ಡಿ ಸಿಐಡಿಗೆ ವಹಿಸಿದ್ದರು. ಈ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡು ಎ1 ಆರೋಪಿಯಾಗಿದ್ದಾರೆ. ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಿರುವ ಪೊಲೀಸರು ಸದ್ಯ ಅವರನ್ನು ವಿಜಯವಾಡಕ್ಕೆ ಶಿಫ್ಟ್ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.