Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಸೆಂಬರ್ ಅಂತ್ಯದೊಳಗೆ ರಾಜ್ಯದಲ್ಲಿಯೂ ಶೇ.90 ರಷ್ಟು ಲಸಿಕಾಕರಣ ಗುರಿ: ಸಿಎಂ

Facebook
Twitter
Telegram
WhatsApp

ಹುಬ್ಬಳ್ಳಿ: ಡಿಸೆಂಬರ್ ಅಂತ್ಯದೊಳಗೆ ರಾಜ್ಯದ ಅರ್ಹರೆಲ್ಲರಿಗೂ ಶೇ.90 ರಷ್ಟು ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕೋವಿಡ್ ಅಲೆಗಳು ರಾಜ್ಯ ಮತ್ತು ದೇಶದ ಆರೋಗ್ಯ ವ್ಯವಸ್ಥೆಯ ಸಾಮರ್ಥ್ಯ ಮತ್ತು ಕೊರತೆಗಳೆರಡನ್ನೂ ಪರಿಚಯಿಸಿವೆ. ಜೊತೆಗೆ ಆರೋಗ್ಯ ಕ್ಷೇತ್ರದ ಮೂಲಭೂತ ಸೌಕರ್ಯಗಳಲ್ಲಿ ಗುಣಾತ್ಮಕ ಮತ್ತು ಗಮನಾರ್ಹ ಅಭಿವೃದ್ಧಿ ತರಲು ಕಾರಣವಾಗಿವೆ. ಭಾರತ ದೇಶದಲ್ಲಿ ಕಳೆದ 10 ತಿಂಗಳ ಅವಧಿಯಲ್ಲಿ 100 ಕೋಟಿ ಕೋವಿಡ್ ಲಸಿಕೆ ನೀಡಿರುವುದು ಸಾಮಾನ್ಯ ಸಾಧನೆಯಲ್ಲ. ಇದಕ್ಕಾಗಿ ಹೆಮ್ಮೆ ಪಡೋಣ; ಆದರೆ ವಿಶ್ರಮಿಸುವುದು ಬೇಡ ಎಂದು ಅವರು ತಿಳಿಸಿದರು.

ವಿಪತ್ತನ್ನು ಕೂಡ ಅವಕಾಶವನ್ನಾಗಿ ಪರಿವರ್ತಿಸಿಕೊಳ್ಳಬೇಕು ಎಂಬ ಮಾತನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ನಿಜ ಮಾಡಿ ತೋರಿಸಿದೆ.ಕೋವಿಡ್ ವೈರಾಣು ಕಾಲಿಟ್ಟಾಗ ದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಪಿಪಿಇ ಕಿಟ್,ಮಾಸ್ಕ್, ಕೈಗವಸುಗಳಿರಲಿಲ್ಲ. ಇಂದು ಈ ಉತ್ಪನ್ನಗಳನ್ನಷ್ಟೇ ಅಲ್ಲ, ಕೋವಿಡ್ ಲಸಿಕೆಯನ್ನು ಕೂಡ ರಫ್ತು ಮಾಡುವ ಸಾಮರ್ಥ್ಯ ಗಳಿಸಿಕೊಂಡಿದ್ದೇವೆ. ಭಾರತದ ಈ ಸಾಧನೆಗೆ ವಿಶ್ವವೇ ಬೆರಗಾಗಿದೆ ಎಂದು ನುಡಿದರು.

ಕಳೆದ ಜನವರಿ 16 ರಿಂದ ದೇಶದಲ್ಲಿ ಕೋವಿಡ್ ಲಸಿಕೆ ನೀಡಲು ಪ್ರಾರಂಭಿಸಲಾಯಿತು. ಹಂತ ಹಂತವಾಗಿ ಹೆಚ್ಚಳ ಮಾಡುತ್ತ ಇದೀಗ ಕೇವಲ ಹತ್ತು ತಿಂಗಳ ಅವಧಿಯಲ್ಲಿ 100 ಕೋಟಿ ಲಸಿಕೆ ನೀಡಿರುವುದು ಸಾಮಾನ್ಯ ಸಾಧನೆಯಲ್ಲ. ಇದರ ಹಿಂದೆ ವೈದ್ಯರು, ಅರೆವೈದ್ಯಕೀಯ, ಆರೋಗ್ಯ ಕಾರ್ಯಕರ್ತರ, ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಯ ಶ್ರಮವಿದೆ.ಈ ಸಂದರ್ಭದಲ್ಲಿ ಅವರೆಲ್ಲರನ್ನೂ ಅಭಿನಂದಿಸುವುದಾಗಿ ತಿಳಿಸಿದರು.

ಇನ್ನು 3-4 ತಿಂಗಳ ಅವಧಿಯಲ್ಲಿ ಮತ್ತೆ ನೂರು ಕೋಟಿ ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿದೆ. ರಾಜ್ಯದಲ್ಲಿಯೂ ಡಿಸೆಂಬರ್ ಅಂತ್ಯದ ವೇಳೆಗೆ ಶೇ. 90 ರಷ್ಟು ಜನರಿಗೆ ಮೊದಲ ಡೋಸ್ ಹಾಗೂ ಶೇ. 70 ರಷ್ಟು ಎರಡನೇ ಡೋಸ್ ಲಸಿಕೆ ನೀಡುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ : ಮಳೆಗೆ ಜಿಲ್ಲೆಯಾದ್ಯಂತ 80 ಮನೆಗಳು ಹಾನಿ : ಮಳೆ ವರದಿ…!

ಚಿತ್ರದುರ್ಗ.ಅ.18:  ಗುರುವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 11.3 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 15 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 6.8 ಹಿರಿಯೂರು ತಾಲ್ಲೂಕು 14.2 ಮಿ.ಮೀ, ಹೊಳಲ್ಕೆರೆ ತಾಲ್ಲೂಕು

ಚಿತ್ರದುರ್ಗ | ಮೂವರು ಮಹಿಳೆಯರು ಕಾಣೆ : ಪತ್ತೆಗೆ ಮನವಿ

ಚಿತ್ರದುರ್ಗ. ಅ.18: ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂವರು ಮಹಿಳೆಯರು ಕಾಣೆಯಾದ ಕುರಿತು ಮೂರು  ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಹೊಳಲ್ಕೆರೆ ತಾಲ್ಲೂಕಿನ ತೇಕಲವಟ್ಟಿ ಗೊಲ್ಲರಹಟ್ಟಿ ಗ್ರಾಮದ ರೇಣುಕಮ್ಮ ಗಂಡ ಕರಿಯಪ್ಪ

ಜೈಲಿನಿಂದ ಬಿಡುಗಡೆಯಾದ ನಾಗೇಂದ್ರರಿಗೆ ಹೊಸ ಟಾಸ್ಕ್ ನೀಡಿದ ಸಿಎಂ ಸಿದ್ದರಾಮಯ್ಯ..!

  ಬೆಂಗಳೂರು : ವಾಲ್ಮೀಕಿ ಹಗರಣದಲ್ಲಿ ಬಂಧಿಯಾಗಿದ್ದ ಬಿ.ನಾಗೇಂದ್ರ ಅವರು ಇತ್ತೀಚೆಗಷ್ಟೇ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಜಮೀರ್ ಅಹ್ಮದ್ ಜೊತೆಗೂಡಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ

error: Content is protected !!