Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರು ರಸ್ತೆ ಗುಂಡಿ ಸಮಸ್ಯೆ ಗೆ ಎಎಪಿಯಿಂದ ಎಎಪಿಯಿಂದ ಕಾರ್ಯಪಡೆ ಆರಂಭ

Facebook
Twitter
Telegram
WhatsApp

ಬೆಂಗಳೂರು: ಬೆಂಗಳೂರು ನಗರದ ರಸ್ತೆ ಗುಂಡಿಗಳು ಹಾಗೂ ಕಳಪೆ ರಸ್ತೆ ಕಾಮಗಾರಿ ವಿರುದ್ಧ ಹೋರಾಡಲು ಆಮ್‌ ಆದ್ಮಿ ಪಾರ್ಟಿಯು ಕಾರ್ಯಪಡೆ ಹಾಗೂ ವಾಟ್ಸಪ್‌ ಸಹಾಯವಾಣಿಯನ್ನು ಆರಂಭಿಸಿದೆ ಎಂದು ಪಕ್ಷದ ಮುಖಂಡ ಹಾಗೂ ವಕೀಲರಾದ ಜಗದೀಶ್‌ ಕೆ.ಎನ್‌. ಮಹಾದೇವ್‌ ಹೇಳಿದರು.

ಇಂದು ನಗರದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಹಾಗೂ ಬಿಬಿಎಂಪಿಯ ಭ್ರಷ್ಟಾಚಾರದಿಂದಾಗಿ ಬೆಂಗಳೂರಿನ ಬಹುತೇಕ ರಸ್ತೆಗಳಲ್ಲಿ ಯಮಸ್ವರೂಪಿ ಗುಂಡಿಗಳು ಬಿದ್ದಿವೆ. ಇವುಗಳಿಂದಾಗಿ ಕೆಲವು ವಾಹನಸವಾರರು ಕೈಕಾಲು ಮುರಿದುಕೊಂಡರೆ, ಇನ್ನು ಕೆಲವರು ಜೀವವನ್ನೇ ಕಳೆದುಕೊಂಡಿದ್ದಾರೆ.

ರಸ್ತೆ ಗುಂಡಿಗಳ ವಿರುದ್ಧ ಆಮ್‌ ಆದ್ಮಿ ಪಾರ್ಟಿಯು ಸಮರ ಆರಂಭಿಸಿದ್ದು, ಇದಕ್ಕಾಗಿ ವಿಶೇಷ ಕಾರ್ಯಪಡೆ ಹಾಗೂ ವಾಟ್ಸಪ್‌ ಸಹಾಯವಾಣಿಯನ್ನು ಆರಂಭಿಸುತ್ತಿದ್ದೇವೆ. ಸೂಕ್ತ ಕಾನೂನು ಹೋರಾಟದ ಮೂಲಕ ಸಾರ್ವಜನಿಕರಿಗೆ ನ್ಯಾಯ ದೊರಕಿಸಿಕೊಡುವ ಪಣತೊಟ್ಟಿದ್ದೇವೆ ಎಂದು ಹೇಳಿದರು.

ನಗರದಲ್ಲಿ ರಸ್ತೆ ಕಳಪೆ ಕಾಮಗಾರಿ ನಡೆಯುತ್ತಿರುವುದು ಹಾಗೂ ಅಪಾಯಕಾರಿ ಗುಂಡಿಗಳು ಕಂಡುಬಂದರೆ ತಕ್ಷಣವೇ ನಮ್ಮ ವಾಟ್ಸಪ್‌ ಸಹಾಯವಾಣಿ 9513319676 ಸಂಖ್ಯೆಗೆ ಮೆಸೇಜ್‌ ಕಳುಹಿಸಬಹುದು. ನಮ್ಮ ಕಾರ್ಯಪಡೆಯು ಪ್ರಕರಣದ ಬಗ್ಗೆ ಪರಾಮರ್ಶೆ ನಡೆಸಿ ಕೂಡಲೇ ಕಾರ್ಯಪ್ರವೃತ್ತವಾಗಲಿದೆ ಎಂದು ಹೇಳಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

30 ವರ್ಷದ ಹಳೇ ಕಥೆ ಹೇಳಿದ ಶಿವರಾಮೇಗೌಡ : ಇಂಗ್ಲೆಂಡ್ ನಲ್ಲೂ ತಗಲಾಕಿಕೊಂಡಿದ್ರಂತೆ ರೇವಣ್ಣ..!

ಮಂಡ್ಯ: ಅಬ್ಬಬ್ಬಾ.. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ವಿಚಾರಗಳು ದಿನೇ‌ ದಿನೇ ಒಂದೊಂದು ವಿಚಾರಗಳು ಬೆಳಕಿಗೆ ಬರುತ್ತಿವೆ. ಕಳೆದ ಮೂವತ್ತು ವರ್ಷಗಳ ಹಿಂದೆಯೂ ಇಂಥದ್ದೊಂದು ಘಟನೆ ಅದರಲ್ಲೂ ಇಂಗ್ಲೆಂಡ್ ನಲ್ಲಿ‌ ನಡೆದಿತ್ತಂತೆ. ಈ

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!