ಬೆಂಗಳೂರು: ಲಸಿಕೆ ಸಾಧನೆ ಬಗ್ಗೆ ವಿದೇಶಗಳ ನಾಯಕರೇ ಹೊಗಳುತ್ತಿದ್ದಾರೆ. ಆದರೆ, ಕಾಂಗ್ರೆಸ್ ನಾಯಕರು ಆರಂಭದ ದಿನಗಳಲ್ಲಿ ಲಸಿಕೆ ವಿರುದ್ಧ ಪ್ರಚಾರ ಮಾಡಿದ್ದರು ಎಂದು ಸಚಿವ ಅಶ್ವಥ್ ನಾರಾಯಣ ಹೇಳಿದ್ರು. ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿಸ ಅವರು, ವಿಶ್ವವೇ ಬೆರಗಾಗುವ ಮಾದರಿಯಲ್ಲಿ 100 ಕೋಟಿ ಲಸಿಕೆ ನೀಡಿದ್ದು ಅಸಾಧಾರಣ ಸಾಧನೆ. ಅದನ್ನು ನಾವೀಗ ಆಚರಿಸುತ್ತಿದ್ದೇವೆ.
ಸಿದ್ದರಾಮಯ್ಯನವರ ಇಂತಹ ಹೇಳಿಕೆಗಳು ರಾಜ್ಯ, ದೇಶಕ್ಕೆ ಪೂರಕವಾಗಿದಿಯಾ..? ಸಿದ್ದರಾಮಯ್ಯ ವಿಶ್ವಾಸಮೂಡಿಸುವ ಕೆಲಸ ಮಾಡಬೇಕು, ನಾಯಕರಾದವರಿಗೆ ಮತ್ಸರ ಗುಣಗಳಿಬಾರದು. ಸಿದ್ದರಾಮಯ್ಯಗೆ ಕೀಳುಮಟ್ಟದ ರಾಜಕಾರಣಮಾಡುವುದು ಅವರ ಯೋಗ್ಯತೆಗೆ ತರವಲ್ಲ ಎಂದು ಸಿದ್ದರಾಮಯ್ಯ ವಿರುದ್ದ ಅಶ್ವಥ್ ನಾರಾಯಣ ತಿರುಗೇಟು ನೀಡಿದರು.
ಮಾಸ್ಕ್, ವೆಂಟಿಲೇಟರ್, ಆಮ್ಲಜನಕ, ಬೆಡ್ಗಶಳು ಸೇರಿದಂತೆ ಅನೇಕ ಸವಾಲುಗಳು ದೇಶದ ಮುಂದಿದ್ದವು. ಈ ಸವಾಲುಗಳಿಗೆ ಯಶಸ್ವಿಯಾಗಿ ದೇಶವು ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಸ್ಪಂದಿಸಿದೆ. ಈಗ ಲಸಿಕೆಯನ್ನು ವಿಶ್ವದ ಇತರ ದೇಶಗಳಿಗೂ ಸರಬರಾಜು ಮಾಡಲಾಗುತ್ತಿದೆ ಎಂದರು. ಇತರ ದೇಶಗಳಿಗೆ ಹೋಲಿಸಿದರೆ ವಿಶ್ವದಲ್ಲೇ ಕನಿಷ್ಠ ಸೋಂಕಿತರು, ಅತ್ಯಂತ ಕಡಿಮೆ ಸಾವಿನ ಪ್ರಮಾಣ ನಮ್ಮ ದೇಶದ್ದಾಗಿತ್ತು ಎಂದು ವಿವರಿಸಿದರು. ಭರವಸೆಯ ನಾಡು ನಮ್ಮದು, ಭಾರತ ಭರವಸೆಯ ದೇಶ ಎಂಬುದು ಇದರಿಂದ ಸಾಬೀತಾಗಿದೆ. ವಿಶ್ವಗುರುವಾಗುವತ್ತ ನಮ್ಮ ದೇಶ ಮುನ್ನಡೆಯುತ್ತಿದೆ ಎಂದು ತಿಳಿಸಿದರು.