Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದ ಉರ್ದು ಶಾಲೆಯಲ್ಲಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ..!

---Advertisement---

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.12 : ಬಿಸಿಯೂಟ ಸೇವಿಸಿ ಮಕ್ಕಳು ಅಸ್ವಸ್ಥಗೊಂಡ ಘಟನೆಗಳು ಪದೇ ಪದೇ ಮರುಕಳುಹಿಸುತ್ತಲೇ ಇದಾವೆ. ಇದೀಗ ಚಿತ್ರದುರ್ಗದ ಉರ್ದು ಶಾಲೆಯಲ್ಲೂ ಇಂಥದ್ದೇ ಘಟನೆ ನಡೆದಿದೆ. ಬಿಸಿಯೂಟ ತಿಂದ ಮಕ್ಕಳಲ್ಲಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದಾರೆ.

https://x.com/suddione/status/1701592132241551628?t=WFo-pfxWfsn1ogV4zhRBsg&s=08

ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಅಸ್ವಸ್ಥರಾದ ಮಕ್ಕಳನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಸದ್ಯಕ್ಕೆ ಮಕ್ಕಳು ಪ್ರಾಣಪಾಯದಿಂದ ಪಾರಾಗಿದ್ದಾರೆ. ಊಟ ಸೇವಿಸಿದ ಬಳಿಕ ಮಕ್ಕಳು ವಾಂತಿ ಮಾಡಿಕೊಂಡಿದ್ದಾರೆ. ನೋಡ ನೋಡತ್ತಿದ್ದಂತೆ ಕುಸಿದು ಬಿದ್ದಿದ್ದಾರೆ. ಎಚ್ಚೆತ್ತ ಶಿಕ್ಷಕರು ಮಕ್ಕಳನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿದ್ದಾರೆ.

ಇನ್ನು ಆಸ್ಪತ್ರೆಗೆ ಚಿತ್ರದುರ್ಗ ನಗರ ಠಾಣೆಯ ಸಿಪಿಐ ತಿಪ್ಪೆಸ್ವಾಮಿ ಭೇಟಿ ನೀಡಿದ್ದು, ಮಕ್ಕಳ ಆರೋಗ್ಯ ವಿಚಾರಣೆ ಮಾಡಿದ್ದಾರೆ. ಮಕ್ಕಳು ಬಿಸಿಯೂಟದ ಬಳಿಕ ಶೇಂಗಾ ಚಿಕ್ಕಿ ಸೇವಿಸಿದ್ದರು ಎಂಬ ಮಾಹಿತಿ ಇದೆ. ಆದರೆ ಅದರಿಂದಾನೇ ಈ ರೀತಿ ಆಗಿದೆಯಾ ಎಂಬೆಲ್ಲಾ‌ ಮಾಹಿತಿ ಇನ್ನು ಕನ್ಫರ್ಮ್ ಆಗಿಲ್ಲ. ಇದರ ತನಿಖೆಯ ನಂತರ ಏನಾಗಿರಬಹುದು ಎಂಬ ಮಾಹಿತಿ ಸಿಗಲಿದೆ.

ಸ್ಥಳಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಎಸ್ಪಿ ಧರ್ಮೇಂದ್ರ ಕುಮಾರ್ ಮೀನಾ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...