ಸುದ್ದಿಒನ್, ಚಿತ್ರದುರ್ಗ, ಸೆ. 13 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ನಡೆಯಲಿರುವ ಶರಣ ಸಂಸ್ಕೃತಿ ಉತ್ಸವ-2023ರ ಗೌರವಾಧ್ಯಕ್ಷರನ್ನಾಗಿ ಅಥಣಿಯ ಶ್ರೀ ಗಚ್ಚಿನಮಠದ ಶ್ರೀ ಶಿವಬಸವ ಸ್ವಾಮಿಗಳವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಆಡಳಿತಾಧಿಕಾರಿ ಶ್ರೀಮತಿ ಬಿ.ಎಸ್. ರೇಖಾ ಹಾಗೂ ಶ್ರೀ ಬಸವಪ್ರಭು ಸ್ವಾಮಿಗಳವರ ಅಧ್ಯಕ್ಷತೆಯಲ್ಲಿ ಶ್ರೀಮಠದಲ್ಲಿ ಬುಧವಾರ ನಡೆದ ಸಭೆಯಲ್ಲಿ ಈ ಬಾರಿಯ ಶರಣಸಂಸ್ಕøತಿ ಉತ್ಸವವನ್ನು ದಿ. 21-10-2023 ರಿಂದ 25-10-2023ರವರೆಗೆ ನಡೆಸಲು ತೀರ್ಮಾನಿಸಲಾಯಿತು.

ಕಾರ್ಯಕ್ರಮದ ವಿವರಗಳನ್ನು ಮುಂದಿನ ಸಭೆಯಲ್ಲಿ ಚರ್ಚಿಸಲು ಸಭೆ ತೀರ್ಮಾನಿಸಿತು. ಸಭೆಯಲ್ಲಿ ಕಾರ್ಯನಿರ್ವಹಣಾಧಿಕಾರಿ ಎಂ.ಭರತ್‍ಕುಮಾರ್, ಬ್ಯಾಡಗಿ ವಿರಕ್ತಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು, ತಿಳುವಳ್ಳಿಯ ಶ್ರೀ ಬಸವ ನಿರಂಜನ ಸ್ವಾಮಿಗಳು, ಶ್ರೀಮಠದ ವ್ಯವಸ್ಥಾಪಕ ಆರ್. ಲಿಂಗರಾಜ್ ಇದ್ದರು. ಈ ಸಂದರ್ಭದಲ್ಲಿ ಗೌರವಾಧ್ಯಕ್ಷರಾಗಿ ಆಯ್ಕೆಯಾದ ಶ್ರೀಗಳನ್ನು ಸನ್ಮಾನಿಸಲಾಯಿತು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















