ಸುದ್ದಿಒನ್, ಚಿತ್ರದುರ್ಗ ಸೆ. 17 : ಚಿತ್ರದುರ್ಗ ನಗರಸಭೆ ಪೌರ ಕಾರ್ಮಿಕರಿಂದ ಪರಿಸರಕ್ಕೆ ಮಾರಕವಾಗಿರುವ ಪಿಒಪಿ (ಪ್ಲಾಸ್ಟರ್ ಆಫ್ ಪ್ಯಾರಿಸ್) ಗಣೇಶ ಮೂರ್ತಿಗಳ ಬದಲಾಗಿ ಪರಿಸರ ಸ್ನೇಹಿ ಮಣ್ಣಿನ ಗಣೇಶ ಪ್ರತಿಷ್ಠಾಪಿಸುವಂತೆ ನಡೆಸಿದ ಜಾಗೃತಿ ಜಾಥಾಕ್ಕೆ ಪೌರಾಯುಕ್ತರಾದ ಶ್ರೀಮತಿ ಎಂ.ರೇಣುಕಾ ಅವರು ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು
ಈ ಬಾರಿಯ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಬೇಕು. ಮಣ್ಣಿನಿಂದ ಮಾಡಿರುವ ಗಣೇಶ ಮೂರ್ತಿಗಳನ್ನು ಪೂಜಿಸಬೇಕು. ಪರಿಸರಕ್ಕೆ ಮಾರಕವಾಗಿರುವ ಹಾಗೂ ರಾಸಾಯನಿಕಯುಕ್ತ ಬಣ್ಣ ಲೇಪಿತ ಗಣೇಶ ಮೂರ್ತಿಗಳನ್ನು ಬಳಸದಂತೆ ಸಾರವಜನಿಕರಲ್ಲಿ ಮನವಿ ಮಾಡಿದರು.
ಗಾಂಧಿ ವೃತ್ತದಲ್ಲಿ ಬೆಳಿಗ್ಗೆ 6:30 ರ ಸುಮಾರಿಗೆ ಪೌರ ಕಾರ್ಮಿಕರು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಮಣ್ಣಿನ ಗಣೇಶನನ್ನು ಪೂಜಿಸಿ, ಪಿಓಪಿ ಮೂರ್ತಿಯನ್ನು ತ್ಯಜಿಸಿ ಎಂದು ಘೋಷಣೆಯನ್ನು ಕೂಗುವುದರ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ನಗರಸಭೆಯ ಆರೋಗ್ಯ ನಿರೀಕ್ಷಕರಾದ ನಾಗರಾಜ್, ಶ್ರೀಮತಿ ಭಾರತಿ ಮತ್ತು ಬಸವರಾಜ್ ಸಿಬ್ಬಂದಿ ವರ್ಗದವರು ಸೇರಿದಂತೆ ಪೌರ ಕಾರ್ಮಿಕರು ಭಾಗವಹಿಸಿದ್ದರು.