ಸುದ್ದಿಒನ್, ಚಿತ್ರದುರ್ಗ : ಭೂ ಕಬಳಿಕೆ ಹಾಗೂ ಜಾತಿ ನಿಂದನೆ ಆರೋಪದ ಮೇಲೆ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ವಿರುದ್ಧ ಎಫ್ಐಆರ್ ದಾಖಲಾಗಿದೆ ಎನ್ನಲಾಗುತ್ತಿದೆ.
ಬೆಂಗಳೂರಿನ ಯಲಹಂಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿ ಸುಧಾಕರ್ ಜೊತೆಗೆ ಭಾಗ್ಯಮ್ಮ ಮತ್ತು ಶ್ರೀನಿವಾಸ್ ಎಂಬುವವರ ವಿರುದ್ಧವೂ ಪ್ರಕರಣ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹಲ್ಲೆ, ವಂಚನೆ ಹಾಗೂ ದೌರ್ಜನ್ಯನದ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸೆವೆಲ್ ಹೀಲ್ಸ್ ಡೆವಲಪರ್ಸ್ ಹಾಗೂ ಟ್ರೇಡರ್ಸ್ ಪಾಲುದಾರಿಕೆಗಳನ್ನು ಹೊಂದಿರುವ ಸಚಿವ ಡಿ ಸುಧಾಕರ್ ಅವರು ದಲಿತರ ಆಸ್ತಿಯನ್ನು ಕಬಳಿಸಿದ್ದಾರೆ ಎಂಬ ಆರೋಪ ಬಂದಿದೆ. ಈ ಸಂಬಂಧ ಸುಬ್ಬಮ್ಮ ಎಂಬುವವರು ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ ಎನ್ನಲಾಗಿದೆ.
ಇನ್ನು ಯಲಹಂಕ ಗ್ರಾಮದ ಸರ್ವೇ ನಂಬರ್ 108/1 ಜಮೀನನ್ನು ಮೋಸದಿಂದ ಕಬಳಿಸಿದ್ದಾರೆ. ಈ ಪ್ರಕರಣ ಕೋರ್ಟ್ ನಲ್ಲಿ ಇದ್ದು, ಗುಂಪಿನಲ್ಲಿ ಬಂದು ಹಲ್ಲೆ ಮಾಡಿದ್ದಾರೆ. ಮನೆಯಲ್ಲಿದ್ದ ಮಗಳ ಮೇಲೂ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕುಟುಂಬದ ಮಹಿಳೆಯರನ್ನು ಹೊರಗೆ ಹಾಕಿ, ಜೆಸಿಬಿಯಿಂದ ಮನೆಯನ್ನು ಕೆಡವಲಾಗಿದೆ ಎಂದು ಸುಬ್ಬಮ್ಮ ದೂರು ನೀಡಿದ್ದಾರೆ ಎನ್ನಲಾಗಿದೆ.