Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರಕ್ಕೆ ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ..? : ಕುಮಾರಸ್ವಾಮಿ ಕೆಂಡಾಮಂಡಲ

---Advertisement---

ರೈತರ ಆತ್ಮಹತ್ಯೆ ಕುರಿತ ಸುದ್ದಿ ನೋಡಿದ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರ ಮೇಲೆ ಕೆಂಡಾಮಂಡಲರಾಗಿದ್ದಾರೆ. ಕುಮಾರಸ್ವಾಮಿ ಸರ್ಕಾರ ಬಂದಾಗ ಅತಿ ಹೆಚ್ಚು ಗಮನ ಕೊಟ್ಟಿದ್ದು ರೈತರ ಕಾಳಜಿ ವಿಚಾರವಾಗಿ. ಸಾಕಷ್ಟು ಆತ್ಮಹತ್ಯೆಗಳನ್ನು ತಡೆದಿದ್ದರು. ಹೀಗಾಗಿ ರೈತರ ಆತ್ಮಹತ್ಯೆ ವಿಚಾರ ಕೇಳಿ ಆಕ್ರೋಶಗೊಂಡಿದ್ದಾರೆ.

ಬೆಳ್ಳಂ ಬೆಳಗ್ಗೆಯೇ ಈ ವರದಿ ಓದಿದಾಕ್ಷಣ ಬಹಳ ಸಂಕಟವಾಯಿತು, ಕಣ್ಣಾಲಿಗಳು ತುಂಬಿ ಬಂದವು. ಇನ್ನೆಷ್ಟು ದಿನ ಇಂತಹ ಸಾವುಗಳನ್ನು ನೋಡಬೇಕು. ಕೇವಲ ಪ್ರಚಾರ, ಅಧಿಕಾರದ ಸುಖ ಅನುಭವಿಸುತ್ತಿರುವ @INCKarnataka ಸರಕಾರಕ್ಕೆ ಅನ್ನದಾತನ ಸಾವಿನ ಕೇಕೆ ಸವಿಗಾನವಾಗಿದೆಯಾ? ಇವರಿಗೆ ವಾಸ್ತವ ಅರಿವಿಲ್ಲವೆ?

ಗ್ಯಾರಂಟಿಗಳನ್ನು ಕೊಟ್ಟೆವೆಂದು ಬೀಗುತ್ತಿರುವ @INCKarnataka ಸರಕಾರಕ್ಕೆ ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ? ಇದೇನಾ ‘ಕರ್ನಾಟಕ ಮಾದರಿ’? ರಾಜ್ಯದಲ್ಲಿ ಕೃಷಿ ಇಲಾಖೆ ಎನ್ನುವುದು ಇದೆಯಾ? ಅದು ಕೃಷಿ ಇಲಾಖೆಯಾ, ಕಸಾಯಿಖಾನೆಯಾ? ಕಂದಾಯಕ್ಕೂ ಆದಾಯದ ಚಿಂತೆಯಾ? ರಾಜ್ಯಕ್ಕೆ ಬರ, ಕೆಲವರಿಗೆ ಅದೇ ವರ..!! ನೈಜಸ್ಥಿತಿ

ಆಗಸ್ಟ್, ಸೆಪ್ಟೆಂಬರ್ ನಲ್ಲಿ ಕೆಲವೆಡೆ ಮಳೆಯಾದರೂ ಪ್ರಯೋಜನವಾಗಿಲ್ಲ. ಆಗ್ಗೆ ಬೆಳೆಗಳು ನಾಶವಾಗಿವೆ. ತುರ್ತಾಗಿ ಕೇಂದ್ರಕ್ಕೆ ಮನವಿ ಮಾಡಬೇಕಿದ್ದ ಸರಕಾರ ಮಾರ್ಗಸೂಚಿ ನೆಪದಲ್ಲಿ ಕಾಲಹರಣ ಮಾಡುತ್ತಿದೆ. ಕಾಲಹರಣವೂ ಜೀವಹರಣವೂ ಬೇರೆ ಬೇರೆ ಅಲ್ಲ. ತುರ್ತಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿರುವ ಹಣ ಬಿಡುಗಡೆ ಮಾಡಬಹುದಲ್ಲವೇ?

ಬೆಳೆ ವಿಮೆಯೂ ಅನ್ನದಾತರ ಆಪತ್ತಿಗೆ ಆಗುತ್ತಿಲ್ಲ,ಅದರ ಬಗ್ಗೆ ಅವರಿಗೆ ವಿಶ್ವಾಸವೇ ಇಲ್ಲ. ಅವರು ಸಾವಿನ ದವಡೆಗೆ ಬೀಳುತ್ತಿದ್ದರೆ ಅಧಿಕಾರಿಗಳು ಅರ್ಹ-ಅನರ್ಹ ಸಾವು(!!) ಎಂದು ವಿಭಜಿಸಿ ಲೆಕ್ಕ ಹಾಕಿಕೊಂಡು ಕೂತಿದ್ದಾರೆ.ಸಾವಿನಲ್ಲೂ ಅರ್ಹತೆ, ಅನರ್ಹತೆ ಹುಡುಕುವ ಈ ಕ್ರೂರತೆಗೆ ಏನೆಂದು ಹೇಳುವುದು? ರೈತರ ಸಾವುಗಳೆಂದರೆ ಇವರಿಗೆ ಇಷ್ಟು ಹಗುರವೇ..?

ನನ್ನ ಮನವಿ ಇಷ್ಟೇ; ರೈತರು ಎದೆಗುಂದಬಾರದು. ನಿಮ್ಮ ದುಡುಕಿನ ನಿರ್ಧಾರ ನಿಮ್ಮ ಕುಟುಂಬವನ್ನು ಅನಾಥಗೊಳಿಸುತ್ತದೆ, ನಿಮ್ಮೊಂದಿಗೆ ನಾನಿದ್ದೇನೆ.
ಸರಕಾರ ಇಂಥಹ ಆತ್ಮಹತ್ಯೆ ಪ್ರಕರಣಗಳಿಗೆ ಇತಿಶ್ರೀ ಹಾಡಲೇಬೇಕು. ಶಾಶ್ವತವಾಗಿ ಪರಿಹಾರೋಪಾಯ ಕಂಡುಕೊಳ್ಳಬೇಕು. ಜೀವಬಿಟ್ಟ ರೈತ ಕುಟುಂಬಗಳಿಗೆ ಮಾನವೀಯತೆಯ ನೆರವು ಕೊಡಬೇಕು. ವಿಳಂಬ ಸರಿಯಲ್ಲ ಎಂದು ಟ್ವೀಟ್ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment