Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಕೆ ಹರಿಪ್ರಸಾದ್ ವಿರುದ್ಧ ಬೇಸರಗೊಂಡ ಸಿಎಂ ಸಿದ್ದರಾಮಯ್ಯ ಕರೆ ಮಾಡಿದ್ದು ಯಾರಿಗೆ..?

---Advertisement---

 

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ಸಿಗದ ಹಿನ್ನೆಲೆ ಬಿಕೆ ಹರಿಪ್ರಸಾದ್ ಕೊಂಚ ಬೇಸರವಾಗಿದ್ದಾರೆ. ಹೀಗಾಗಿ ನೇರವಾಗಿಯೇ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಕಾರ್ಯಕ್ರಮಗಳಲ್ಲಿ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಆಕ್ರೋಶ ಹೊರ ಹಾಕಿದ್ದಾರೆ. ನಿನ್ನೆ ಕೂಡ ಕಾರ್ಯಕ್ರಮವೊಂದರಲ್ಲಿ ಜಿ ಪರಮೇಶ್ವರ್ ಪರ ಬ್ಯಾಟ್ ಬೀಸಿ, ಸಿದ್ದರಾಮಯ್ಯ ಅವರ ಬಗ್ಗೆ ಆಕ್ರೋಶ ಹೊರ ಹಾಕಿದ್ದರು. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಬೇಸರ ಹೊರ ಹಾಕಿದ್ದಾರೆ.

ಪದೇ ಪದೇ ಬಿಕೆ ಹರಿಪ್ರಸಾದ್ ಅವರು ವೈಯಕ್ತಿಕ ಟೀಕೆ ಮಾಡುತ್ತಿರುವುದು, ತೇಜೋವಧೆ ಮಾಡುತ್ತಿರುವುದಕ್ಕೆ ಬೇಸರ ಮಾಡಿಕೊಂಡ ಸಿದ್ದರಾಮಯ್ಯ ಅವರು, ನೇರವಾಗಿ ಹೈಕಮಾಂಡ್ ಗೆ ಕರೆ ಮಾಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ ಅವರಿಗೆ ಕರೆ ಮಾಡಿ ಬೇಸರ ಹೊರ ಹಾಕಿದ್ದಾರೆ.

ಏನೇ ಅಸಮಾಧಾನವಿದ್ದರು ಪಕ್ಷದ ವೇದಿಕೆಗಳಲ್ಲಿ ಹೇಳಲಿ. ಬಹಿರಂಗ ವೇದಿಕೆಗಳಲ್ಲಿ ನನ್ನನ್ನೇ ಟಾರ್ಗೆಟ್ ಮಾಡಿ‌ಮಾತನಾಡುವುದು ಸರಿ ಅಲ್ಲ. ಹಿರಿಯ ನಾಯಕರು ಎನಿಸಿಕೊಂಡವರೇ ಹೀಗೆ ಮಾಡಿದರೆ ಹೇಗೆ..? ಮಾಧ್ಯಮಗಳ ಮುಂದೆ‌ ನಿಂತು ಹೀಗೆ ಟೀಕೆ ಮಾಡಿದರೆ ಹೇಗೆ..? ಈ ರೀತಿಯ ಹೇಳಿಕೆಗಳನ್ನು ನೀಡದಂತೆ ಮೊದಲು ಸೂಚನೆ ನೀಡಿ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment