ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.15 : ಅಂತರಾಷ್ಟ್ರೀಯ ಸಂವಿಧಾನ ಅಂಗೀಕರಿಸಿಕೊಂಡ ದಿನ ಹಾಗೂ ಇಂಜಿನಿಯರ್ಸ್ ಡೇ ಕಾರ್ಯಕ್ರಮವನ್ನು ವಾಸವಿ ವಿದ್ಯಾಸಂಸ್ಥೆಯಲ್ಲಿ ಶುಕ್ರವಾರ ಆಚರಿಸಲಾಯಿತು.
1945 ನವೆಂಬರ್ 26 ರಂದು ಸಂವಿಧಾನ ಅಂಗೀಕರಿಸಿ ಅಧಿನಿಯಮ ಅರ್ಪಿಸಿಕೊಂಡಿದ್ದು, ಸಂವಿಧಾನದ ಪ್ರತಿಜ್ಞಾವಿಧಿಯನ್ನು ವಾಸವಿ ಕನ್ನಡ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಕೆ.ಆರ್.ರಾಧಾಮಣಿ ಬೋಧಿಸಿದರು.
ಭಾರತ ರತ್ನ ಮೋಕ್ಷಗುಂಡಂ ಸರ್ ಎಂ.ವಿಶ್ವೇಶ್ವರಯ್ಯನವರ ಜನ್ಮದಿನವನ್ನು ಆಚರಿಸಲಾಯಿತು. ಸಹ ಶಿಕ್ಷಕಿ ಆರ್.ಮಂಜುಳ ವಿಶ್ವೇಶ್ವರಯ್ಯನವರ ಮೇರು ವ್ಯಕ್ತಿತ್ವವನ್ನು ಪರಿಚಯಿಸಿದರು.
ವಾಸವಿ ವಿದ್ಯಾಸಂಸ್ಥೆ ನಿಕಟಪೂರ್ವ ಅಧ್ಯಕ್ಷ ಪಿ.ಎಲ್.ಸುರೇಶ್‍ರಾಜು ಮಾತನಾಡಿ ಕುವೆಂಪುರವರ ಕವಿವಾಣಿಯಂತೆ ಸರ್ ಎಂ.ವಿಶ್ವೇಶ್ವರಯ್ಯನವರು ಯಂತ್ರ ಋಷಿ ಎಂದು ಬಣ್ಣಿಸಿದರು.
ವಾಸವಿ ವಿದ್ಯಾಸಂಸ್ಥೆ ಅಧ್ಯಕ್ಷ ಎಸ್.ಎ.ಸತ್ಯನಾರಾಯಣ ಶ್ರೇಷ್ಠಿ, ಸಹ ಕಾರ್ಯದರ್ಶಿ ಎಲ್.ಎನ್.ಅಜಯ್‍ಕುಮಾರ್, ಮುಖ್ಯ ಶಿಕ್ಷಕರು ಮತ್ತು ಶಿಕ್ಷಕ ವೃಂದದವರು ಈ ಸಂದರ್ಭದಲ್ಲಿದ್ದರು.