Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಹಾತ್ಮ ಗಾಂಧೀಜಿಯವರ 154ನೇ ಜಯಂತಿ : ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆ, ನಿಯಮ ಮತ್ತು ನಿಬಂಧನೆಗಳೇನು ? ಇಲ್ಲಿದೆ ಮಾಹಿತಿ…

Facebook
Twitter
Telegram
WhatsApp

 

ಚಿತ್ರದುರ್ಗ, ಸೆ.14 : ಮಹಾತ್ಮ ಗಾಂಧೀಜಿಯವರ 154ನೇ ಜಯಂತಿ ಸಂದರ್ಭದಲ್ಲಿ ವಿದ್ಯಾರ್ಥಿ, ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮೊದಲಾದ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು 3 ಪ್ರತ್ಯೇಕ ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆಯೋಜಿಸಿದೆ.

ಜಿಲ್ಲಾ ಮಟ್ಟದಲ್ಲಿ ವಿಜೇತರಾದವರಿಗೆ ಪ್ರತಿ ವಿಭಾಗದಲ್ಲಿ ಪ್ರತ್ಯೇಕವಾಗಿ ಹಾಗೂ ಕ್ರಮವಾಗಿ ತಲಾ 3 ಸಾವಿರ ರೂ, 2 ಸಾವಿರ ರೂ. ಹಾಗೂ 1 ಸಾವಿರ ರೂ. ಹಾಗೂ ರಾಜ್ಯ ಮಟ್ಟದಲ್ಲಿ ವಿಜೇತರಾದವರಿಗೆ ಪ್ರತಿ ವಿಭಾಗದಲ್ಲಿ ಪ್ರತ್ಯೇಕವಾಗಿ ಹಾಗೂ ಕ್ರಮವಾಗಿ ತಲಾ 31 ಸಾವಿರ ರೂ, 21 ಸಾವಿರ ರೂ. ಹಾಗೂ 11 ಸಾವಿರ ರೂ. ನಗದು ಬಹುಮಾನ ನೀಡಲಾಗುವುದು.

ಪ್ರೌಢ ಶಾಲಾ ವಿಭಾಗ :- 1) ನನಗೇಕೆ ಗಾಂಧೀಜಿ ಇಷ್ಟವಾಗುತ್ತಾರೆ. 2) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ.  3) ಗಾಂಧೀಜಿಯವರ ತತ್ವಗಳಿಂದ ದೇಶ ಕಟ್ಟುವ ಬಗೆ. ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 900 ಪದಗಳಿಗೆ ಮೀರದಂತೆ ಪ್ರಬಂಧಗಳನ್ನು. ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ರಚಿಸಬೇಕು.

ಪದವಿ ಪೂರ್ವ ಶಿಕ್ಷಣ ವಿಭಾಗ :- 1) ದೇಶದ ಕಳಂಕವಾದ ಅಸ್ಪೃಶ್ಯತೆ ನಿವಾರಿಸುವಲ್ಲಿನ ಗಾಂಧೀಜಿಯವರ ಪ್ರಯೋಗಗಳು.  2) ಗಾಂಧೀಜಿಯವರನ್ನು ಜಗತ್ತು ಗ್ರಹಿಸಿದ ರೀತಿ. 3)  ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ.  ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 1500 ಪದಗಳಿಗೆ ಮೀರದಂತೆ ಪ್ರಬಂಧಗಳನ್ನು ಪದವಿ ಪೂರ್ವ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳು ರಚಿಸಬೇಕು.

ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗ :- 1) ದೇಶ ನಿರ್ಮಾಣದಲ್ಲಿ ಗಾಂಧೀಜಿಯವರ ಜಾತ್ಯಾತೀತ ನಿಲುವುಗಳು.  2) ಗಾಂಧೀಜಿಯವರ ಧಾರ್ಮಿಕ ಸಹಿಷ್ಣುತೆ ಚಿಂತನೆ, ಸ್ವಾತಂತ್ರ್ಯ ಮತ್ತು ಸಮಾನತೆಯ ಪರಿಕಲ್ಪನೆಗಳು. 3) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ.  4) ಗಾಂಧೀಜಿಯವರು ಕಂಡ ಸ್ವರಾಜ್ಯ ಮತ್ತು ಆರ್ಥಿಕ ಚಿಂತನೆಗಳು.  ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 2000 ಪದಗಳಿಗೆ ಮೀರದಂತೆ ಪ್ರಬಂಧಗಳನ್ನು ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳು ರಚಿಸಬೇಕು.

ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳು ತಾವು ರಚಿಸಿದ ಪ್ರಬಂಧಗಳನ್ನು ತಮ್ಮ ಸಂಸ್ಥೆಗಳ ಮುಖ್ಯಸ್ಥರಿಗೆ ಗುರುತಿನ ಚೀಟಿ ಹಾಗೂ ಸಂಪರ್ಕ ವಿವರಗಳನ್ನು ಲಗತ್ತಿಸಿ ಸಲ್ಲಿಸಬೇಕು.  ಪ್ರತಿ ಶಾಲೆ / ಕಾಲೇಜು / ಸ್ನಾತಕೋತ್ತರ ಪದವಿ ವಿಭಾಗಗಳ ಮುಖ್ಯಸ್ಥರು ತಮ್ಮ ಸಂಸ್ಥೆಯಲ್ಲಿನ ಆಯ್ದ ಅತ್ಯುತ್ತಮವಾದ ಮೂರು ಪ್ರಬಂಧಗಳನ್ನು ದಿನಾಂಕ : 26-09-2023 ರೊಳಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಿಲ್ಲಾ ಕಚೇರಿಗಳಿಗೆ ತಲುಪಿಸಬೇಕು.

ಅವುಗಳಲ್ಲಿ ಅತ್ಯುತ್ತಮವಾದ ಪ್ರಬಂಧಗಳಿಗೆ ಬಹುಮಾನ ನೀಡಲಾಗುವುದು.
ಪ್ರಬಂಧ ರಚಿಸಲು ಮಾರ್ಗಸೂಚಿಗಳು :-  ಪ್ರಬಂಧವು ಸಂಪೂರ್ಣವಾಗಿ ಸ್ವರಚಿತವಾಗಿರಬೇಕು.  ಪ್ರಬಂಧವು ಕನ್ನಡದಲ್ಲಿ ಶುದ್ಧ ಕೈಬರಹ ಅಥವಾ ನುಡಿ ಇಲ್ಲವೇ ಯೂನಿಕೋಡ್ ತಂತ್ರಾಂಶದಲ್ಲಿ ಬೆರಳಚ್ಚು ಮಾಡಿರಬೇಕು. ಆಕರವಾಗಿ ಬಳಸಿದ ಪರಾಮರ್ಶನ / ಆಧಾರ ಗ್ರಂಥಗಳ ವಿವರಗಳನ್ನು ಪ್ರಬಂಧದ ಕೊನೆಯಲ್ಲಿ ನಮೂದಿಸಬೇಕು. ಪ್ರಬಂಧಕಾರರ ಹೆಸರು, ವಿಳಾಸ ನಮೂದಿಸಿರಬೇಕು.

ಶಾಲೆ / ಕಾಲೇಜುಗಳ ಮುಖ್ಯಸ್ಥರುಗಳ ಮೂಲಕವೇ ಜಿಲ್ಲಾ ವಾರ್ತಾಧಿಕಾರಿಗಳಿಗೆ ಪ್ರಬಂಧಗಳನ್ನು ತಲುಪಿಸಬೇಕು. ಪ್ರಬಂಧವು ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು.  ಆಯ್ದ ಪ್ರಬಂಧಗಳ ಪ್ರಕಟಣೆಯ ಹಕ್ಕನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊಂದಿರುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಮಾಲೆ (ಜಾಂಡೀಸ್) ರೋಗ ಎಂದರೇನು ? ಇಲ್ಲಿದೆ ಉಪಯುಕ್ತ ಮಾಹಿತಿ….!

ಕಾಮಾಲೆ ಅಥವಾ ಜಾಂಡೀಸ್ ಎನ್ನುವುದು ಹತ್ತು ಹಲವು ರೋಗಗಳಲ್ಲಿ ಕಂಡು ಬರುವ ದೇಹ ಸ್ಥಿತಿಯಾಗಿರುತ್ತದೆ. ಹಲವಾರು ಕಾರಣಗಳಿಂದ ಕಾಮಾಲೆ ರೋಗ ಬರುವ ಸಾಧ್ಯತೆ ಇರುತ್ತದೆ. ಕಾಮಾಲೆ ಎಂಬ ಪದವು ಕಾಮ ಮತ್ತು ಲಾ ಎಂಬ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

error: Content is protected !!