Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಾತಿ ಪತ್ರ ನೀಡದಿರುವ ತಹಶೀಲ್ದಾರ್ ಹಾಗೂ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಿ : ಕಾಡುಗೊಲ್ಲರ ಸಂಘ ಮನವಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.15 : ಕಾಡುಗೊಲ್ಲ ಜಾತಿ ದೃಢೀಕರಣ ಪತ್ರ ಕೊಡದಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘ ಜಿಲ್ಲಾ ಶಾಖೆ ವತಿಯಿಂದ ಜಿಲ್ಲಾಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

ಜನಸ್ನೇಹಿ ಅಟಲ್‍ಜಿ ನಿರ್ದೇಶನಾಲಯದ ನಿರ್ದೇಶಕರು ರಾಜ್ಯದ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿ, ಬಿ.ಸಿ.ಎಂ.ಇಲಾಖೆ, ತಹಶೀಲ್ದಾರ್ ಇವರುಗಳಿಗೆ ಸ್ಪಷ್ಟ ಆದೇಶ ರವಾನಿಸಿದ್ದರು. ತಹಶೀಲ್ದಾರರು ರೀತಿ ರಿವಾಜುಗಳನ್ನು ಕೇಳುತ್ತಿರುವುದರಲ್ಲಿ ಅರ್ಥವಿಲ್ಲ. ಕಾಡುಗೊಲ್ಲ ಜನಾಂಗ ದನ, ಕುರಿ ಕಾಯುವುದು ಕುಲಕಸುಬು ಇವೆಲ್ಲದರ ಆಧಾರದ ಮೇಲೆ ಕಾಡುಗೊಲ್ಲ ಜಾತಿ ದೃಢೀಕರಣ ಪತ್ರ ನೀಡಬಹುದು. ಆದರೂ ವಿನಾ ಕಾರಣ ಸತಾಯಿಸುತ್ತಿದ್ದಾರೆಂದು ಕಾಡುಗೊಲ್ಲರ ಜಿಲ್ಲಾ ಶಾಖೆ ಪದಾಧಿಕಾರಿಗಳು ಜಿಲ್ಲಾಧಿಕಾರಿಯವರಿಗೆ ತಮ್ಮ ಸಂಕಷ್ಟಗಳನ್ನು ತೋಡಿಕೊಂಡರು.

29-1-2018 ರಲ್ಲಿ ರಾಜ್ಯ ಸರ್ಕಾರ ಕಾಡುಗೊಲ್ಲ ಜಾತಿ ದೃಢೀಕರಣ ಪತ್ರ ನೀಡುವಂತೆ ಆದೇಶಿಸಿದ್ದರು ಇದುವರೆಗೂ ಜಾತಿ ಪತ್ರ ನೀಡದೆ ಅಲೆದಾಡಿಸುತ್ತಿರುವ ಜಿಲ್ಲೆಯ ಆರು ತಹಶೀಲ್ದಾರ್ ಹಾಗೂ ಸಂಬಂಧಿಸಿದ ಸಿಬ್ಬಂದಿಗಳನ್ನು ಸೇವೆಯಿಂದ ವಜಾಗೊಳಿಸುವಂತೆ ಕರ್ನಾಟಕ ಉಚ್ಚನ್ಯಾಯಾಲಯದ ಮೊರೆ ಹೋಗುವುದಾಗಿ ಕಾಡುಗೊಲ್ಲ ಜನಾಂಗದವರು ಜಿಲ್ಲಾಧಿಕಾರಿ ಗಮನಕ್ಕೆ ತಂದರು.

ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘದ ರಾಜ್ಯ ಗೌರವಾಧ್ಯಕ್ಷ ಮೀಸೆ ಮಹಾಲಿಂಗಪ್ಪ, ಜಿಲ್ಲಾಧ್ಯಕ್ಷ ರಾಜಕುಮಾರ್ ಎಸ್. ದಾವಣಗೆರೆ ಜಿಲ್ಲಾಧ್ಯಕ್ಷ ಸುಂಕಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಣ್ಣ ಬೂದಿಹಳ್ಳಿ, ಪ್ರಶಾಂತ್, ಕೃಷ್ಣಪ್ಪ, ಯಲಗಟ್ಟೆ ವೀರೇಶ್ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

ಫೋಟೋ ವಿವರಣೆ : ಕಾಡುಗೊಲ್ಲ ಜಾತಿ ದೃಢೀಕರಣ ಪತ್ರ ನೀಡದ ಜಿಲ್ಲೆಯ ಆರು ತಹಶೀಲ್ದಾರ್‍ಗಳನ್ನು ಸೇವೆಯಿಂದ ವಜಾಗೊಳಿಸುವಂತೆ ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘ ಜಿಲ್ಲಾ ಶಾಖೆಯಿಂದ ಜಿಲ್ಲಾಧಿಕಾರಿಗೆ ಮನವಿ.   ಫೋಟೋ-6.

ಚಿತ್ರದುರ್ಗ : ಅಂತರಾಷ್ಟ್ರೀಯ ಸಂವಿಧಾನ ಅಂಗೀಕರಿಸಿಕೊಂಡ ದಿನ ಹಾಗೂ ಇಂಜಿನಿಯರ್ಸ್ ಡೇ ಕಾರ್ಯಕ್ರಮವನ್ನು ವಾಸವಿ ವಿದ್ಯಾಸಂಸ್ಥೆಯಲ್ಲಿ ಶುಕ್ರವಾರ ಆಚರಿಸಲಾಯಿತು.
1945 ನವೆಂಬರ್ 26 ರಂದು ಸಂವಿಧಾನ ಅಂಗೀಕರಿಸಿ ಅಧಿನಿಯಮ ಅರ್ಪಿಸಿಕೊಂಡಿದ್ದು, ಸಂವಿಧಾನದ ಪ್ರತಿಜ್ಞಾವಿಧಿಯನ್ನು ವಾಸವಿ ಕನ್ನಡ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಕೆ.ಆರ್.ರಾಧಾಮಣಿ ಬೋಧಿಸಿದರು.
ಭಾರತ ರತ್ನ ಮೋಕ್ಷಗುಂಡಂ ಸರ್ ಎಂ.ವಿಶ್ವೇಶ್ವರಯ್ಯನವರ ಜನ್ಮದಿನವನ್ನು ಆಚರಿಸಲಾಯಿತು. ಸಹ ಶಿಕ್ಷಕಿ ಆರ್.ಮಂಜುಳ ವಿಶ್ವೇಶ್ವರಯ್ಯನವರ ಮೇರು ವ್ಯಕ್ತಿತ್ವವನ್ನು ಪರಿಚಯಿಸಿದರು.
ವಾಸವಿ ವಿದ್ಯಾಸಂಸ್ಥೆ ನಿಕಟಪೂರ್ವ ಅಧ್ಯಕ್ಷ ಪಿ.ಎಲ್.ಸುರೇಶ್‍ರಾಜು ಮಾತನಾಡಿ ಕುವೆಂಪುರವರ ಕವಿವಾಣಿಯಂತೆ ಸರ್ ಎಂ.ವಿಶ್ವೇಶ್ವರಯ್ಯನವರು ಯಂತ್ರ ಋಷಿ ಎಂದು ಬಣ್ಣಿಸಿದರು.
ವಾಸವಿ ವಿದ್ಯಾಸಂಸ್ಥೆ ಅಧ್ಯಕ್ಷ ಎಸ್.ಎ.ಸತ್ಯನಾರಾಯಣ ಶ್ರೇಷ್ಠಿ, ಸಹ ಕಾರ್ಯದರ್ಶಿ ಎಲ್.ಎನ್.ಅಜಯ್‍ಕುಮಾರ್, ಮುಖ್ಯ ಶಿಕ್ಷಕರು ಮತ್ತು ಶಿಕ್ಷಕ ವೃಂದದವರು ಈ ಸಂದರ್ಭದಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!