Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸಚಿವ ಮಧು ಬಂಗಾರಪ್ಪರಿಂದ ಕೊಲೆ‌ ಬೆದರಿಕೆ ಇದೆ : ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ

---Advertisement---

 

 

ಬೆಂಗಳೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಪ್ರಣಾವನಂದ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ. ಮಧು ಬಂಗಾರಪ್ಪ ಅವರಿಂದ ನನಗೆ ಜೀವ ಬೆದರಿಕೆ ಇದೆ ಎಂದು ಹೇಳಿದ್ದಾರೆ. ಮಧು ಬಂಗಾರಪ್ಪ ಅವರ ಬೆಂಬಲಿಗರು ನನಗೆ ಕರೆ ಮಾಡಿ, ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದಿದ್ದಾರೆ.

ಇನ್ನು ಇಂದು ಕಮಿಷನರ್ ಅವರನ್ನು ಭೇಟಿ ಮಾಡಿ, ಈ ಸಂಬಂಧ ದೂರು ನೀಡುವುದಾಗಿ ತಿಳಿಸಿದ್ದಾರೆ. ಹರಿಪ್ರಸಾದ್ ಅವರಿಗೆ ಸ್ಥಾನಮಾನ ನೀಡಿ ಅಂತ ಕೇಳುವುದರಲ್ಲಿ ತಪ್ಪೇನಿದೆ. ಅವರು ಹಿಂದುಳಿದ ವರ್ಗದವರು. ಅವರಿಗೆ ಸ್ಥಾನಮಾನ ಕೇಳುವುದು ತಪ್ಪಲ್ಲ. ಬೇರೆ ಸಮುದಾಯದವರಿಗಾಗಿ ಹೋರಾಟ ಮಾಡಿದರಲ್ಲಾ, ಆ ಸಮುದಾಯಕ್ಕೆ ಮಧು ಬಂಗಾರಪ್ಪ ಅವರ ಕೊಡುಗೆ ಏನು..? ಎಂದು ಪ್ರಶ್ನಿಸಿದ್ದಾರೆ.

ನಾನು ಸಮುದಾಯದ ಭೂಮಿ ಕೊಳ್ಳೆ ಹೊಡೆದಿಲ್ಲ. ಸೈಟ್ ಮಾಡಿ ಮಾರಾಟ‌ ಮಾಡಿಲ್ಲ. ಬಿಕೆ ಹರಿಪ್ರಸಾದ್ ಕಳ್ಳತನ ಮಾಡಿದವರಲ್ಲ. ಈಡಿಗ ಸಮುದಾಯವನ್ನು ಸರ್ಕಾರವೇ ಹತ್ತಿಕ್ಕುತ್ತಿದೆ. ಸ್ವಾಮೀಜಿಗಳ ವಿರುದ್ಧ ಸಂಚು ನಡೆಯುತ್ತಿದೆ. ನನ್ನ ಡಿಎನ್ಎ ವಿಚಾರ ನಿಮಗೆ ಯಾಕೆ ಬೇಕು. ನಾನು ಸ್ವಾಮೀಜಿ ಅಲ್ಲ ಅಂತ ಹೇಳುವುದಕ್ಕೆ ಅವರು ಯಾರು..? ಸಮುದಾಯಕ್ಕೆ ಅನ್ಯಾಯವಾದರೆ ಅದಕ್ಕೆ ನೀವೆ ಹೊಣೆ. ನಿಮ್ಮ ಹಿನ್ನೆಲೆ ಏನು ಅಂತ ನಿಮಗೆ ಗೊತ್ತಿದೆಯಾ..? ಎಂದಿದ್ದಾರೆ.

ಈ ಆರೋಪದ ವಿಚಾರವಾಗಿ ಮಾತನಾಡಿರುವ ಸಚಿವ ಮಧು ಬಂಗಾರಪ್ಪ, ಪ್ರಣಾವನಾಂದ ಶ್ರೀಗಳು ಕಣ್ಣೀರು ಯಾಕೆ ಹಾಕಿರುವುದು..? ಅವರೇನು ತಪ್ಪು ಮಾಡಿದ್ದಾರಾ..? ಪ್ರಣವಾನಂದ ಶ್ರೀಗಳು ನಮ್ಮ ಸಮುದಾಯದವರೇ ಅಲ್ಲ. ಅವರೇನು ಈಡಿಗ ಸಮುದಾಯದವರಾ..? ಅವರ ಹಿನ್ನಲೆಯಲ್ಲಿ ಕೆದಕಿ ನಿಮಗೆ ಗೊತ್ತಾಗುತ್ತದೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...