Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ – ಹೊಳಲ್ಕೆರೆ ಹೆದ್ದಾರಿಯಲ್ಲಿ ಅಪಘಾತ : ಓರ್ವ ಸಾವು, ಹಲವರಿಗೆ ಗಾಯ

---Advertisement---

 

ಸುದ್ದಿಒನ್, ಚಿತ್ರದುರ್ಗ, ಸೆ.18 : ಬೊಲೆರೋ ಪಿಕಪ್ ವಾಹನ ಮತ್ತು ಖಾಸಗಿ ಬಸ್ ಡಿಕ್ಕಿಯಾಗಿ ಬೊಲೆರೋ ಪಿಕಪ್ ವಾಹನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರವಾದ ಮತ್ತು ಸುಮಾರು20 ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಹೊಳಲ್ಕೆರೆ ತಾಲ್ಲೂಕಿನ ಬಿ.ದುರ್ಗ ಬಳಿ ಭಾನುವಾರ ರಾತ್ರಿ ಸುಮಾರು 7:30 ರ ವೇಳೆಗೆ ಈ ಅಪಘಾತ ಸಂಭವಿಸಿದೆ. ದಾವಣಗೆರೆ ಕಡೆಯಿಂದ ಹೊಸದುರ್ಗ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಬಿ.ದುರ್ಗ ಬಳಿ ರಸ್ತೆಯಲ್ಲಿ ಹೋಗುತ್ತಿದ್ದ ಪಾದಚಾರಿಯನ್ನು ತಪ್ಪಿಸಲು ಹೋಗಿ ಎದುರುಗಡೆ ಬರುತ್ತಿದ್ದ ಬೊಲೇರೋ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಮೃತಪಟ್ಟ ಚಾಲಕನನ್ನು ತುಮಕೂರು ಜಿಲ್ಲೆಯ  ಚಿಕ್ಕನಾಯಕನಹಳ್ಳಿಯ ಈರಣ್ಣ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಹೊಳಲ್ಕೆರೆ ಮತ್ತು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಸ್ಥಳಕ್ಕೆ ಎಸ್.ಪಿ, ಅಡಿಷನಲ್ ಎಸ್.ಪಿ, ಡಿ.ವೈ.ಎಸ್.ಪಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜೇನು ಹುಳು ಕಡಿತ ವ್ಯಕ್ತಿ ಸಾವು

ಹಿರಿಯೂರು ತಾಲ್ಲೂಕಿನ ಆಲೂರು ಗ್ರಾಮದ ನಿವಾಸಿ ನಾಗೇಶ ಸುಮಾರು(20) ಭಾನುವಾರ ಬೆಳಿಗ್ಗೆ 07.00 ಗಂಟೆ ಸಮಯದಲ್ಲಿ ತನ್ನ ಜಮೀನು ಕೆಲಸಕ್ಕೆ ಹೋದಾಗ ಜೇನು ಹುಳಗಳು ಕಚ್ಚಿದ್ದು, ಕೂಡಲೇ ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಈ ಬಗ್ಗೆ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment