Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿವಿಧ ಗ್ರಾಮಗಳಿಗೆ ಜಿಪಂ ಸಿಇಒ ಸೋಮಶೇಖರ್ ದಿಢೀರ್ ಭೇಟಿ : ಅಧಿಕಾರಿಗಳಿಗೆ ತಾಕೀತು

---Advertisement---

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ ಸೆ. 10 : ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿರಿಸಿಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ್ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಸಾಣಿಕೆರೆ, ಬೆಳೆಗೆರೆ ಮತ್ತು ಹಿರಿಯೂರು ತಾಲ್ಲೂಕು ಬುರುಜಿನ ರೊಪ್ಪ ಸೇರಿದಂತೆ ವಿವಿಧ ಗ್ರಾಮ ಪಂಚಾಯತಿ ವ್ಯಾಪ್ತಿಗಳ ಗ್ರಾಮಗಳು, ಗ್ರಾ.ಪಂ. ಕಚೇರಿಗಳು, ಶಾಲೆಗಳಿಗೆ ಶನಿವಾರದಂದು ದಿಢೀರ್ ಭೇಟಿ ನೀಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಮೇಲ್ಮಟ್ಟದ ಹಾಗೂ ಕೆಳಮಟ್ಟದ ಎಲ್ಲ ನೀರು ಸಂಗ್ರಹಗಾರಗಳನ್ನು ಸ್ವಚ್ಛಗೊಳಿಸಿ, ಅದನ್ನು ದಾಖಲೀಕರಣ ಮಾಡಿಟ್ಟುಕೊಳ್ಳಬೇಕು, ಗ್ರಾಮಗಳಲ್ಲಿನ ಚರಂಡಿಗಳನ್ನು ಕಾಲಕಾಲಕ್ಕೆ ಸ್ವಚ್ಛಗೊಳಿಸಬೇಕು.

ಎಲ್ಲ ಶುದ್ಧ ಕುಡಿಯುವ ನೀರಿನ ಘಟಕಗಳನ್ನು (ಆರ್.ಒ ಪ್ಲಾಂಟ್‍ಗಳು) ಸುಸ್ಥಿತಿಯಲ್ಲಿರಿಸಿಕೊಳ್ಳಬೇಕು, ಒಂದು ವೇಳೆ ಕೆಟ್ಟು ಹೋಗಿರುವ ಬಗ್ಗೆ ದೂರುಗಳು ಬಂದಲ್ಲಿ, ತಕ್ಷಣ ಸ್ಪಂದಿಸಿ, ದುರಸ್ತಿಗೊಳಿಸಬೇಕು, ಎಫ್.ಟಿ.ಕೆ. (ಫೀಲ್ಡ್ ಟೆಸ್ಟ್ ಕಿಟ್) ಬಳಸಿ, ಕುಡಿಯುವ ನೀರಿನ ಗುಣಮಟ್ಟವನ್ನು ಕಾಲಕಾಲಕ್ಕೆ ಪರೀಕ್ಷೆಗೆ ಒಳಪಡಿಸಬೇಕು, ಶೀಘ್ರದಲ್ಲಿಯೇ ಹೊಸ ಎಫ್.ಟಿ.ಕೆ. ಕಿಟ್‍ಗಳನ್ನು ಪೂರೈಸಲಾಗುವುದು, ಗ್ರಾಮ ಪಂಚಾಯತ್‍ಗಳಿಗೆ ಸಕಾಲ ದಡಿ ವಿವಿಧ ಸೇವೆಗಳಿಗಾಗಿ ಸಲ್ಲಿಕೆಯಾಗುವ ಅರ್ಜಿಗಳನ್ನು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡುವಂತೆ ಜಿ.ಪಂ. ಸಿಇಒ ಅವರು ಸೂಚನೆ ನೀಡಿದರು.

ಗ್ರಾಮ ಪಂಚಾಯತ್‍ಗಳು ತಮ್ಮ ವ್ಯಾಪ್ತಿಯ ವಿವಿಧ ಖರ್ಚು ವೆಚ್ಚಗಳಿಗೆ ಸಂಬಂಧಿಸಿದ ಆಯ-ವ್ಯಯವನ್ನು ಸಿದ್ಧಮಾಡಿಕೊಳ್ಳಬೇಕು, ಉದ್ಯೋಗಖಾತ್ರಿ ಯೋಜನೆಯಡಿ ಬೇಡಿಕೆ ಬರುವ ಕೆಲಸಗಳಿಗೆ ಸಂಬಂಧಿಸಿದಂತೆ, ಕಾಮಗಾರಿಗಳನ್ನು ಕೈಗೆತ್ತಿಕೊಂಡು, ಉದ್ಯೋಗ ನೀಡಬೇಕು, ಹಾಗೂ ಹೆಚ್ಚು, ಹೆಚ್ಚು ಮಾನವ ದಿನಗಳನ್ನು ಸೃಜಿಸಬೇಕು, ಕೆಲಸ ಪೂರ್ಣಗೊಳಿಸಿದ ಕೂಲಿ ಕಾರ್ಮಿಕರಿಗೆ ನಿಗದಿತ ಕಾಲಮಿತಿಯಲ್ಲಿ ಕೂಲಿ ಹಣ ಪಾವತಿ ಮಾಡಬೇಕು.  ಹದಿನೈದನೇ ಹಣಕಾಸು ಯೋಜನೆಯಡಿ ಕ್ರಿಯಾ ಯೋಜನೆಯನ್ನು ತಂತ್ರಾಂಶದಲ್ಲಿ ಅಳವಡಿಸಬೇಕು.

ಗ್ರಾಮಗಳಲ್ಲಿ ವೈಯಕ್ತಿಕ ಶೌಚಾಲಯಕ್ಕಾಗಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಶೀಲಿಸಿ, ಅರ್ಹ ಫಲಾನುಭವಿಗಳಿಗೆ ತಕ್ಷಣವೇ ಕಾರ್ಯಾದೇಶ ವಿತರಿಸಬೇಕು.  ಸರ್ಕಾರಿ ಶಾಲೆಗಳಲ್ಲಿರುವ ಮತಗಟ್ಟೆಗಳನ್ನು ಪರಿಶೀಲಿಸಿ, ಕನಿಷ್ಟ ಮೂಲಭೂತ ಸೌಕರ್ಯಗಳು ಇರುವುದನ್ನು ಖಚಿತಪಡಿಸಿಕೊಳ್ಳಬೇಕು.

ಗ್ರಾಮ ಸಭೆಗಳಲ್ಲಿ ಹರ್ ಘರ್ ಜಲ್ ಘೋಷಣೆ ಮಾಡಬೇಕು, ಗ್ರಾಮ ಪಂಚಾಯತ್ ಗಳು ಪಿಒಎಸ್ ಯಂತ್ರಗಳನ್ನು ಬಳಸಿ, ತೆರಿಗೆಯನ್ನು ಸಂಗ್ರಹಿಸುವ ಕಾರ್ಯವನ್ನು ಸಮರ್ಪಕವಾಗಿ ಕೈಗೊಳ್ಳಬೇಕು, ಈ ಬಗ್ಗೆ ಯಾವುದೇ ದೂರುಗಳಿಗೆ ಅವಕಾಶ ಕಲ್ಪಿಸಬಾರದು ಎಂದು ಜಿ.ಪಂ. ಸಿಇಒ ಸೋಮಶೇಖರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿ.ಪಂ. ಉಪಕಾರ್ಯದರ್ಶಿ ತಿಮ್ಮಪ್ಪ, ಮುಖ್ಯ ಯೋಜನಾಧಿಕಾರಿ ಸತೀಶ್ ರೆಡ್ಡಿ ಸೇರಿದಂತೆ ವಿವಿಧ ಅಧಿಕಾರಿಗಳು, ಆಯಾ ತಾಲ್ಲೂಕು ಪಂಚಾಯತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment